ಕಾರ್ಕಳ: ಕಾರು ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರೆ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸರ್ಕಾರಿ ಆಸ್ಪತ್ರೆಯ ಬಳಿ ಬುಧವಾರ ಸಂಜೆ ಸಂಭವಿಸಿದೆ.
ನಿಟ್ಟೆ ಕುಡಾರಿಕು ಗುಂಡಲ್ಕೆ ನಿವಾಸಿ ಯಶವಂತಿ ಶೆಟ್ಟಿ(45) ಎಂಬವರು ಮೃತಪಟ್ಟವರು.ಅವರು ಕಾರ್ಕಳದಿಂದ ತನ್ನ ಸ್ಕೂಟರ್ ನಲ್ಲಿ ಮನೆಯಾದ ಕುಡಾರಿಕು ಗುಂಡಲ್ಕೆ ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ. ಈ ಭೀಕರ ಅಪಘಾತಕ್ಕೆ ಯಶವಂತಿ ಶೆಟ್ಟಿಯವರು ಸ್ಥಳದಲ್ಲೇ ಮೃತಪಟ್ಟಿದ್ದು, ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ