
ನವದೆಹಲಿ,ಏ.23: ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಲಿದೆ ಎನ್ನುವು ಸುದ್ದಿಗಳು ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಇದು ಶುದ್ಧ ಸುಳ್ಳು ಸುದ್ದಿಯಾಗಿದ್ದು ದರ ಏರಿಕೆಯ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಮಧ್ಯ ಪ್ರಾಚ್ಯ ಸಂಘರ್ಷದ ನಡುವೆಯೂ ಸರಕಾರವು ಇಂಧನ ದರ ಏರಿಸುವ ಯಾವುದೇ ಪ್ರಸ್ತಾವನೆಯನ್ನು ಹೊಂದಿಲ್ಲ. ದೇಶದ ನಾಗರಿಕರಲ್ಲಿ ಅನಗತ್ಯ ಭಯ ಮತ್ತು ಆತಂಕವನ್ನು ಸೃಷ್ಟಿಸಲು ಇಂತಹ ಸುಳ್ಳು ಸುದ್ದಿಗಳು ಹರಡಲಾಗುತ್ತಿದೆ, ಈ ಸುಳ್ಳು ಸುದ್ದಿಗೆ ಕಿವಿಗೊಡದಂತೆ ಸಚಿವಾಲಯವು ತಿಳಿಸಿದೆ. ಕಳೆದ 4 ವರ್ಷಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡದ ವಿಶ್ವದ ಏಕೈಕ ದೇಶ ಭಾರತವಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ತೀವ್ರವಾಗಿ ಏರಿಕೆ ಕಂಡಿದ್ದರೂ, ಭಾರತ ಸರ್ಕಾರ ಮತ್ತು ತೈಲ ಕಂಪನಿಗಳು ತೈಲ ದರ ಹೆಚ್ಚಳ ಮಾಡದೇ ಭಾರತೀಯ ನಾಗರಿಕರಿಗೆ ಹೊರೆಯಾಗದಂತೆ ರಕ್ಷಿಸಿವೆ. ಜಾಗತಿಕ ಮಟ್ಟದಲ್ಲಿ ಕಚ್ಚಾತೈಲ ದರ ಹೆಚ್ಚಳದ ನಡುವೆಯೂ ಭಾರತದ ಇಂಧನ ಮಾರುಕಟ್ಟೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಪೆಟ್ರೋಲಿಯಂ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಆದ್ದರಿಂದ ಸಾರ್ವಜನಿಕರು ಇಂತಹ ದಾರಿ ತಪ್ಪಿಸುವ ಸುದ್ದಿಗಳನ್ನು ನಂಬಬಾರದು ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಮನವಿ ಮಾಡಿದೆ.


.
.
.
.
.
.
.
.
.
.
.
.
.
.
.
.
.
.
.
.
