


ಕಾರ್ಕಳ, ಆ 08: ಕಾರ್ಕಳ ಹಾಗೂ ಹೆಬ್ರಿ ಬಂಟರ ಸಂಘದ ಆಶ್ರಯದಲ್ಲಿ ಆಗಸ್ಟ್ 10 ರಂದು ಭಾನುವಾರ ಆಟಿಡೊಂಜಿ ಕೆಸರ್ದ ಕೂಟ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕಾರ್ಕಳ ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಬಂಟರ ಸಂಘದ ಸಂಚಾಲಕ ವಿಜಯ ಶೆಟ್ಟಿ ಹೇಳಿದರು.
ಕಾರ್ಕಳ ಹೊಟೇಲ್ ಪ್ರಕಾಶ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಬೆಳಗ್ಗೆ 9.30 ಕ್ಕೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿ.ಎ ಅಶೋಕ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಂಗಳೂರು ಬಂಟರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ಬಂಟರ ಸಂಘದ ಉಪಾಧ್ಯಕ್ಷೆ ಕಾಂತಿ ಶೆಟ್ಟಿ, ಉಮೇಶ್ ಕುಮಾರ್ ಶೆಟ್ಟಿ, ಮುನಿಯಾಲು ಉದಯ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ನಿವೃತ್ತ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಸುಜಯ ಕುಮಾರ್ ಶೆಟ್ಟಿ ಕಾರ್ಕಳ , ನ್ಯಾಯವಾದಿಗಳಾದ ಮಣಿರಾಜ ಶೆಟ್ಟಿ, ಸುನಿಲ್ ಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಎಸ್ಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಬಂಟ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ನಿವೃತ್ತ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ನ್ಯಾಯವಾದಿ ಸುನಿಲ್ ಕುಮಾರ್ ಶೆಟ್ಟಿ, ರವಿ ಶೆಟ್ಟಿ ಕುಕ್ಕುಂದೂರು, ಪ್ರಶಾಂತ್ ಶೆಟ್ಟಿ, ಅವಿನಾಶ್ ಶಟ್ಟಿ, ಪೂರ್ಣಿಮಾ ಎನ್ ಹೆಗ್ಡೆ, ಶುಭಾ ಕಡಂಬ ಉಪಸ್ಥಿತರಿದ್ದರು


