ನವದೆಹಲಿ:ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು ರಾಷ್ಟ್ರೀಯ ಆರೋಗ್ಯ ವಿಮಾ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ 5 ಲಕ್ಷ ರೂ.ಗಳವರೆಗೆ ಉಚಿತ ವೈದ್ಯಕೀಯ ರಕ್ಷಣೆಯನ್ನು ನೀಡುತ್ತದೆ.
ಈ ಆಯುಷ್ಮಾನ್ ಆರೋಗ್ಯ ಸೇವೆಯನ್ನು ಸುಧಾರಿಸುವತ್ತ ಹೆಜ್ಜೆಯಿಟ್ಟಿದ್ದು ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಆಯುಷ್ಮಾನ್ ಅಪ್ಲಿಕೇಶನ್ ಮೂಲಕ ಆಯುಷ್ಮಾನ್ ಕಾರ್ಡ್ ಪಡೆಯಬಹುದಾಗಿದೆ.
ಕೇಂದ್ರ ಸರ್ಕಾರವು ಕಳೆದ 2018ರ ಸೆಪ್ಟೆಂಬರ್ 23 ರಂದು ಆಯುಷ್ಮಾನ್ ಭಾರತ್ PM-JAY ಅನ್ನು ಪ್ರಾರಂಭಿಸಿತು. ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (NHA) ರಚಿಸಿದ ಈ ಯೋಜನೆಯು ದೇಶಾದ್ಯಂತ ಸಾರ್ವಜನಿಕ ಮತ್ತು ಪಟ್ಟಿ ಮಾಡಲಾದ ಖಾಸಗಿ ಆಸ್ಪತ್ರೆಗಳಲ್ಲಿ ನಗದುರಹಿತ ಚಿಕಿತ್ಸೆಯನ್ನು ಒದಗಿಸುತ್ತದೆ. ಈ ಯೋಜನೆಯಡಿಯಲ್ಲಿ, 5 ಲಕ್ಷ ರೂ.ಗಳವರೆಗೆ ವೈದ್ಯಕೀಯ ರಕ್ಷಣೆಯನ್ನು ನೀಡಲಾಗುತ್ತದೆ.