ಕಾರ್ಕಳ: ತುಮಕೂರಿನಲ್ಲಿ ನವೆಂಬರ್ 8 ರಿಂದ 10 ರವರೆಗೆ ನಡೆದ ಕರ್ನಾಟಕ ರಾಜ್ಯ ಪದವಿ ಪೂರ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿದ್ಯಾರ್ಥಿ ರಾಘವೇಂದ್ರ ನಾಯಕ್ 19 ವರ್ಷದೊಳಗಿನವರ ಜಾವೆಲಿನ್ ಥ್ರೋನಲ್ಲಿ 55.94 ಮೀಟರ್ ದೂರಕ್ಕೆ ಎಸೆದು ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಇವರು ನವೆಂಬರ್ 26ರಿಂದ 28ರವರೆಗೆ ಜಾರ್ಖಂಡ್ ನ ರಾಂಚಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಪದವಿಪೂರ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.