

ನವದೆಹಲಿ,ಅ.15: ಹಿಂದೂ ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡವರು ಕೇವಲ ಮತಾಂತರದ ಆಧಾರದ ಮೇಲೆ ಹಿಂದುಳಿದ ವರ್ಗಗಳ ಮೀಸಲಾತಿ ಸೌಲಭ್ಯವನ್ನು ಪಡೆಯಲು ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಚಂದ್ರಶೇಖರ್ ಅವರಿದ್ದ ಪೀಠವು ಈ ಮಹತ್ವದ ತೀರ್ಪು ನೀಡಿದೆ.
ಹಿಂದೂ ಧರ್ಮದಿಂದ ಇಸ್ಲಾಂ ಅಥವಾ ಇತರ ಧರ್ಮಗಳಿಗೆ ಮತಾಂತರಗೊಂಡ ವ್ಯಕ್ತಿಯೊಬ್ಬರು, ಮತಾಂತರಕ್ಕೂ ಮೊದಲು ತಮ್ಮ ಜಾತಿ ಅಥವಾ ಸಮುದಾಯದಲ್ಲಿದ್ದ ‘ಸಾಮಾಜಿಕ ಹಿಂದುಳಿದಿರುವಿಕೆ’ಯನ್ನು ಮಾತ್ರವೇ ಆಧಾರವಾಗಿಟ್ಟುಕೊಂಡು ಸಂವಿಧಾನದ ವಿಧಿ 16(4) ರ ಅಡಿಯಲ್ಲಿ ಮೀಸಲಾತಿಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡ ವ್ಯಕ್ತಿಯೊಬ್ಬರು ‘ಹಿಂದುಳಿದ ವರ್ಗಗಳ ಮುಸ್ಲಿಂ’ ಕೆಟಗರಿಯಡಿ ಮೀಸಲಾತಿ ಪಡೆಯಲು ಅರ್ಹರಾಗುವುದಿಲ್ಲ ಎಂದು ಈ ಹಿಂದೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಹಿಂದೂ ಸಾಮಾಜಿಕ ವ್ಯವಸ್ಥೆಯಲ್ಲಿರುವ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಧರ್ಮ ಮತಾಂತರದ ಮೂಲಕ ಮತ್ತೊಂದು ಧರ್ಮಕ್ಕೆ ವರ್ಗಾಯಿಸಲು ಸಾಧ್ಯವಿಲ್ಲ. ಮುಸ್ಲಿಂ ಸಮುದಾಯದಲ್ಲಿನ ಮೀಸಲಾತಿ ಸೌಲಭ್ಯಗಳು (ಉದಾಹರಣೆಗೆ ಲ್ಯಾಬ್ಬಾಯಿ, ರಾವುತರ್, ಮರಕ್ಕಯರ್ ಮುಂತಾದವು) ಹುಟ್ಟಿನ ಆಧಾರದ ಮೇಲೆ ನಿರ್ಧಾರವಾಗುತ್ತವೆಯೇ ಹೊರತು, ಕೇವಲ ಧರ್ಮ ಮತಾಂತರದಿAದ ತಾನಾಗಿಯೇ ಸಿಗುವುದಿಲ್ಲ ಎಂದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.






.
.
.
.
.
.
.
.
.
.
.
.
.
.
.
.
.
.
.
.
