
ಕಾರ್ಕಳ: ನ. 21 ರಂದು 33ಕೆವಿ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅಂದು 220/110/11 ಕೆವಿ ಕೇಮಾರ್ ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಬಜಗೋಳಿ, ಹೊಸ್ಮಾರು, ಮಿಯ್ಯಾರು, ಕಾರ್ಕಳ ಎಕ್ಸ್ ಪ್ರೆಸ್ಟ್ ಫೀಡರ್ ಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದು.
ಆದ್ದರಿಂದ ಕಾರ್ಕಳ ತಾಲೂಕಿನ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ಮಿಯ್ಯಾರು, ರೆಂಜಾಳ, ಬೊರ್ಕಟ್ಟೆ, ರಾಮೇರಗುತ್ತು, ಕಾಜರಬೈಲು, ಅಡ್ಕರಪಲ್ಕೆ, ಕುರ್ಕಲ್ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಕಳತ್ರಪಾದೆ, ಮಂಜಡ್ಕ, ಮಿಯ್ಯಾರು ಇಂಡಸ್ಟ್ರಿಯಲ್ ಏರಿಯಾ, ಪುಲ್ಕೇರಿ ಬೈಪಾಸ್, ಜೋಡುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

