ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ನೀಡುವ ಬಗ್ಗೆ ಸಿಎಂ ಜೊತೆ ಚರ್ಚೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು…

ಕಾರ್ಕಳ: ನ್ಯಾಯಾಲಯಕ್ಕೆ ಹಾಜರಾಗದೆ 34 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಾರ್ಕಳ: ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು 34 ವರ್ಷ ಬಳಿಕ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ತೆಂಕ ಎಡಪದವಿನ ಲಿಯೋ ರೋಚ್ (64) ಬಂಧಿತ ಆರೋಪಿ. ಈತನ ವಿರುದ್ಧ 2004ರಲ್ಲಿ…

ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಮಂಜೂರಾತಿ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಯವರಿಗೆ  ಮನವಿ

ಉಡುಪಿ: ಉಡುಪಿ ಭಾಗದ ಯುವ ಜನತೆಯ ಬಹುದಶಕದ ಬೇಡಿಕೆಯಾಗಿರುವ ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಯೋಜನೆ ಮಂಜೂರು ಮಾಡುವಂತೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಯವರನ್ನು ಭೇಟಿಯಾಗಿ ಉಡುಪಿ ಶಾಸಕ ಯಶ್ ಪಾಲ್…

ಕಾರ್ಕಳ ತಾಲೂಕು ಗ್ರಾಮೊದ್ಯೋಗ ವಿವಿದ್ಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ವಿಜೇತಾ ಪೈ, ಉಪಾಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಶರ್ಮಾ ಅವಿರೋಧ ಆಯ್ಕೆ

ಕಾರ್ಕಳ: ಕಾರ್ಕಳ ತಾಲೂಕು ಮಟ್ಟದ ಗ್ರಾಮೋದ್ಯೋಗ ವಿವಿದ್ಧೋದ್ದೇಶ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅಜೆಕಾರಿನ ವಿಜೇತಾ ಪೈ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಶರ್ಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಜೇತಾ ಪೈ ಅವರು ಪ್ರಸ್ತುತ ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ…

ಮಿಯ್ಯಾರು ಗ್ರಾಮ ಪಂಚಾಯತ್‌ನಲ್ಲಿ  ಭಾರೀ ಗೋಲ್ ಮಾಲ್ ? : 3 ಫ್ಯಾನ್ ದುರಸ್ತಿಗೆ 13 ಸಾವಿರ ರೂ. ಬಿಲ್!: ಪಿಡಿಓ ‌ನಾಗರಾಜ್ ವಿರುದ್ದ ಭ್ರಷ್ಟಾಚಾರದ ಆರೋಪ : ಮಿಯ್ಯಾರು ಪಂಚಾಯತ್ ಗ್ರಾಮಸಭೆಯೇ ರದ್ದು!

ಕಾರ್ಕಳ : ಸಾರ್ವಜನಿಕರ ಹಾಗೂ ಅಧಿಕಾರಿಗಳ ನಡುವೆ ನಡೆದ ವಾಗ್ವಾದ ತಾರಕ್ಕಕ್ಕೇರಿದ್ದು ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಲಾಗದ ಅಧಿಕಾರಿಗಳು ಕೊನೆಗೆ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಭೆಯನ್ನು ಮುಂದೂಡಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮ ಪಂಚಾಯತ್ ‌ನಲ್ಲಿ‌ ನಡೆದಿದೆ. ಮಿಯ್ಯಾರು ಗ್ರಾಮ ಪಂಚಾಯತ್…

ರಾಜ್ಯದ ಜನತೆಗೆ ಮತ್ತೆ ಕರೆಂಟ್ ಶಾಕ್! :ಏ .1ರಿಂದ ಮತ್ತೆ ವಿದ್ಯುತ್ ದರ ಏರಿಕೆ: ಪ್ರತೀ ಯೂನಿಟ್ ಗೆ 36 ಪೈಸೆ ಹೆಚ್ಚಳ

ಬೆಂಗಳೂರು: ಈಗಾಗಲೇ ಬಸ್ ಟಿಕೆಟ್ ದರ ಹೆಚ್ಚಳ, ಮೆಟ್ರೋ ಪ್ರಯಾಣ ದರ ಹೆಚ್ಚಳ ಸೇರಿದಂತೆ ಬೆಲೆ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತೊಂದು ಶಾಕ್ ನೀಡಿದೆ. ವಿದ್ಯುತ್ ದರ ಪ್ರತೀ ಯೂನಿಟ್‌ಗೆ 36 ಪೈಸೆ ಹೆಚ್ಚಳ…

ಮೀನು ಕದ್ದ ಮಹಿಳೆಗೆ ಥಳಿತ ಪ್ರಕರಣ : ಅನಾಗರಿಕ ವರ್ತನೆ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಉಡುಪಿಯ ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಥಳಿಸಿರುವ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದು ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಮೀನು ಕಳ್ಳತನ ಮಾಡಿದ್ದರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ…

ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನ ಬಂಧನ

ಬೆಂಗಳೂರು: ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಉತ್ತರಪ್ರದೇಶದ ಗಾಜಿಯಾಬಾದ್ ಮೂಲದ ನಿವಾಸಿ, ಬಿಇಎಲ್‌ನಲ್ಲಿ ಕೆಲಸ ಮಾಡುತ್ತಿದ್ದ ದೀಪ್‌ರಾಜ್ ಚಂದ್ರ ಬಂಧಿತ ಆರೋಪಿ. ಈತ ಬಿಇಎಲ್‌ನ…

ಉಡುಪಿಯಲ್ಲೊಂದು ಅಮಾನವೀಯ ಘಟನೆ: ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ

ಉಡುಪಿ: ಉಡುಪಿ ಮಲ್ಪೆಯಲ್ಲೊಂದು ಅಮಾನವೀಯ ಘಟನೆ ನಡೆದಿದ್ದು ಕೇವಲ ಮೀನು ಕದ್ದ ಕಾರಣಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ. ಉಡುಪಿಯ ಮಲ್ಪೆ ಮೀನುಗಾರಿಕ ಬಂದರಿನಲ್ಲಿ ಈ ಘಟನೆ ನಡೆದಿದ್ದು, ಕೃತ್ಯ ಎಸಗಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೇವಲ ಮೀನು…

ಕಾರ್ಕಳ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ: ಸರ್ಕಾರದ ಯೋಜನೆಗಳಿಗೆ ವಿರೋಧಿಗಳ ಟೀಕೆಗೆ ಪ್ರಗತಿ ಸಾಧಿಸುವ ಮೂಲಕ ಉತ್ತರ ಕೊಡಬೇಕು: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ

ಕಾರ್ಕಳ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ವಿರೋಧಿಗಳ ಅಪಪ್ರಚಾರ, ಟೀಕೆಗಳು ನಿರೀಕ್ಷಿತ ಆದರೆ ಇಂತಹ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಿದಾಗಲೇ ವಿರೋಧಿಗಳ ಟೀಕೆಗಳಿಗೆ ತಕ್ಕ ಉತ್ತರ ಸಿಕ್ಕಂತಾಗುತ್ತದೆ ಎಂದು ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ…