Share this news

ಮಂಗಳೂರು: ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಬದಲಿಗೆ ಕ್ಯಾನ್ಸರ್ ಪ್ರತಿಬಂಧಕ ಎಂದು ಪ್ರತಿಷ್ಠಿತ ವಿವಿ ಅಧ್ಯಯನ ವರದಿ ಹೇಳಿದೆ. ಇದರಿಂದಾಗಿ ಕರಾವಳಿ, ಮಲೆನಾಡು ಭಾಗದ ಅಡಿಕೆ ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ.

ಅಡಿಕೆ ಕ್ಯಾನ್ಸರ್ ಕಾರಕ ಎಂಬ ಇಂಟರ್ ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ ಮಾಹಿತಿ ಆಧಾರಿತ ವಿಶ್ವ ಅರೋಗ್ಯ ಸಂಸ್ಥೆಯ ವರದಿ ಅಡಿಕೆ ಬೆಳೆಗಾರರಲ್ಲಿ ತೀವ್ರ ಆತಂಕ ಸೃಷ್ಟಿಸಿತ್ತು. ಆದರೆ, ಇದೀಗ ರಾಜ್ಯದ ಪ್ರತಿಷ್ಠಿತ ವಿವಿಯೊಂದರ ಅಧ್ಯಯನ ವರದಿ ಭಿನ್ನವಾದುದನ್ನೇ ಹೇಳಿದೆ. ನಿಟ್ಟೆ ವಿವಿಯ ವಿಜ್ಞಾನಿ ಪ್ರ. ಇಡ್ಯಾ ಕರುಣಾಸಾಗರ್ ಮತ್ತವರ ತಂಡ ಮಹತ್ವದ ಸಂಶೋಧನೆ ನಡೆಸಿದ್ದು, ಅಡಿಕೆ ಕ್ಯಾನ್ಸರ್ ಕಾರಕವಲ್ಲ. ಬದಲಿಗೆ ಕ್ಯಾನ್ಸರ್ ಪ್ರತಿಬಂಧಕ ಅಂಶ ಅಡಿಕೆಯಲ್ಲಿದೆ ಎಂದು ತಿಳಿಸಿದೆ. ಅಡಿಕೆ ರಸ ಕ್ಯಾನ್ಸರ್ ಕಣಗಳ ಬೆಳವಣಿಗೆಯನ್ನು ಪ್ರತಿಬಂಧಿಸುತ್ತದೆ ಎಂಬುದನ್ನು ಪತ್ತೆ ಮಾಡಿರುವುದಾಗಿ ನಿಟ್ಟೆ ವಿವಿಯ ವಿಜ್ಞಾನಿಗಳ ತಂಡ ಪ್ರತಿಪಾದಿಸಿದೆ.

ನಿಟ್ಟೆ ವಿವಿಯ ವಿಜ್ಞಾನಿಗಳ ತಂಡದ ಸಂಶೋಧನೆಯನ್ನು ಪರಿಗಣಿಸಿ ಅಡಿಕೆಯ ಬಗ್ಗೆ ಸಮಗ್ರ ಅಧ್ಯಯನವಾಗಬೇಕು ಎಂದು ಕ್ಯಾಂಪ್ಕೋ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

 

Leave a Reply

Your email address will not be published. Required fields are marked *