ಕಾರ್ಕಳದಲ್ಲಿ ತಾಲೂಕು ಮಟ್ಟದ “ವಾರ್ ಅಗೈನೆಸ್ಟ್ ಡ್ರಗ್ಸ್” ಕಾರ್ಯಕ್ರಮ: ಡ್ರಗ್ಸ್ ವಿರೋಧಿ ಅಭಿಯಾನದ ಮೂಲಕ ಸ್ವಸ್ಥ ಸಮಾಜ ನಿರ್ಮಾಣ -ಶಾಸಕ ವಿ.ಸುನಿಲ್ ಕುಮಾರ್
ಕಾರ್ಕಳ,ಜು.22: ಮಾದಕ ವ್ಯಸನಕ್ಕೆ ದಾಸನಾದರೆ ನಿಮ್ಮನ್ನು ಸಾಕಿದ ತಂದೆತಾಯಿಗಳು ಬಹಳ ಕಷ್ಟ ಅನುಭವಿಸುತ್ತಾರೆ. ಭಾರತ ಗರಿಷ್ಟ ಯುವ ಸಮುದಾಯ ಹೊಂದಿದ ದೇಶವಾಗಿದೆ. ಯುವ ಜನತೆಯನ್ನು ದಾರಿ ತಪ್ಪಿಸುವ ಭಾರೀ ಷಡ್ಯಂತ್ರ ದೇಶದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಮಾದಕ ದ್ರವ್ಯ ವಿರೋಧಿ…
ರೋಟರಿ ಕ್ಲಬ್ ಕಾರ್ಕಳ ಎಸ್.ವಿ.ಟಿ. ರೋಟರ್ಯಾಕ್ಟ್ ಕ್ಲಬ್ ಪದಗ್ರಹಣ
ಕಾರ್ಕಳ,ಜು.22: ರೋಟರಿ ಕ್ಲಬ್ ಕಾರ್ಕಳ ಪ್ರಾಯೋಜಿತ ಇಂಟರ್ಯಾಕ್ಟ್ ಕ್ಲಬ್ ಎಸ್. ವಿ. ಟಿ. ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಇದರ ಪದಗ್ರಹಣ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷ ಕಾರ್ಯದರ್ಶಿಯವರಿಗೆ ಪದಪ್ರದಾನ ಮಾಡಿ ಮಾತನಾಡಿದ ಕಾರ್ಕಳ ರೋಟರಿ ಕ್ಲಬ್…
ಅಮೃತ ಭಾರತಿ ವಿದ್ಯಾಲಯದ ವಿದ್ಯಾರ್ಥಿಗಳು ಚೆಸ್ ಪಂದ್ಯದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಬ್ರಿ,ಜು.22:ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಬAಧಿತ ಉಡುಪಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಮೋಹಿತ್ ಬಾಲ ವರ್ಗದಲ್ಲಿ ಜಯಿಸಿ ರಾಜ್ಯಮಟ್ಟಕ್ಕೆ ಮತ್ತು ಕಿಶೋರ…
ಸಾಣೂರು: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ,ಜು.೨೨: ಕಾರ್ಕಳ ತಾಲೂಕು ಸಾಣೂರು ಗ್ರಾಮದ ಪುಲ್ಕೇರಿ ಮಠದಕೆರೆ ಬಳಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಗಣೇಶ (೪೮ವ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕೂಲಿ ಕೆಲಸ ಮಾಡಿಕೊಂಡಿದ್ದ ಗಣೇಶ್ ಅವರು ಹಲವು ಸಮಯದಿಂದ ವಿಪರೀತ ಮದ್ಯಪಾನ ಮಾಡುತ್ತಿದ್ದು, ಅವಿವಾಹಿತರಾಗಿದ್ದರು. ಯಾವುದೋ ಕಾರಣಕ್ಕೆ…
ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ : ಸಚಿವ ಪ್ರಿಯಾಂಕ್ ಖರ್ಗೆ,ನಲಪಾಡ್‌ಗೆ ಮತ್ತೆ ಸಮನ್ಸ್
ಬೆಂಗಳೂರು,ಜು.22: ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಸಿದ್ದಾಪುರದ ತೇಜಸ್ ಗೌಡ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್‌ಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದ್ದು, ಆಗಸ್ಟ್…
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೂ. 1.75 ಲಕ್ಷ ವಿದ್ಯಾರ್ಥಿವೇತನ ವಿತರಣೆ
ಕಾರ್ಕಳ,ಜು.21: ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.…
ಹೆಬ್ರಿ ತಾಲೂಕು ಕಚೇರಿಯಲ್ಲಿ ಶಾಸಕ ಸುನಿಲ್ ಕುಮಾರ್ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
ಹೆಬ್ರಿ,ಜು.21: ಶಾಸಕ ಸುನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಹೆಬ್ರಿ ತಾಲೂಕು ಕಛೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು. ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ಶಾಸಕರು ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ…
ನಿಟ್ಟೆ ತಾಂತ್ರಿಕ ಕಾಲೇಜಿಗೆ ಪ್ರತಿಷ್ಠಿತ ‘ಇನ್ನೋವೇಟಿವ್ ಮೆಂಟಲ್ ಹೆಲ್ತ್ ಅವಾರ್ಡ್’
ಕಾರ್ಕಳ,ಜು.21: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು 2025-26ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿನ ಸಿಒಪಿಇ ಕ್ಲಬ್ ಮೂಲಕ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದು ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬAಧಿಸಿದ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಅತ್ಯುತ್ತಮ ಕಾರ್ಯಚಟುವಟಿಕೆಗಳನ್ನು ಗುರುತಿಸಿ…
ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗೃಹಜ್ಯೋತಿ ಪರಿಷ್ಕರಣೆ ಕುರಿತು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ: ದಾಖಲೆಗಳ ಪರಿಶೀಲನೆ ಫಲಾನುಭವಿಗಳಿಗೆ ಗೊಂದಲಕ್ಕೆ ಕಾರಣವಾಗಬಾರದು: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ
ಕಾರ್ಕಳ,ಜು.21 : ರಾಜ್ಯ ಸರಕಾರದ ಆದೇಶದಂತೆ ತಾಲೂಕಿನಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲಕ್ಕೆ ಎಡೆಮಾಡಿಕೊಡದೆ ಆಯಾ ಗ್ರಾಮದಲ್ಲಿನ ಸರಕಾರಿ ಕಚೇರಿ, ಕಟ್ಟಡಗಳಲ್ಲಿ ಪರಿಶೀಲನೆ ನಡೆಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ…
ಕಾರ್ಕಳ: ಯುವತಿಗೆ ಹಲ್ಲೆಗೈದು ಅವಾಚ್ಯವಾಗಿ ನಿಂದಿಸಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ: ಇನ್ಸ್ಟಾಗ್ರಾಂ ಗೆಳೆಯನ ವಿರುದ್ಧ ಕಾಲೇಜು ಯುವತಿ ದೂರು: ಕಾರ್ಕಳ: ಲವ್ ಬ್ರೇಕ್ ಅಪ್ ಗೆ ಕೆರಳಿದನೇ ಯುವಕ?
ಕಾರ್ಕಳ,21: ಹುಚ್ಚುಕೋಡಿ ಮನಸ್ಸು ಅದು ಹದಿನಾರರ ವಯಸ್ಸು ಎಂಬಂತೆ ಇಲ್ಲೊಬ್ಬಳು ಯುವತಿ ಕಾಲೇಜು ಓದುತ್ತಿರುವಾಗಲೇ ಇನ್ಸ್ಟಾಗ್ರಾಂ ಹುಚ್ಚಿನಿಂದ ಪ್ರೀತಿಪ್ರೇಮದ ಸುಳಿಗೆ ಸಿಲುಕಿ ಬಳಿಕ ಗೆಳೆತನ ಬಿಡು ಎಂದಾಗ ಕೆರಳಿದ ಆತ ಆಕೆಗೆ ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ ಎಂದು ಆರೋಪಿಸಿ…
