ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಂಸದ ತೇಜಸ್ವಿ ಸೂರ್ಯ ದಂಪತಿ- ಅಷ್ಟಾವಧಾನ, ವೇದಘೋಷ ಸೇವೆ
ಉಡುಪಿ : ಇತ್ತೀಚೆಗೆ ದಾಂಪತ್ಯ ಜೀವನ ಪ್ರವೇಶ ಮಾಡಿದ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಉಡುಪಿ ಶ್ರೀ ಕೃಷ್ಣಮಠದಲ್ಲಿ ಅಷ್ಟಾವಧಾನ, ವೇದಘೋಷ ಸೇವೆ ನೀಡಿದ್ದಾರೆ. ರಥಬೀದಿಯಲ್ಲಿ ನಡೆದ ನಿತ್ಯೋತ್ಸವದಲ್ಲಿ ಭಾಗಿಯಾದ ಎರಡು ಕುಟುಂಬಗಳು, ಕೃಷ್ಣ ದೇವರ ಗರ್ಭಗುಡಿಯಲ್ಲಿ…
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಅತೀ ಹೆಚ್ಚು ಮೊತ್ತದ ಡ್ರಗ್ಸ್ ವಶಕ್ಕೆ : ಇಬ್ಬರು ದಕ್ಷಿಣ ಆಫ್ರಿಕಾ ಪ್ರಜೆಗಳ ಬಂಧನ
ಮಂಗಳೂರು: ರಾಜ್ಯಕ್ಕೆ ಮತ್ತು ಇತರ ಸ್ಥಳಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ದ. ಆಫ್ರಿಕಾದ ಇಬ್ಬರು ಪ್ರಜೆಗಳನ್ನು ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ದಕ್ಷಿಣ ಆಫ್ರಿಕಾದ ಬಂಬಾ ಫಂಟಾ (31) ಮತ್ತು ಅಬಿಗೈಲ್ ಅಡೊನಿಸ್ (30) ಎಂದು ಗುರುತಿಸಲಾಗಿದೆ.…
ಸತತ ಪ್ರಯತ್ನಗಳ ಬಳಿಕ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ಬರುವ ದಿನಾಂಕ ಫಿಕ್ಸ್: ಮಾರ್ಚ್ 25ರ ಸೇಫ್ ಲ್ಯಾಂಡ್ ಆಗುವ ಸಾಧ್ಯತೆ
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಹಾಗೂ ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಭೂಮಿಗೆ ಮರಳುವ ದಿನಾಂಕ ನಿಗದಿಯಾಗಿದೆ. ತಾವು ಮತ್ತೆ ಭೂಮಿಗೆ ಕಾಲಿಡುತ್ತೀವೋ ಇಲ್ಲವೋ ಎನ್ನುವ ಆತಂಕದಲ್ಲಿದ್ದವರು ಕೊನೆಗೂ ಮರಳುವ ಮುನ್ಸೂಚನೆ ಸಿಕ್ಕಿದೆ.…
ಮಂಗಳೂರು : ಸ್ಕೂಟರ್‌ನಲ್ಲಿ ಅಕ್ರಮ ಗೋಮಾಂಸ ಸಾಗಾಟ-ಆರೋಪಿ ಪರಾರಿ
ಮಂಗಳೂರು: ಭಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆಯಾದ ಘಟನೆ ಕುಲಶೇಖರ, ಕೈಕಂಬದ ಬಳಿ ನಡೆದಿದೆ. ಸ್ಕೂಟರ್ನಲ್ಲಿ 100 kg ಗೂ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿದ್ದರು. ಸ್ಕೂಟರನ್ನು ಭಜರಂಗದಳ ತಡೆದಿದ್ದು, ಸವಾರ ಸ್ಕೂಟರ್…
ಅಜೆಕಾರು: ಬಿಜೆಪಿ ಶಕ್ತಿಕೇಂದ್ರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಅಜೆಕಾರು; ಅಜೆಕಾರು ಬಿಜೆಪಿ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶುಕ್ರವಾರ ಅಜೆಕಾರು ದೆಪ್ಪುತ್ತೆಯ ಅದ್ರೊಟ್ಟು ಬಾಕ್ಯಾರ್ ನಲ್ಲಿ ಜರುಗಿತು. ಶಾಸಕರಾದ ವಿ.ಸುನಿಲ್ ಕುಮಾರ್ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿ, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯ ಹೊಣೆಗಾರಿಕೆ ನಮ್ಮೆಲ್ಲರ…
ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ- ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಕ್ರಮಗಳು ಮನೆ ಮನೆಗೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಾ.15…
ಮಿಯ್ಯಾರು ಲವ-ಕುಶ ಜೋಡುಕೆರೆ ಕಂಬಳ – ಕಂಬಳ ಕ್ರೀಡೆಗೆ ಬಜೆಟ್ ನಲ್ಲಿ 3.5 ಕೋ ರೂ. ಅನುದಾನ ಮೀಸಲು : ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ
ಕಾರ್ಕಳ : ಕರಾವಳಿಯ ಜನಪದ ಕ್ರೀಡೆ ಕಂಬಳಕ್ಕೆ ಈ ಬಾರಿಯ ಮುಖ್ಯಮಂತ್ರಿಗಳ ಬಜೆಟ್ ನಲ್ಲಿ 3.5 ಕೋಟಿ ರೂ.ಅನುದಾನವನ್ನು ಮೀಸಲಿಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು. ಅವರು ಕಾರ್ಕಳದ ಮಿಯ್ಯಾರಿನಲ್ಲಿ ಮಿಯ್ಯಾರು ಕಂಬಳ ಸಮಿತಿ ಮತ್ತು ನವೋದಯ…
ಸುನಿತಾ ವಿಲಿಯಮ್ಸ್ 9 ತಿಂಗಳ ತ್ರಿಶಂಕು ಸ್ಥಿತಿಗೆ ಕಡೆಗೂ ಮುಕ್ತಿ: ಭೂಮಿಗೆ ಕರೆತರುವ ಕಾರ್ಯಾಚರಣೆ ಆರಂಭ
ವಾಷಿಂಗ್ಟನ್: ತಾಂತ್ರಿಕ ಅಡಚಣೆಗಳಿಂದಾಗಿ ಸುಮಾರು ತಿಂಗಳುಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿರುವ ಭಾರತ ಮೂಲದ ಅಮೆರಿಕದ ಖಗೋಳ ವಿಜ್ಞಾನಿ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಅವರನ್ನು ಯಶಸ್ವಿಯಾಗಿ ಭೂಮಿಗೆ ವಾಪಸ್ ಕರೆತರುವ ಕಾರ್ಯಾಚರಣೆ ಆರಂಭವಾಗಿದೆ. ಈ ಕಾರ್ಯಾಚರಣೆ ಹಲವಾರು ಹಿಂದೆಯೇ…
ಉಡುಪಿ: ವಿಶ್ವಕರ್ಮ ಮತ್ತು ಪಿಎಇಜಿಪಿ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ
ಉಡುಪಿ: ವಿಶ್ವಕರ್ಮ ಯೋಜನೆ ಮತ್ತು ಪಿಎಇಜಿಪಿ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ರಜತಾದ್ರಿಯ ಡಾ ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ಜರಗಿತು. ಮೊದಲು ವಿಶ್ವಕರ್ಮ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ…
ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ಸಂವಿಧಾನ ಬದ್ಧವಾಗಿರಬೇಕೇ ವಿನಃ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಗಂಜಿ ಕೇಂದ್ರವಾಗಬಾರದು: ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಸಲಹೆ
ಕಾರ್ಕಳ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದ ರಾಜ್ಯ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಎಡವಿರುವುದು ಮಾತ್ರವಲ್ಲದೇ ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಕುಂಠಿತವಾಗಿರುವುದು ಈಗಾಗಲೇ ಜಗತ್ ಜಾಹಿರವಾಗಿದ್ದು, ಭಾರತೀಯ ಜನತಾ ಪಾರ್ಟಿಯು ಪಂಚ ಗ್ಯಾರಂಟಿಗಳ ಅನುಷ್ಠಾನದ ಆಗಬಹುದಾದ ಬಾಧಕಗಳ…
