ಕನಕದಾಸರು ಸೂರ್ಯನಾದರೆ ನಾನು ಮಿಂಚುಹುಳ, ಅವರ ಜೊತೆಗೆ ನನ್ನ ಹೋಲಿಕೆ ಸಲ್ಲದು : ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಹ್ವಾನ ಸಿಗದ ಕುರಿತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟನೆ

ಉಡುಪಿ, ಡಿ.01: ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನೂತನವಾಗಿ ಅಳವಡಿಸಲಾಗಿದ್ದ ಸ್ವರ್ಣ ಕವಚವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಆಹ್ವಾನಿಸಿಲ್ಲ ಎನ್ನುವ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಈ…

ಕೋಡಿ ಮಠದ ಶ್ರೀಗಳನ್ನು ರಹಸ್ಯವಾಗಿ ಭೇಟಿಯಾದ ಸಚಿವ ಪರಮೇಶ್ವರ್: ತೀವ್ರ ಕುತೂಹಲಕ್ಕೆ ಎಡೆ ಮಾಡಿದ ಗೃಹ ಸಚಿವರ ಭೇಟಿ

ಹಾಸನ, ಡಿ.01: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗುತ್ತಿರುವ ಬೆನ್ನಲ್ಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸೋಮವಾರ ಬೆಳಗ್ಗೆ ಕೋಡಿ ಮಠದ ಶ್ರೀಗಳನ್ನು ರಹಸ್ಯವಾಗಿ ಭೇಟಿಯಾಗಿದ್ದು, ಇದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯ…

ಇಂದಿನಿಂದ ಡಿ.19ರ ವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ : ಪ್ರಮುಖ ಮಸೂದೆಗಳ ಮಂಡಿಸಲಿರುವ ಮೋದಿ ಸರ್ಕಾರ

ನವದೆಹಲಿ(ಡಿ.01): ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಆರಂಭವಾಗಲಿದೆ. ಇಂದು ಆರಂಭಗೊಳ್ಳಲಿರುವ ಅಧಿವೇಶನ ಡಿಸೆಂಬರ್ 19ರವರೆಗೆ ನಡೆಯಲಿದೆ. ಈ ಅಧಿವೇಶನಕ್ಕೂ ಮುನ್ನ, ಮೋದಿ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪರಿಚಯಿಸಬೇಕಾದ 10ಕ್ಕೂ ಅಧಿಕ ಮಸೂದೆಗಳ ಪಟ್ಟಿಯನ್ನು ಸಿದ್ಧಪಡಿಸಿದೆ.ಈ ಮಸೂದೆಗಳು ಸೇರಿದಂತೆ ಹಲವಾರು ವಿಷಯಗಳ…

ಕಾರ್ಕಳದಲ್ಲಿ ಮೇಳೈಸಿದ ಆಳ್ವಾಸ್ ಸಾಂಸ್ಕೃತಿಕ ವೈಭವ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಕೇವಲ ಶಿಕ್ಷಣಕ್ಕೆ ಸೀಮಿತವಾಗದೇ ಕ್ರೀಡೆ, ಸಂಸ್ಕೃತಿ, ರಾಷ್ಟ್ರೀಯತೆ, ಸಾಮರಸ್ಯವನ್ನು ಸಾರುವ ಕೆಲಸ ಮಾಡುತ್ತಿದೆ: ಆಳ್ವಾಸ್ ಸಾಂಸ್ಕೃತಿಕ ವೈಭವ ಉದ್ಘಾಟಿಸಿ ಶಾಸಕ‌ ಸುನೀಲ್ ಕುಮಾರ್

ಕಾರ್ಕಳ, ನ.30: ದೇಶದ ಸಾಂಸ್ಕೃತಿಕ ಬೇರುಗಳನ್ನು ಗಟ್ಟಿಗೊಳಿಸುವ ಕಾರ್ಯ ನಡೆಯಬೇಕಿದ್ದು, ಈ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಹತ್ತರ ಕೊಡುಗೆ ನೀಡುತ್ತಿದೆ,ಇದಲ್ಲದೇ ಆಳ್ವಾಸ್ ಶಿಕ್ಷಣ ಸಂಸ್ಥೆಯು ಶಿಕ್ಷಣದ ಜೊತೆಗೆ ರಾಷ್ಟ್ರೀಯತೆ ಹಾಗೂ ಸಾಮರಸ್ಯ ಮೂಡಿಸುವ ಕೆಲಸ ಮಾಡುತ್ತಿದೆ ಎಂದು…

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶಾಸಕ ಸುನಿಲ್ ಕುಮಾರ್ ನಿವಾಸಕ್ಕೆ ಭೇಟಿ

ಕಾರ್ಕಳ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ರವಿವಾರ ಬೆಳಗ್ಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಶೃಂಗೇರಿಗೆ ಆಗಮಿಸಿದ್ದ ಕೇಂದ್ರ ಸಚಿವರು, ಬಳಿಕ ಅಲ್ಲಿಂದ ಕಾರ್ಕಳ ಶಾಸಕರ ನಿವಾಸಕ್ಕೆ ಆಗಮಿಸಿದರು. ಶಾಸಕರ ಕುಟುಂಬದವರು…

ಮುನಿಯಾಲು ಪಬ್ಲಿಕ್ ಸ್ಕೂಲ್ ನ ವಾರ್ಷಿಕೋತ್ಸವ- ನೂತನ ಸಭಾಂಗಣಕ್ಕೆ ಶಾಸಕರ ನಿಧಿಯಿಂದ ರೂ. 25 ಲಕ್ಷ ಅನುದಾನ- ಶಾಸಕ ವಿ. ಸುನಿಲ್ ಕುಮಾರ್ ಘೋಷಣೆ

ಹೆಬ್ರಿ: ಮುನಿಯಾಲಿನ ಕೆ. ಪಿ. ಎಸ್ ಶಾಲೆಯ ಪದವಿ ಪೂರ್ವ ವಿಭಾಗದ ವಾರ್ಷಿಕೋತ್ಸವ ಸಮಾರಂಭವು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಪದ್ಮಾವತಿ ಕಲಾಮಂದಿರದಲ್ಲಿ ನೆರವೇರಿತು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ವಿ ಸುನಿಲ್ ಕುಮಾರ್ ಮಾತನಾಡಿ, ತಾಲೂಕಿನ ಸುಸಜ್ಜಿತ ಸರಕಾರಿ ಶಾಲೆಗಳಲ್ಲಿ…

ಅಭಿವೃದ್ಧಿ ಯೋಜನೆಗಳಿಗೆ ಮಂಜೂರಾದ ಅನುದಾನವನ್ನು ವಾಪಾಸು ಕಳಿಸಿ ಕಾರ್ಕಳದ ಅಭಿವೃದ್ಧಿಗೆ ಶಾಸಕ ಸುನಿಲ್ ಕುಮಾರ್ ಅಡ್ಡಗಾಲು: ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಗಂಭೀರ ಆರೋಪ

ಕಾರ್ಕಳ, ನ.29: ಕಾರ್ಕಳ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರಕ್ಕೆ ಒತ್ತಡ ಹಾಕಿ ಅನುದಾನ ಮಂಜೂರು ಮಾಡುವ ನನ್ನ ಪ್ರಯತ್ನಕ್ಕೆ ಶಾಸಕ ಸುನಿಲ್ ಕುಮಾರ್ ಅಡ್ಡಗಾಲು ಹಾಕುತ್ತಿದ್ದು, ಕೇವಲ ತನ್ನ ವೈಯುಕ್ತಿಕ ಸ್ವಾರ್ಥಕ್ಕಾಗಿ, ಸರ್ಕಾರದಿಂದ ಮಂಜೂರಾದ ಅನುದಾನವನ್ನು ವಾಪಾಸು ಕಳುಹಿಸಿ ಆ…

ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ-ಡಿಸಿಎಂ ಒಗ್ಗಟ್ಟಿನ ಮಂತ್ರ

ಬೆಂಗಳೂರು, ನ.29: ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕಾಂಗ್ರೆಸ್​​ನಲ್ಲಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ಈ ಕಾರಣಕ್ಕೆ ಪಕ್ಷದ ಹೈಕಮಾಂಡ್ ಸೂಚನೆಯಂತೆ ನಾನು ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ರೇಕ್​ಫಾಸ್ಟ್ ಮೀಟಿಂಗ್ ನಡೆಸಿದ್ದೇವೆ. ನಮ್ಮಿಬ್ಬರ ನಡುವೆ ಯಾವುದೇ ಗೊಂದಲಗಳಿಲ್ಲ ಎಂದು ಸಿಎಂ ಸಿದ್ಧರಾಮಯ್ಯ…

ಬೆಳೆ ಪರಿಹಾರದ ಹಣವನ್ನು ಬ್ಯಾಂಕ್ ಗಳು ರೈತರ ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು, ನ,29: ರೈತರ ಬೆಳೆ ಪರಿಹಾರದ ಹಣವನ್ನು ಬ್ಯಾಂಕುಗಳು ರೈತರ ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ನೈಸರ್ಗಿಕ ವಿಕೋಪಗಳಾದ ಅತೀವೃಷ್ಟಿ, ಪ್ರವಾಹ, ಬರ ಪರಿಸ್ಥಿತಿ, ಆಲಿಕಲ್ಲು ಮಳೆಯಿಂದ ಸ್ಥಳೀಯವಾಗಿ ಉಂಟಾಗುವ ಬೆಳೆಹಾನಿ ಪ್ರಕರಣಗಳಲ್ಲಿ…

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ವಿವೇಕ ಜಾಗೃತಿ ಉಪನ್ಯಾಸ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು, ಮಂಗಳೂರಿನ ರಾಮಕೃಷ್ಣ ಮಿಷನ್ ಸಹಯೋಗದೊಂದಿಗೆ ನವೆಂಬರ್ 26 ರಂದು “ಲೀಡ್ ಫ್ರಮ್ ವಿದಿನ್: ಟ್ರಾನ್ಸ್ಫಾರ್ಮಿಂಗ್ ಸೆಲ್ಫ್ ಬಿಫೋರ್ ಟ್ರಾನ್ಸ್ಫಾರ್ಮಿಂಗ್ ಸೊಸೈಟಿ” ಎಂಬ ವಿಷಯದ ಬಗೆಗೆ ವಿವೇಕ ಜಾಗೃತಿ ಉಪನ್ಯಾಸ ಸರಣಿಯ ಅಧಿವೇಶನವನ್ನು…