

ಮೈಸೂರು,ಅ.23 : ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಸಚಿವ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈ ಪ್ರಕರಣದ ಹಿಂದೆ ನಮ್ಮ ಪಕ್ಷದವರೇ ಶಾಮೀಲಾಗಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡಲು ಮತ್ತು ಟಿಕೆಟ್ಗಾಗಿ ಬ್ಲಾಕ್ ಮೇಲ್ ಮಾಡುವ ಉದ್ದೇಶದಿಂದಲೇ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾರೆ.
ಕಳೆದ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ಕಳಂಕವಿಲ್ಲದೆ ಸೇವೆ ಸಲ್ಲಿಸಿರುವ ತಮ್ಮ ತಂದೆಯ ಹೆಸರನ್ನು ಕೆಡಿಸಲು ಹಾಗೂ ಮುನ್ನೆಲೆಗೆ ಬರುತ್ತಿರುವ ವಿಚಾರಗಳನ್ನು ಹತ್ತಿಕ್ಕಲು ಈ ಸಂಚು ರೂಪಿಸಲಾಗಿದೆ ಎಂದು ಯತೀಂದ್ರ ಆರೋಪಿಸಿದ್ದಾರೆ. ಪುತ್ತೂರು ಟಿಕೆಟ್ಗಾಗಿ ಸ್ಟಿಂಗ್ ಆಪರೇಷನ್ ನಡೆಸಿದ ಆ ಮಹಿಳೆ ಕೂಡ ತಮ್ಮದೇ ಪಕ್ಷದವರು ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದಾರೆ.
ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ಬೇಸರಗೊಂಡಿದ್ದಾರೆ.”ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲವಾದ್ದರಿಂದ ಸತ್ಯವು ಖಂಡಿತಾ ಹೊರಬರುತ್ತದೆ” ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.






.
.
.
.
.
.
.
.
.
.
.
.
.
.
.
.
.
.
.
.
