
ಬೆಳಗಾವಿ,ಡಿ.10 : ಆರ್‌ಟಿಓ ಕಚೇರಿಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವAತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಅಂತಹ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.
ಅವರು ಬೆಳಗಾವಿಯ ಸುವಣ್ ಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ನಲ್ಲಿ ಉಮಾಶ್ರೀವರ ಚುಕ್ಕೆ ಗುರುತಿನ ಪ್ರಶ್ನೆಯ ಮೇಲಿನ ಚರ್ಚೆಯಲ್ಲಿ ಮಾತನಾಡಿ, ಆರ್‌ಟಿಓ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ. ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿ /ಸ್ವೀಕೃತಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಕಡ್ಡಾಯವಾಗಿ ವಹಿಗಳನ್ನು ವಿಷಯ ನಿರ್ವಾಹಕರು ನಿರ್ವಹಿಸುವುದು. ಅಧೀಕ್ಷಕರುಗಳು ಪ್ರತಿ ವಾರಕ್ಕೊಮ್ಮೆ ವಹಿಗಳನ್ನು ಪರಿಶೀಲಿಸುವುದು ಹಾಗೂ ತಿಂಗಳಿಗೊಮ್ಮೆ ಮೇಜು ತಪಾಸಣೆಯನ್ನು ನಡೆಸಿ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸುವಂತೆ ಸಾರಿಗೆ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ. ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಯಾವುದೇ ರೀತಿಯ ಅವಕಾಶ ಕಲ್ಪಿಸದಂತೆ ಕರ್ತವ್ಯ ನಿರ್ವಹಿಸುವಂತೆ ಒಂದು ವೇಳೆ ಯಾವುದೇ ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬAದಲ್ಲಿ ಆಯಾ ಕಚೇರಿಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದ್ದೇವೆ ಎಂದರು.
ಇದಲ್ಲದೇ ಸಾರ್ವಜನಿಕರು ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಕಛೇರಿಗೆ ಭೇಟಿ ನೀಡಿ ಅವರ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದು ಆರ್ಟಿಓ ಕಚೇರಿಗಳ ಆವರಣದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ ಹಾಗೂ ಮಧ್ಯವರ್ತಿಗಳ ಹಾವಳಿ ನಿಯಂತ್ರಣದ ಸಲುವಾಗಿ ಸಾರಿಗೆ ಇಲಾಖೆಯಲ್ಲಿನ 52 ಸೇವೆಗಳನ್ನು ಆನ್ ಲೈನ್ ಮುಖಾಂತರ ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
.
.
