ಹಸುಗಳ ಕೆಚ್ಚಲು ಕೊಯ್ದ ಘಟನೆಗೆ ಜಮೀರ್ ಅಹ್ಮದ್ ನೇರ ಕಾರಣ: ಬಿಜೆಪಿ ಮುಖಂಡ ಭಾಸ್ಕರ್ ರಾವ್ ಆರೋಪ

ಬೆಂಗಳೂರು: ಚಾಮರಾಜಪೇಟೆಯ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಗೆ ಸಚಿವ ಜಮೀರ್ ಅಹ್ಮದ್ ಖಾನ್ ನೇರ ಕಾರಣ ಎಂದು ಬಿಜೆಪಿ ಮುಖಂಡ ಭಾಸ್ಕರ್ ರಾವ್ ಆರೋಪಿಸಿದ್ದಾರೆ. ಚಾಮರಾಜಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಡ್ರಗ್ಸ್ ದಂಧೆ ವ್ಯಾಪಕವಾಗಿ ನಡೆಯುತ್ತಿದೆ. ಹಸು…

ಕಾರ್ಕಳ: ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದ ಓರ್ವನ ಬಂಧನ, ಐವರು ಪರಾರಿ

ಕಾರ್ಕಳ : ಕಾಡುಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ವ್ಯಕ್ತಿಯನ್ನು ಕುದುರೆಮುಖ ರಾಷ್ಟ್ರೀಯ ಅಭಯಾರಣ್ಯ ವ್ಯಾಪ್ತಿಯಲ್ಲಿ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಟಿಪಳ್ಳ ನಿವಾಸಿ ಪಾಸ್ವಿಮ್ ಅಲಿ (35) ಬಂಧಿತ ಆರೋಪಿ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮುಳ್ಳೂರು ಅರಣ್ಯ ಚೆಕ್ ಪೋಸ್ಟ್ ಬಳಿ ಆರೋಪಿಯನ್ನು ಬಂಧಿಸಲಾಗಿದ್ದು,…

ಇಂದಿನಿಂದ ಮಹಾಕುಂಭ ಮೇಳ ಆರಂಭ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಪ್ರಯಾಗ್​ರಾಜ್

ಪ್ರಯಾಗರಾಜ್‌: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಬೃಹತ್‌ ಧಾರ್ಮಿಕ ಸಮಾಗಮವಾದ ‘ಮಹಾ ಕುಂಭಮೇಳ’ಕ್ಕೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪುಷ್ಯ ಹುಣ್ಣಿಮೆಯ ಪವಿತ್ರ ದಿನವಾದ ಸೋಮವಾರ ಚಾಲನೆ ಸಿಗಲಿದೆ. ಪುಣ್ಯಸ್ನಾನದೊಂದಿಗೆ ಆರಂಭವಾಗಲಿರುವ ಕಾರ್ಯಕ್ರಮ ಫೆ.26ರ ಶಿವರಾತ್ರಿಯಂದು 45 ದಿನಗಳ ಬಳಿಕ ಸಂಪನ್ನಗೊಳ್ಳಲಿದೆ. ಈ ಬಾರಿಯ…

ಕಾರ್ಕಳ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಕಾರ್ಕಳ: ಸಕ್ಕರೆ ಖಾಯಿಲೆಯಿಂದ ತನ್ನ ಒಂದು ಕಾಲನ್ನು ಕಳೆದುಕೊಂಡಿದ್ದ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕಾಂತಾವರ ಗ್ರಾಮದ ಬೇಲಾಡಿ ನ್ಯಾಯತೋಟ ಎಂಬಲ್ಲಿ ಜ.11 ರಂದು ನಡೆದಿದೆ. ಶಿವಪ್ರಸಾದ್ ಎಂಬವರು ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದು, ಬಾಲ್ಯದಿಂದಲೂ ಶುಗರ್ ಖಾಯಿಲೆಯಿಂದ ಬಳಲುತ್ತಿದ್ದರು. ಕಳೆದ…

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿ ಬಿಹಾರ ಮೂಲದ ಸೈಯದ್ ನಸ್ರು ಬಂಧನ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬAಧಿಸಿದAತೆ ಓರ್ವ ಆರೋಪಿಯನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಸೈಯದ್ ನಸ್ರು (30) ಬಂಧಿತ ಆರೋಪಿ. ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್…

ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಕಳೆದ 8 ವರ್ಷಗಳಿಂದ ಕಾಲುನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಜ.12 ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ರಿ ಚಾರ ಗ್ರಾಮದ ನಿವಾಸಿ ಶೇಖರ (47) ಆತ್ಮಹತ್ಯೆ ಮಾಡಿಕೊಂಡವರು. ಶೇಖರ ಅವರಿಗೆ ಸುಮಾರು 8 ವರ್ಷಗಳಿಂದ ಎರಡು ಕಾಲಿನ ಮಂಡಿಯಿAದ ಕೆಳಗೆ…

ಬೆಳ್ಮಣ್: ಹೋಂ ನರ್ಸ್ ಕೆಲಸಕ್ಕೆ ಬಂದಿದ್ದ ಮಹಿಳೆ ಮಾಂಗಲ್ಯ ಸರ ಎಗರಿಸಿ ನಾಪತ್ತೆ-ದೂರು ನೀಡಿದರೆ ಪ್ರತಿದೂರು ನೀಡುವುದಾಗಿ ಬೆದರಿಕೆ

ಕಾರ್ಕಳ: ಹೋಂ ನರ್ಸ್ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬಳು ತಾನು ನೋಡಿಕೊಳ್ಲೂತ್ತಿದ್ದ ಮಹಿಳೆಯ 6 ಪವನ್ ತೂಕದ ರು.3,50,000 ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಎಗರಿಸಿ ನಾಪತ್ತೆಯಾಗಿದ್ದಾಳೆ. ಕಾರ್ಕಳ ತಾಲೂಕಿನ ಬೆಳ್ಮಣ್‌ನಲ್ಲಿ ಈ ಘಟನೆ ನಡೆದಿದ್ದು, ನಾರಾಯಣ ತಂತ್ರಿ ಎಂಬವರು ಅನಾರೋಗ್ಯ ಪೀಡಿತರಾಗಿದ್ದ…

ರಾಜ್ಯದಲ್ಲಿ ಅಮಾನವೀಯ ಘಟನೆ: ಹಸುಗಳ ಕೆಚ್ಚಲು ಕೊಯ್ದ ವಿಕೃತಿ ಮೆರೆದ ದುರುಳರು

ಬೆಂಗಳೂರು: ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ಪಾಪಿಗಳು ತಡರಾತ್ರಿ ಮಲಗಿದ್ದ ರಸ್ತೆಯಲ್ಲಿ ಮಲಗಿದ್ದ 3 ಹಸುಗಳ ಕೆಚ್ಚಲನ್ನು ಕೊಯ್ದು ಕಿರಾತಕರು ಪರಾರಿಯಾಗಿದ್ದು, ಇಂದು (ಜನವರಿ 12) ಬೆಳಗ್ಗೆ ಘಟನೆ…

ನಕ್ಸಲರು ಸರಕಾರಕ್ಕೆ ಶರಣಾಗಿದ್ದಲ್ಲ, ಬದಲಾಗಿ ಸರಕಾರವೇ ನಕ್ಸಲರಿಗೆ ಶರಣಾಗಿದೆ : ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ

ಉಡುಪಿ: ನಕ್ಸಲರು ಸರಕಾರಕ್ಕೆ ಶರಣಾಗಿದ್ದಲ್ಲ, ಬದಲಾಗಿ ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಲೇವಡಿ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ, ಶಸ್ತ್ರಾಸ್ತ್ರ ತ್ಯಜಿಸಿ ಬರುವ ನಕ್ಸಲರ ಶರಣಾಗತಿಗೆ ನಮ್ಮ ವಿರೋಧ ಇಲ್ಲ.…

ಉಡುಪಿ: ಗಾಂಧೀಜಿ ಕುರಿತು ಅವಹೇಳನಕಾರಿ ಹೇಳಿಕೆ: ಹಿಂದೂ ಕಾರ್ಯಕರ್ತೆ ಮೀನಾಕ್ಷಿ ಸೆಹ್ರಾವತ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಕಾಂಗ್ರೆಸ್ ಆಡಳಿತದ ಕರ್ನಾಟಕದ ಪೊಲೀಸರು ಮಹಾತ್ಮ ಗಾಂಧೀಜಿಯವರ ಬಗ್ಗೆ ಮಹಾತ್ಮ ಗಾಂಧೀಜಿಯವರ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಹಿಂದೂ ಕಾರ್ಯಕರ್ತೆ ಮೀನಾಕ್ಷಿ ಸೆಹ್ರಾವತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಶನಿವಾರ ಹಿಂದೂ ಕಾರ್ಯಕರ್ತೆ ಮೀನಾಕ್ಷಿ ಸೆಹ್ರಾವತ್ ಎಕ್ಸ್…