Share this news

ಕಾರ್ಕಳ ಫೆ.25: ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರ. ಬಡವರ ಬದುಕಿಗೆ ಚೈತನ್ಯ ತುಂಬಿಸುವ ನಿಟ್ಟಿನಲ್ಲಿ ಪಂಚ ಗ್ಯಾರಂಟಿಯ ಮೂಲಕ ವಾರ್ಷಿಕ 52 ಸಾವಿರ ಕೋಟಿ ಹಣವನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಯೋಜನೆಗಳಿಗೂ ನಮ್ಮ ಸರ್ಕಾರ ಅನುದಾನ ನೀಡುವ ಮೂಲಕ ಜನಪರ ಆಡಳಿತ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಫೆ.25 ರಂದು ಬುಧವಾರ ಕಾರ್ಕಳದ ನೂತನ ಅಂಬೇಡ್ಕರ್ ಸಭಾ ಭವನ ಹಾಗೂ ಕಿಸಾನ್ ಸಭಾ ಸಭಾಂಗಣವನ್ನು ಉದ್ಘಾಟಿಸಿ ನಂತರ ಕಾರ್ಕಳದ ಕುಕ್ಕುಂದೂರಿನ ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆಯ 34ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

 

ಮುಂದಿನ ವರ್ಷ ನಡೆಯಲಿರುವ ಕಾರ್ಕಳದ ಬಾಹುಬಲಿ ಮಸ್ತಕಾಭಿಷೇಕಕ್ಕೆ ಅನುದಾನ ಬಿಡುಗಡೆಗೆ ಈಗಾಗಲೇ ಮನವಿ ಸಲ್ಲಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರದ ಕಡೆಯಿಂದ ಎಲ್ಲಾ ರೀತಿಯ ಸಹಾಯ ಮಾಡುವ ಭರವಸೆ ನೀಡಿದರು.ಕಾರ್ಕಳದಲ್ಲಿ ಕಿಸಾನ್ ಸಭಾ ಆರಂಭಿಸಿ ಬಡವರ ಶೋಷಿತ ನಿರ್ಗತಿಕ ಮಕ್ಕಳಿಗೆ ಶಿಕ್ಷಣ ಕೊಡುತ್ತಿರುವ ಮೊಯ್ಲಿಯವರ ಸಾಧನೆಯ ಬಗ್ಗೆ ಕೊಂಡಾಡಿದರು. ಸಮಾಜದ ಹಿಂದುಳಿದ ಹಾಗೂ ದಲಿತ ವರ್ಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಶೋಷಿತ ಸಮಾಜಕ್ಕೆ ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರö್ಯ ಸಿಗದ ಹೊರತು ರಾಜಕೀಯ ಸ್ವಾತಂತ್ರö್ಯಕ್ಕೆ ಅರ್ಥವಿಲ್ಲ ಎನ್ನುವ ಅಂಬೇಡ್ಕರ್ ಮಾತು ಅಕ್ಷರಶಃ ನಿಜವಾಗಿದೆ, ಈ ನಿಟ್ಟಿನಲ್ಲಿ ಶೋಷಿತರ ಪರವಾಗಿ ನಮ್ಮ ಸರ್ಕಾರ ನಿಲ್ಲುತ್ತದೆ ಎಂದು ಸಿದ್ಧರಾಮಯ್ಯ ಹೇಳಿದರು.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿö್ಮÃ ಹೆಬ್ಬಾಳ್ಕರ್ ಮಾತನಾಡಿ, ಸಿದ್ಧರಾಮಯ್ಯನವರ ಸರ್ಕಾರ ಅಭಿವೃದ್ಧಿಪರ ಸರ್ಕಾರ. ಉಡುಪಿ ಜಿಲ್ಲೆ ಶಿಕ್ಷಣದಲ್ಲಿ ಅತ್ಯಂತ ಮುಂಚೂಣಿಯಲ್ಲಿದೆ. ಅಭಿವೃದ್ಧಿ ಎಂದರೆ ರಸ್ತೆ, ನೀರು, ವಸತಿ ಯೋಜನೆಯಲ್ಲ ಬದಲಾಗಿ ಬಡವರ ಬದುಕು ಕಟ್ಟಿಕೊಳ್ಳುವುದು ನಿಜವಾದ ಅಭಿವೃದ್ಧಿ ಎಂದರು.ಉಡುಪಿ ಜಿಲ್ಲೆಯಲ್ಲಿ ನಾವು(ಕಾಂಗ್ರೆಸ್) ಗೆಲ್ಲುವುದಿಲ್ಲ. ಆದರೆ ರಾಜ್ಯದಲ್ಲಿ ಅತ್ಯಧಿಕ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಲ್ಲಿ ಉಡುಪಿ ಜಿಲ್ಲೆಯವರೇ ಮುಂಚೂಣಿಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.
ಶಾಸಕ ಸುನಿಲ್ ಕುಮಾರ್ ಮಾತನಾಡಿ, ಕಾರ್ಕಳಕ್ಕೆ ಸುಸಜ್ಜಿತ ಅಂಬೇಡ್ಕರ್ ಭವನ ಬೇಕು ಎನ್ನುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಯೋಜನೆ ಮಂಜೂರಾಗಿತ್ತು. ಆರಂಭದಲ್ಲಿ 2 ಕೋ.ರೂ ಅನುದಾನದ ಪ್ರಸ್ತಾವನೆ ಇದ್ದರೂ ಬಳಿಕ ಅದನ್ನು ಅಂದಿನ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು 6 ಕೋ.ರೂ ಗೆ ಹೆಚ್ಚಿಸಿದ್ದರು. ಇದು ಉಡುಪಿ ಜಿಲ್ಲೆಯಲ್ಲೇ ಮಾದರಿ ಅಂಬೇಡ್ಕರ್ ಸಭಾ ಭವನವಾಗಿದೆ ಎಂದರು. ಮುಂದಿನ ವರ್ಷ ಕಾರ್ಕಳದಲ್ಲಿ ನಡೆಯಲಿರುವ ಬಾಹುಬಲಿ ಮಹಾಮಸ್ತಕಾಭಿಷೇಕದ ಹಿನ್ನಲೆಯಲ್ಲಿ ಮೂಲಭೂತ ಸೌಕರ್ಯ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುದಾನ ನೀಡುವಂತೆ ಸಿಎಂ ಗೆ ಮನವಿ ಮಾಡಿದರು. ಇದರ ಜೊತೆಗೆ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು. ನರ್ಸಿಂಗ್ ಹಾಗೂ ತಾಂತ್ರಿಕ ಶಿಕ್ಷಣ ಕಾಲೇಜಿಗೆ ಸ್ವಂತ ಕಟ್ಟಡಕ್ಕಾಗಿ ಕ್ರಮ ವಹಿಸಬೇಕು. ಪ್ರಮುಖವಾಗಿ ಜಿಲ್ಲೆಯಲ್ಲಿನ
9/11 ಸಮಸ್ಯೆ, ಕೆಂಪು ಕಲ್ಲು ಗಣಿಗಾರಿಕೆ, ಮರಳುಗಾರಿಕೆ ವಿಚಾರದಲ್ಲಿ ನಿಯಮಾವಳಿಗಳನ್ನು ಸಡಲಿಕೆ ಮಾಡಬೇಕು ಎಂದು ಮುಖ್ಯಮಂತ್ರಿಗಳ ಗಮನ ಸೆಳೆದರು.
ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಮಾತನಾಡಿ, ಪ್ರವಾಸೋದ್ಯಮ ಹಾಗೂ ಬಾಹುಬಲಿ ಮಸ್ತಕಾಭಿಷೇಕ ಗಮನದಲ್ಲಿಟ್ಟುಕೊಂಡು 100 ಕೋ.ರೂ ಅನುದಾನ ಬಿಡುಗಡೆ ಮಾಡಬೇಕು. ಆಗುಂಬೆ ರಸ್ತೆ ಅಭಿವೃದ್ಧಿಗೆ ಕ್ರಮಕೈಗೊಳ್ಳುವಂತೆ ಸಿಎಂಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ,ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹಾದೇವಪ್ಪ,ಜಯಪ್ರಕಾಶ್ ಹೆಗ್ಡೆ, ಎಂಎಲ್‌ಸಿ ಐವನ್ ಡಿಸೋಜ, ಎಂ.ಎನ್ ರಾಜೇಂದ್ರ ಕುಮಾರ್,ಬೈಂದೂರು ಮಾಜಿ ಶಾಸಕ ಗೋಪಾಲ ಪೂಜಾರಿ, ರಮಾನಾಥ ರೈ,ವಿನಯಕುಮಾರ್ ಸೊರಕೆ, ನಿಟ್ಟೆ ವಿವಿ ಕುಲಪತಿ ಯೊಗೀಶ್ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.

ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆ ನಡೆದು ಬಂದ ಕುರಿತು ವೀರಪ್ಪ ಮೊಯ್ಲಿ ಪ್ರಸ್ತಾವಿಕವಾಗಿ ಮಾತನಾಡಿದರು.
ಕಿಸಾನ್ ಸಭಾ ಟ್ರಸ್ಟ್ ಅಧ್ಯಕ್ಷ ಹರ್ಷ ಮೊಯ್ಲಿ ಸ್ವಾಗತಿಸಿದರು. ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆಯ ಟ್ರಸ್ಟಿ ಕೃಷ್ಣಮೂರ್ತಿ ವಂದಿಸಿದರು.

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *