ಬೆಂಗಳೂರು: ಲೋಕಸಭಾ ಚುನಾವಣೆಯ ಅಂತಿಮ ಹಂತದ ಚುನಾವಣೆ ಜೂ 1 ರಂದು ಮುಕ್ತಾಯವಾಗಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಜೂ. 4 ಹಾಗೂ 5 ರಂದು ರಾಜ್ಯಾದ್ಯಂತ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೆಕ್ಷನ್144 ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
ಈ ಸಂದರ್ಭದಲ್ಲಿ ಯಾವುದೇ ಮೆರವಣಿಗೆ, ಸಭೆ, ಸಮಾರಂಭಗಳು,ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ಪರ ಮೆರವಣಿಗೆ, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ ಎಂದು ಆದೇಶಿಸಲಾಗಿದೆ.