

ಬೆಂಗಳೂರು,ಅ.26: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗಳನ್ನು ಮುಂದೂಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಜನಗಣತಿ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸುತ್ತಿರುವುದರಿಂದ ಪರೀಕ್ಷೆಗಳು ಮುಂದೂಡಿಕೆಯಾಗಲಿವೆ ಎಂಬ ವದಂತಿಗಳು ಹರಿದಾಡಿದ್ದವು. ಈ ಹಿನ್ನೆಲೆಯಲ್ಲಿ ಗೊಂದಲಕ್ಕೊಳಗಾಗಿದ್ದ ವಿದ್ಯಾರ್ಥಿಗಳಿಗೆ ಸಚಿವರು ಅಧಿಕೃತ ಮಾಹಿತಿ ನೀಡಿದ್ದಾರೆ. ಪರೀಕ್ಷೆಗಳನ್ನು ಮುಂದೂಡಿದರೆ ಮುಂದಿನ ಶೈಕ್ಷಣಿಕ ವರ್ಷದ (2027-28) ಪ್ರವೇಶಾತಿ ಪ್ರಕ್ರಿಯೆ ಹಾಗೂ ಕ್ಯಾಲೆಂಡರ್ ಮೇಲೆ ಪರಿಣಾಮ ಬೀರಲಿದ್ದು, ಯಾವುದೇ ಕಾರಣಕ್ಕೂ ವೇಳಾಪಟ್ಟಿ ಬದಲಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿರುವ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಗಳು 2027ರ ಫೆಬ್ರವರಿ 27ರಿಂದ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 22ರಿಂದ ಆರಂಭವಾಗಲಿವೆ.ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 22 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಸದ್ಯದಲ್ಲೇ ಮಂಡಳಿಯು ಅಂತಿಮ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಿದೆ.





.
.
.
.
.
.
.
.
.
.
.
.
.
.
.
.
.
.
.
.
