ಯಶಸ್ವಿನಿ ಯೋಜನೆ ನೋಂದಣಿಗೆ ಮಾರ್ಚ್ 31 ರವರೆಗೆ ಅವಧಿ ವಿಸ್ತರಣೆ
ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ನೊಂದಾಯಿಸಲು ಹಾಗೂ ನವೀಕರಣಕ್ಕಾಗಿ ಮಾ 31ರವರೆಗೆ ಅವಧಿ ವಿಸ್ತರಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈಗಾಗಲೇ ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದೆ.ಕಳೆದ ಡಿಸೆಂಬರ್ ಹಾಗೂ ಜನವರಿಯಲ್ಲಿ ಹೆಚ್ಚಿನ…
ರೈತರ ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ : ಸದನದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿಕೆ
ಬೆಂಗಳೂರು: ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ತಾಂತ್ರಿಕ ಸಾಧ್ಯತೆಗಳಿರುವ ವಿದ್ಯುತ್ ಉಪಕೇಂದ್ರದಿAದ ಹಗಲಿನ ವೇಳೆಯಲ್ಲಿ ನಿರಂತರ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ತನ್ನು ಸರಬರಾಜು ಮಾಡಲಾಗುತ್ತಿದ್ದು, ಉಳಿದ ಕಡೆ ಹಗಲಿನಲ್ಲಿ 4 ಗಂಟೆ ಹಾಗೂ ರಾತ್ರಿ 3…
ಕಾರ್ಕಳ: ಮದ್ಯವ್ಯಸನಿ ಯುವಕ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ: ವಿಪರೀತ ಮದ್ಯಪಾನದ ಚಟ ಹೊಂದಿದ್ದ 18 ವರ್ಷ ಹರೆಯದ ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾರ್ಕಳದ ಬಂಗ್ಲೆಗುಡ್ಡೆಯ ಹಿಮ್ಮುಂಜೆ ಎಂಬಲ್ಲಿ ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ಹಿಮ್ಮುಂಜೆ ನಿವಾಸಿ ಕುಮಾರ ಎಂಬವರ…
ಅಕ್ರಮ ಮರಳು ಸಾಗಾಟ : 2 ಟಿಪ್ಪರ್ ವಶಕ್ಕೆ : ಚಾಲಕ ಎಸ್ಕೇಪ್
ಕಾರ್ಕಳ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ 2 ಟಿಪ್ಪರ್ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಚಾಲಕರು ಪರಾರಿಯಾಗಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ತನಿಖೆ) ಶಿವಕುಮಾರ್ ಎಸ್. ಆರ್. ಅವರು ಕಸಬಾ ಗ್ರಾಮದ ಸರ್ವಜ್ಞ ಸರ್ಕಲ್ ಬಳಿ…
ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ
ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾದ ನಂತರ ವಿಮಾನ ವಾಪಸ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 320ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಸೋಮವಾರ ಮುಂಬೈನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಭದ್ರತಾ…
ಕಾರ್ಕಳ: ಕುಖ್ಯಾತ ದನಕಳ್ಳ ಮೊಹಮ್ಮದ್ ಯೂನಸ್ ಅರೆಸ್ಟ್
ಕಾರ್ಕಳ: ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ದನಕಳ್ಳನನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಲ್ಲೂರು ಗ್ರಾಮದ ಬೋರ್ಕಟ್ಟೆ ದೊಡ್ಡಕಜೆಯ ಮೊಹಮ್ಮದ್ ಯೂನಸ್ (30) ಬಂಧಿತ. ಈತನ ಮೇಲೆ ದನಕಳ್ಳತನಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ, ಅಜೆಕಾರು, ಹೆಬ್ರಿ, ಶಿರ್ವ, ಮೂಡುಬಿದಿರೆ…
ಮಂಗಳೂರು: ರಾಜ್ಯ ರಾಷ್ಟ್ರಮಟ್ಟದ ವಿಜೇತ ಕ್ರೀಡಾಪಟುಗಳ ಅಭಿನಂದನೆ ಹಾಗೂ ಕಾರ್ಯಾಗಾರ- ದೈಹಿಕ ಶಿಕ್ಷಣ ಶಿಕ್ಷಕರ ಶ್ರಮ ಅಭಿನಂದನಾರ್ಹ- ಭಾಸ್ಕರ್ ಕೆ.
ಮಂಗಳೂರು: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ದಕ್ಷಿಣ ವಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಇವರ ಆಶ್ರಯದಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾದ ಆಶ್ರಯದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯ…
ಮಂಗಳೂರು: ಅಕ್ರಮ ದನ ಮಾಂಸ ಸಾಗಾಟ ಪತ್ತೆ : ಇಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು
ಮಂಗಳೂರು : ಭಜರಂಗದಳದ ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಇಂದು (ಮಾ.10) ಮುಂಜಾನೆ ನಡೆದಿದೆ. ಟೆಂಪೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿರುವ ಕುರಿತು…
ತಮಿಳುನಾಡು ಮುಖ್ಯಮಂತ್ರಿ ಪತ್ನಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ
ಕೊಲ್ಲೂರು: ತಮಿಳುನಾಡು ಮುಖ್ಯಮಂತ್ರಿ ಮುತ್ತುವೇಲ್ ಸ್ಟಾಲಿನ್ (ಎಂ.ಕೆ.ಸ್ಟಾಲಿನ್) ಪತ್ನಿ, ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ತಾಯಿ ದುರ್ಗಾ ಸ್ಟಾಲಿನ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ಮಾ. 7ರಂದು ಆಗಮಿಸಿದ ಅವರು ದೇಗುಲದ ವಸತಿಗೃಹದಲ್ಲಿ ತಂಗಿದ್ದರು. ಶನಿವಾರ ಅವರು ಶ್ರೀ…
ರಾಜ್ಯದ ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧ: ಅರಣ್ಯ ಮತ್ತು ಪರಿಸರ ಇಲಾಖೆ ಮಹತ್ವದ ಆದೇಶ
ಬೆಂಗಳೂರು: ರಾಜ್ಯದ ಎಲ್ಲಾ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪು ಬಳಕೆ ಹೆಚ್ಚಾಗಿದ್ದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಮಾಲಿನ್ಯ…
