ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಇದುವರೆಗೆ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ವಿಫಲವಾಗಿದೆ.ಜನರಿಗೆ ಉಚಿತ ಗ್ಯಾರಂಟಿಯ ಆಮಿಷ ತೋರಿಸಿ ಅಧಿಕಾರಕ್ಕೆ ಬಂದ ಸರಕಾರ ಈಗ ಉಚಿತ ಯೋಜನೆಗಳಿಗಾಗಿ ಹಣ ಹೊಂದಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ.
ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗ ಅಭಿವೃದ್ಧಿಗೆ ಮೀಸಲಿರಿಸಿದ್ದ 11 ಸಾವಿರ ಕೋಟಿ ಹಣವನ್ನು ತನ್ನ ಗ್ಯಾರಂಟಿ ಯೋಜನೆಗಳಿಗೆ ಬಳಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ಅನ್ಯಾಯ ಮಾಡಿದೆ, ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟಿ ಕೋಟಿ ರೂಪಾಯಿಗಳನ್ನೂ ದೋಚಿ, ಇದೀಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಗ್ಯಾರಂಟಿ ನೆಪದಲ್ಲಿ ಬಡವರನ್ನು ಸುಲಿಗೆ ಮಾಡುತ್ತಿದೆ.
ತೈಲ ಬೆಲೆ ಏರಿಕೆಯಿಂದ ದೈನಂದಿನ ವಸ್ತುಗಳು ಹಾಗೂ ದಿನಸಿ ಸಾಮಾಗ್ರಿಗಳ ಬೆಲೆ ಗಗನಕ್ಕೇರಿ ಬಡವರ ಬದುಕು ದುಸ್ತರವಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ ,ತೈಲ ಬೆಲೆ ಏರಿಕೆ ವಿರುದ್ಧ ಕಾರ್ಕಳ ಬಿಜೆಪಿ ವತಿಯಿಂದ ಜೂನ್ 21 ರಂದು ಬೆಳಗ್ಗೆ 11ಗೆ ಕಾರ್ಕಳ ಅನಂತಶಯನ ವೃತ್ತದಿಂದ ಬಸ್ ನಿಲ್ದಾಣದವರೆಗೆ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











