ಕಾರ್ಕಳ:ಮಾಳ-ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘದ ಕೆರ್ವಾಶೆ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ನಾಳೆ (ಮೇ 17) ಕೆರ್ವಾಶೆ ಗ್ರಾಮ ಪಂಚಾಯತ್ ಹಿಂಭಾಗದ ಸಂಘದ ಕೆರ್ವಾಶೆ ಶಾಖೆಯಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ವಿ ಸುನಿಲ್ ಕುಮಾರ್ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ.
ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಉದಯಕುಮಾರ್ ಶೆಟ್ಟಿ ಭದ್ರತಾ ಕೊಠಡಿ ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಗಣಕಯಂತ್ರ ವಿಭಾಗವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾ. ಗಣೇಶ್ ಕಾರ್ಣಿಕ್, ಕೆರ್ವಾಶೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನೀತಾ ಪೂಜಾರಿ ಹಾಗೂ ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯ ಇವರು ಉಪಸ್ಥಿತರಿರಲಿದ್ದಾರೆ ಎಂದು ಸಂಘದ ಕಾರ್ಯನಿರ್ವಹಣಾಧಿಕಾರಿ ನವೀನ್ ಎಂ.ಸುವರ್ಣ ತಿಳಿಸಿದ್ದಾರೆ.
ನಿರ್ದೇಶಕ ಮಂಡಳಿ:
ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ನಾಗೇಶ್ ಭಂಡಾರಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ನಿರ್ದೇಶಕರಾಗಿ ಅನಿಲ್ ಎಸ್ ಪೂಜಾರಿ, ಎಚ್. ವೆಂಕಟೇಶ್ ಗೋರೆ, ಅಕ್ಷಯ್ ಕುಮಾರ್, ಸುಧಾಕರ ಡೋಂಗ್ರೆ, ನಂದುಗೋಪನ್ ಕೆ. ಆರ್, ಸುಮಿತ್ ಸಾಲ್ಯಾನ್, ಶ್ರೀಮತಿ ಗೀತಾ ಎಸ್ ಪಾಟ್ಕರ್, ಶ್ರೀಮತಿ ಉಷಾ ಶೆಟ್ಟಿ, ರಾಜೇಶ್ವರ್ ನಾಯ್ಕ್, ಅಣ್ಣಿ ಪರವ ಕಾರ್ಯನಿರ್ವಹಿಸುತ್ತಿದ್ದಾರೆ.
ಸಹಕಾರ ಸಂಘಗಳ ವಲಯ ಮೇಲ್ವಿಚಾರಕರಾಗಿ ಜಯಂತ್ ಕುಮಾರ್, ವೃತ್ತಿಪರ ನಿರ್ದೇಶಕರಾಗಿ ಜಯರಾಮ ಬಂಗೇರ ಹಾಗೂ ಶಾಖಾ ವ್ಯವಸ್ಥಾಪಕರಾಗಿ ಜಯ ಕುಮಾರ್ ಮತ್ತು ಸಿಬ್ಬಂದಿ ವರ್ಗ ಸಂಘದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ.