Share this news

ಕಾರ್ಕಳ : ಅಣ್ಣನ ತಿಥಿಗೆ ಸಿದ್ಧತೆ ಮಾಡುತ್ತಿದ್ದ ಸಂದರ್ಭದಲ್ಲಿಯೇ ತಂಗಿ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಪರಪ್ಪಾಡಿ ಎಂಬಲ್ಲಿ ನಡೆದಿದೆ. ಲಲಿತಾ ಬೋಂಟ್ರ ಮೃತಪಟ್ಟ ಮಹಿಳೆ.

ನಿಟ್ಟೆ ಪರಪ್ಪಾಡಿಯ ರಾಘು ಬೋಂಟ್ರ ಎಂಬವರು ಕೆಲ ದಿನಳ ಹಿಂದೆ ಮೃತಪಟ್ಟಿದ್ದರು. ಅಣ್ಣನ ತಿಥಿಯ ಪೂರ್ವ ಸಿದ್ಧತೆಗಾಗಿ ಬಂದಿದ್ದ ತಂಗಿ ಲಲಿತಾ ಗುರುವಾರ ರಾತ್ರಿ ಅಡುಗೆ ಪಾತ್ರೆಗಳನ್ನು ತೊಳೆಯುತ್ತಿದ್ದರು. ಅದೇ ಸಂದರ್ಭದಲ್ಲಿ ಮನೆ ಹೊರಾಂಗಣದಲ್ಲಿ ಅಳವಡಿಸಲಾಗಿದ್ದ ಶಾಮಿಯಾನದ ಕಬ್ಬಿಣದ ಕಂಬ ಸ್ಪರ್ಶಿಸಿದಾಗ ವಿದ್ಯುತ್ ಅಘಾತಕ್ಕೊಳಗಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.
ಶಾಮಿಯಾನ ಅಳವಡಿಸಿದಾಗ ಅದರ ಕಬ್ಬಣದ ಕಂಬಕ್ಕೆ ಟ್ಯೂಬ್ ಲೈಟ್ ಅಳವಡಿಸಲಾಗಿ ಅದರ ಮೂಲಕ ವಿದ್ಯುತ್ ಪ್ರವಹಿಸಿ ಈ ಘಟನೆ ಸಂಭವಿಸಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *