ಅಜೆಕಾರು: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಮರ್ಣೆ ಗ್ರಾಮದ ಎಣ್ಣೆಹೊಳೆ ಎಂಬಲ್ಲಿ ಬೈಕ್‌ಗಳು ಮುಖಾಮುಖಿ ಢಿಕ್ಕಿಯಾಗಿ ನಾಲ್ವರು ಬೈಕ್ ಸವಾರರು ಗಾಯಗೊಂಡಿದ್ದಾರೆ.
ಸAತೋಷ್ ಎಂಬವರು ಮಾ.16 ರಂದು ತಮ್ಮ ಬೈಕಿನಲ್ಲಿ ಅಜೆಕಾರಿನಿಂದ ಹಿರ್ಗಾನದ ಕಡೆಗೆ ಹೋಗುತ್ತಿದ್ದಾಗ ಎಣ್ಣೆಹೊಳೆ ಸೇತುವೆ ಬಳಿ ಎದುರಿನಿಂದ ಬರುತ್ತಿದ್ದ ಬೈಕ್ ಸವಾರ ಕಾರನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಎದುರುನಿಂದ ಬರುತ್ತಿದ್ದ ಬೈಕ್‌ಗೆ ಢಿಕ್ಕಿಯಾಗಿದೆ. ಅಪಘಾತದ ಪರಿಣಾಮ ಬೈಕ್ ಸವಾರ ಸಂತೋಷ್ ಹಾಗೂ ಇನ್ನೊಂದು ಬೈಕ್ ನಲ್ಲಿದ್ದ ಮೂವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.
ನಾಲ್ವರಲ್ಲಿ ಸಂತೋಷ್ ಅವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
K