ಕಾರ್ಕಳ: ತೋಟಗಾರಿಕೆ ಇಲಾಖೆ ಕಾರ್ಕಳ, ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘ, ಗ್ರಾಮ ಪಂಚಾಯತ್ ವರಂಗ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಅಂಡಾರು ಇವರ ಸಯುಕ್ತ ಆಶ್ರಯದಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಲ್ಲಿ ಸಮಗ್ರ ರೋಗ ಹಾಗೂ ಕೀಟ ನಿರ್ವಹಣೆ ಕುರಿತ ವಿಚಾರ ಸಂಕಿರಣ ನವಂಬರ್ 15 ರಂದು ಬೆಳಗ್ಗೆ 9 ಗಂಟೆಯಿಂದ ಅಂಡಾರು ಕರಿಯಾಲು ಶ್ರೀ ವಿಠಲ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.