
ಕಾರ್ಕಳ, ಆ.08: ಸರ್ಕಾರ ಹಾಗೂ ಜನರ ನಡುವಿನ ಕೊಂಡಿಯಾಗಿ ಅಧಿಕಾರಿಗಳು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು. ಕೇವಲ ಬುದ್ದಿವಂತಿಕೆಯಿAದ ಕೆಲಸ ಮಾಡಿದರೆ ಸಾಲದು ಇದರ ಜೊತೆಗೆ ತಳಮಟ್ಟದ ಜನರಿಗೆ ನ್ಯಾಯ ಒದಗಿಸಲು ಹೃದಯುವಂತಿಕೆಯಿಂದ ಕೆಲಸ ಮಾಡಬೇಕೆಂದು ಆರೋಗ್ಯ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು,ಟಿ ಖಾದರ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಅವರು ಶನಿವಾರ ಕಾರ್ಕಳದ ರೆಂಜಾಳದಲ್ಲಿ ಭೂಕುಸಿತದ ಪ್ರದೇಶವನ್ನು ಪರಿಶೀಲನೆ ಮಾಡಿ ಬಳಿಕ ಕಾರ್ಕಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಪ್ರಮುಖವಾಗಿ ಶಾಲೆಗಳ ಅಪಾಯಕಾರಿ ಕಟ್ಟಡಗಳು ಹಾಗೂ ಆವರಣ ಗೋಡೆಯ ಕುರಿತು ಡಿಡಿಪಿಐ ಬಳಿ ಮಾಹಿತಿ ಪಡೆದುಕೊಂಡು ಕೈಗೊಂಡ ಕ್ರಮದ ಕುರಿತು ಪ್ರಶ್ನಿಸಿದರು. ಕಾರ್ಕಳ ತಾಲೂಕಿನಲ್ಲಿ ಒಟ್ಟು 348 ಅಪಾಯಕಾರಿ ಶಾಲಾ ಕೊಠಡಿಗಳಿದ್ದು ಅವುಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಮುಚ್ಚಲಾಗಿದೆ ಹಾಗೂ 150 ಶಾಲೆಗಳ ಆವರಣ ಗೋಡೆ ಅಪಾಯಕಾರಿ ಸ್ಥಿತಿಯಲ್ಲಿದ್ದು ಈ ಕುರಿತು ಕ್ರಮಕೈಗೊಳ್ಳಲಾಗಿದೆ ಎಂದರು.
ರಸ್ತೆ ಬದಿಯ ಅಪಾಯಕಾರಿ ಮರಗಳ ಕುರಿತು ಶಾಸಕ ಸುನಿಲ್ ಕುಮಾರ್ ವಿಷಯ ಪ್ರಸಾಪಿಸಿ ಹೆಬ್ರಿಯಲ್ಲಿ ಮರ ಬಿದ್ದು ಅಮಾಯಕ ಜೀವ ಬಲಿಯಾಗಿದೆ ಇದಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷö್ಯವೇ ಕಾರಣ. ಆದ್ದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದರು.
ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳನ್ನು ಹಿಡಿಯುವ ವಿಚಾರದಲ್ಲಿ ಪುರಸಭೆ ಕೈಗೊಂಡ ಕ್ರಮದ ಕುರಿತು ಮಾಹಿತಿ ಕೇಳಿದರು. ಇದಕ್ಕೆ ಉತ್ತರಿಸಿದ ಮುಖ್ಯಾಧಿಕಾರಿ ನಾಯಿ ಹಿಡಿಯಲು ಪರವಾನಗಿ ಪಡೆದ ಸಂಸ್ಥೆಗಳಿಗೆ ಮಾತ್ರ ಅವಕಾಶವಿದ್ದು ಟೆಂಡರ್ ಕರೆದರೂ ಯಾರೂ ಮುಂದೆ ಬರುತ್ತಿಲ್ಲ ಎಂದರು. ಈ ಕುರಿತು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಸಾಕಷ್ಟು ಬಾರಿ ಟೆಂಡರ್ ಕರೆದರೂ ಯಾರೂ ಬರುತ್ತಿಲ್ಲ ಎಂದಾಗ, ನಿಮ್ಮಲ್ಲಿರುವ ಪೌರ ಕಾರ್ಮಿಕರಿಗೆ ತರಬೇತಿ ನೀಡಿ ನಾಯಿ ಹಿಡಿಯುಂತೆ ಸೂಚಿಸಿದರು.
ಇನ್ನುಳಿದಂತೆ ಕೃಷಿ, ತೋಗಾರಿಕೆ, ಪಶು ಸಂಗೋಪನೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಪ್ರಗತಿ ಕುರಿತ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶಾಸಕ ಸುನಿಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ ಗಫೂರ್, ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಉಡುಪಿ ಎಸ್ಪಿ ಹರಿರಾಮ್ ಶಂಕರ್ ಉಪಸ್ಥಿತರಿದ್ದರು.




.
.
.
.
.
.
.
.
.
.
.
.
.
.
.
.
.
.
.
.
