ಕಾರ್ಕಳ : ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆಗೆ ನ. 30 ಕೊನೆಯ ದಿನವಾಗಿದೆ ಎಂದು ಕೆಎಂಸಿ ಮಣಿಪಾಲದ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಅವರು ಗುರುವಾರ ಕಾರ್ಕಳ ಪ್ರಕಾಶ್ ಹೊಟೇಲ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಆರೋಗ್ಯ ಕಾರ್ಡ್ ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಮಣಿಪಾಲ್ ಆರೋಗ್ಯಕಾರ್ಡಿನ ಧ್ಯೇಯ ವಾಕ್ಯ.
ಮಣಿಪಾಲ್ ಆರೋಗ್ಯ ಕಾರ್ಡ್‌ದಾರರು ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ 50% ರಿಯಾಯಿತಿ, ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ 25% ರಿಯಾಯಿತಿ, ರೇಡಿಯಾಲಜಿ , ಹೊರರೋಗಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ 20% ರಿಯಾಯಿತಿ, ಡಯಾಲಿಸಿಸ್‌ನಲ್ಲಿ ₹ 100 ರಿಯಾಯಿತಿ, ಆಸ್ಪತ್ರೆಯ ಔಷಧಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಜನರಲ್ ವಾರ್ಡ್‌ನಲ್ಲಿ ಒಳರೋಗಿಗಳ ಬಿಲ್‌ಗಳಲ್ಲಿ (ಕಾನ್ಸುಮಬೆಲ್ಸ್ ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) 25% ರಿಯಾಯಿತಿ ಸೌಲಭ್ಯವಿದೆ.
ಮಣಿಪಾಲ್ ಆರೋಗ್ಯ ಕಾರ್ಡ್ 2024ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 350 / -, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 900/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 600/-, ಕುಟುಂಬಕ್ಕೆ ₹ 950/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹ 1100/- ಆಗಿರುತ್ತದೆ.
ಕಾರ್ಡ್‌ದಾರರು ಕಸ್ತೂರ್ಬಾ ಆಸ್ಪತ್ರೆ-ಮಣಿಪಾಲ, ಡಾ.ಟಿಎಂಎ ಪೈ ಆಸ್ಪತ್ರೆ-ಉಡುಪಿ, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ-ಕಾರ್ಕಳ, ಕೆಎಂಸಿ ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ-ಕಟೀಲು, ಮಣಿಪಾಲ ಆಸ್ಪತ್ರೆ-ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲ್ಲಿನ ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿಗಳು ಮತ್ತು ಹೆಚ್ಚಿನ ಮಾಹಿತಿಗಾಗಿ, www.manipalhealthcard.com ಗೆ ಭೇಟಿ ನೀಡಿ ಅಥವಾ 9980854700 / 08202923748 ಅನ್ನು ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು.
ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ, ಮಾರುಕಟ್ಟೆ ವಿಭಾಗದ ಸಹಾಯಕ ವ್ಯವಸ್ಥಾಪಕ ಆಶ್ಲೋನ್ ಹಾಗೂ ಪ್ರತಿನಿಧಿಯಾದ ಸಂದೀಪ್ ಉಪಸ್ಥಿತರಿದ್ದರು.
2024ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:
ನಾರಾಯಣ ನಾಯಕ್ – 9964684643
ಸೈಂಟ್ ಮಿಲಾಗ್ರೆಸ್ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿಮಿಟೆಡ್ ಕಾರ್ಕಳ ಮತ್ತು ಅದರ ಎಲ್ಲಾ ಶಾಖೆಗಳು – 8884414389
ಜನಹಿತ ಸೌಹಾರ್ದ ಸಹಕಾರಿ ಸಂಘ, ಕಾರ್ಕಳ – 988041149
ಹರೀಶ್ ಬಿ ಆಚಾರ್ಯ – 9945857561
ಪ್ರಜ್ವಲ್ ಕುಲಾಲ್ – 8970801349
ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.