ಕಾರ್ಕಳ: ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ದೀಪೋತ್ಸವದ ಅಂಗವಾಗಿ ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡಲು ಕೇವಲ ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕು ಎನ್ನುವ ಮೂಲಕ ಕೋಮುದ್ವೇಷ ಹರಡಲು ಯತ್ನಿಸಿದ ಆರೋಪದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ರಮೇಶ್ ಶೆಟ್ಟಿ ತೆಳ್ಳಾರು ವಿರುದ್ಧ ಕಾರ್ಕಳ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ.
ರಮೇಶ ಶೆಟ್ಟಿ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲಾದ ಬೆನ್ನಲ್ಲೇ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಸರ್ಕಾರ ಹಾಗೂ ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ಹೊರಹಾಕಿದ್ದು, ರಮೇಶ್ ವಿರುದ್ಧದ ಪ್ರಕರಣ ಕೈಬಿಡದಿದ್ದರೆ ಪ್ರತಿಭಟನೆ ನಡೆಸಬೇಕಾದೀತು ಎಂದು ಎಚ್ಚರಿಕೆ ನೀಡಿವೆ
































































































