ಬೆಂಗಳೂರು : ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಸಂಕಷ್ಟದಲ್ಲಿರುವ ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ ನೀಡಿದೆ. ಜೊತೆಗೆ ತನಿಖೆ ಮುಂದುವರಿಸಲು ಎಸ್ಐಟಿ ಹೈಕೋರ್ಟ್ ಸೂಚನೆ ನೀಡಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.
ಪ್ರೀತಮ್‌ಗೌಡ ಪರ ವಾದಕ್ಕೆ ಎಸ್ ಪಿಪಿ ರವಿವರ್ಮ ಕುಮಾರ್ ಆಕ್ಷೇಪ ವ್ಯಕ್ತಪಡಿಸಿ, ಸಂತ್ರಸ್ತೆಯ ವಿಡಿಯೋ ಹಂಚಿದ ಗಂಭೀರ ಆರೋಪವಿದೆ. ಹೀಗಾಗಿ ಮಧ್ಯಂತರ ಆದೇಶ ನೀಡದಂತೆ ಮನವಿ ಮಾಡುತ್ತೇನೆ. ಜನ ಮಾತನಾಡಿಕೊಳ್ಳುತ್ತಿರುವ ಕಾರಣಕ್ಕೆ ದೂರು ನೀಡಿದ್ದಾರೆ. ಸರ್ಕಾರದವರೇ 3 ಲಕ್ಷ ಪೆನ್ ಡ್ರೈವ್ ಹಂಚಿದ್ದಾರೆಂದು ಜನ ಮಾತನಾಡುತ್ತಿದ್ದಾರೆ ಎಂದರು. ಹಾಗಿದ್ದರೆ ಸರ್ಕಾರದವರ ಮೇಲೂ ಎಫ್ಐಆರ್ ಮಾಡುತ್ತಾರಾ? ಎಂದು ಪ್ರೀತಮ್ ಗೌಡ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು. ವಿಡಿಯೋ ಹಂಚುವುದರಿಂದ ಮಹಿಳೆಯ ಗೌರವಕ್ಕೆ ಹಾನಿಯಾಗುತ್ತೆ. ವಿಡಿಯೋ ಹಂಚಿಕೆಯೂ ಗಂಭೀರ ಅಪರಾಧವೆಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
