ಪುತ್ತೂರು: ನಾಪತ್ತೆಯಾಗಿದ್ದ ಮಹಿಳೆಯ ತಲೆಬುರುಡೆ, ಎಲುಬುಗಳು ಪತ್ತೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಂಬ್ರದ ಒಳಮೊಗ್ರು ಗ್ರಾಮದ ಕಾಡಿನಲ್ಲಿ ಮಹಿಳೆಯ ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆಯಾಗಿದ್ದು, ತಿಂಗಳ ಹಿಂದೆ ನಾಪತ್ತೆಯಾಗಿದ್ದ ನಳಿನಿ ಎಂಬವರದ್ದು ಎಂದು ಗುರುತಿಸಲಾಗಿದೆ. ಮಹಿಳೆಯ ತಲೆಗೂದಲು ನೇಣುಕುಣಿಕೆಯಲ್ಲಿ ಜೋತಾಡುತ್ತಿದ್ದು, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ…

ಉಡುಪಿ : ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ: ಸ್ಕೂಟರ್ ಸೇರಿದಂತೆ 740 ಗ್ರಾಂ ತೂಕದ ಗಾಂಜಾ ವಶಕ್ಕೆ

ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಮಹಮ್ಮದ್‌ ಸಪಾಝ್‌ (29)ಹಾಗೂ ಪುತ್ತೂರು ಗ್ರಾಮದ ಸಂತೆಕಟ್ಟೆಯ…

ಶತಮಾನೋತ್ಸವ ಸಂಭ್ರಮದಲ್ಲಿ ನೆಲ್ಲಿಕಾರು ಪ್ರಾಥಮಿಕ ಶಾಲೆ: ಶಾಲಾ ಹಳೆವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ ಬರಹಗಳು, ಭಾವಚಿತ್ರಗಳ ಆಹ್ವಾನ

ಮೂಡುಬಿದಿರೆ : ಮೂಡುಬಿದಿರೆ ತಾಲೂಕಿನ ನೆಲ್ಲಿಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಶತಮಾನೋತ್ಸವ ಸಂಭ್ರಮದಲ್ಲಿದ್ದು, 2025ರ ಏಪ್ರಿಲ್ ಅಥವಾ ಮೇ ಮೊದಲ ವಾರದಲ್ಲಿ ಎರಡು ದಿನಗಳ “ಶತಮಾನೋತ್ಸವ ಸಂಭ್ರಮ” ಸಮಾರಂಭವನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಹಿನ್ನಲೆಯಲ್ಲಿ ಶಾಲೆಯ ಗತ ವರ್ಷದ ನೆನಪಿನಲ್ಲಿ…

ವಕ್ಫ್ ಬೋರ್ಡ್ ವಿವಾದ:ಕರ್ನಾಟಕದಾದ್ಯಂತ ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು:ವಕ್ಫ್ ವಿವಾದ ತೀವ್ರಗೊಂಡಿದ್ದು ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸುತ್ತಿದೆ. ಇಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.ಬಳ್ಳಾರಿಯಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ವಕ್ಫ್​ ಬೋರ್ಡ್ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಿದ್ದಾರೆ.…

ನಾಳೆ ನ.04ರಂದು ಕಾರ್ಕಳದಲ್ಲಿ ಜಾನ್ಸ್ ಹೈಟೆಕ್ ಅಗ್ರಿ ಸೊಲ್ಯೂಷನ್ಸ್ ಕೃಷಿ ಯಂತ್ರೋಪಕರಣಗಳ ಮಳಿಗೆ ಉದ್ಘಾಟನೆ

ಕಾರ್ಕಳ: ಕೃಷಿ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ನಲ್ಲಿ ಹೆಸರಾಗಿರುವ ಜಾನ್ಸ್ ಹೈಟೆಕ್ ಅಗ್ರಿ ಸೊಲ್ಯೂಷನ್ಸ್ ಸಂಸ್ಥೆಯ ನೂತನ ಮಳಿಗೆ ನಾಳೆ (ನ.4 ರಂದು ಸೋಮವಾರ) ಬೆಳಗ್ಗೆ 10 ಗಂಟೆಗೆ ಕಾರ್ಕಳದಲ್ಲಿ ಉದ್ಘಾಟನೆಯಾಗಲಿದೆ. ಈಗಾಗಲೇ ಮೂಡಬಿದಿರೆ,ಸಿದ್ದಕಟ್ಟೆ ಹಾಗೂ ಬಿಸಿರೋಡುಗಳಲ್ಲಿ ಶಾಖೆಗಳನ್ನು ಹೊಂದಿರುವ…

ಸಾಣೂರು: ಕೆರೆಯಲ್ಲಿ ಈಜುತ್ತಿದ್ದಾಗ ಉಸಿರುಕಟ್ಟಿ ವ್ಯಕ್ತಿ ಮೃತ್ಯು

ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಎಂಬಲ್ಲಿ ವ್ಯಕ್ತಿಯೊಬ್ಬರು ಕೆರೆಯಲ್ಲಿ ಈಜುತ್ತಿದ್ದಾಗ ಉಸಿರುಕಟ್ಟಿ ಮೃತಪಟ್ಟಿದ್ದಾರೆ. ಸಾಣೂರಿನ ಕೃಷ್ಣಪ್ಪ (55ವ) ಮೃತಪಟ್ಟವರು. ಅವರು ಲಾರಿಯಲ್ಲಿ ಲೋಡರ್ ಕೆಲಸ ಮಾಡಿಕೊಂಡಿದ್ದು, ನ.02 ರಂದು ಸಾಣೂರು ಗ್ರಾಮ ಮಠದಕೆರೆಯಲ್ಲಿ ಈಜುತ್ತಿರುವಾಗ ಆಕಸ್ಮಿಕವಾಗಿ ಯಾವುದೋ ಕಾರಣದಿಂದ ನೀರಿನಲ್ಲಿ ಮುಳುಗಿ…

ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಜೋಡಿಸಲು ಸರಕಾರದ ಬಳಿ ಹಣವಿಲ್ಲ – ಕೃಷಿಕರಿಗೆ ದ್ರೋಹ ಬಗೆದು ಬೆನ್ನಿಗೆ ಇರಿದ ಕಾಂಗ್ರೆಸ್ ಸರಕಾರ- ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾರ್ ಆಕ್ರೋಶ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಸುಮಾರು 250 ಕಿಂಡಿ ಅಣೆಕಟ್ಟುಗಳು ಸೇರಿದಂತೆ ಉಡುಪಿ ಜಿಲ್ಲೆಯ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸಲು ಅನುದಾನ ನೀಡಲು ರಾಜ್ಯ ಕಾಂಗ್ರೆಸ್‌ ಸರಕಾರದ ಬಳಿ ಹಣವಿಲ್ಲ. ಕೃಷಿಕರಿಗೆ ಸರಕಾರ ದ್ರೋಹ ಬಗೆಯುವ ಮೂಲಕ ರೈತರ ಬೆನ್ನಿಗೆ ಇರಿದಿದೆ…

ಮುಂಡ್ಕೂರು : ಕ್ಯಾನ್ಸರ್ ನಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ: ಕಳೆದೆರಡು ತಿಂಗಳಿನಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಡ್ಕೂರು ನಿವಾಸಿ ಬಿ. ಮಂಜುನಾಥ (73) ಆತ್ಮಹತ್ಯೆ ಮಾಡಿಕೊಂಡವರು. ಅವರು ಕಳೆದ ಎರಡು ತಿಂಗಳಿನಿಂದ ಕ್ಯಾನ್ಸರ್‌ ಖಾಯಿಲೆಯಿಂದ ಬಳಲುತ್ತಿದ್ದು, ಅ.30 ರಂದು ರಾತ್ರಿ ಮನೆಯಿಂದ ಹೇಳದೆ…

ಅಜೆಕಾರು ಬಾಲಕೃಷ್ಣ ಪೂಜಾರಿ ಸಂಶಯಾಸ್ಪದ ಸಾವು ಪ್ರಕರಣಕ್ಕೆ ಮಹತ್ವದ ತಿರುವು: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಎಂದು ದೃಢ: ಪೊಲೀಸರಿಗೆ ಮಹತ್ವದ ಸಾಕ್ಷ್ಯ  ಲಭ್ಯ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ಪತ್ನಿ ಹಾಗೂ ಅವಳ ಪ್ರಿಯಕರ ಸೇರಿ ಗಂಡನಿಗೆ ವಿಷಪ್ರಾಶನ ಮಾಡಿ ಹತ್ಯೆಗೆ ಯತ್ನಿಸಿ ಅದು ಫಲಿಸದಿದ್ದಾಗ ಉಸಿರುಗಟ್ಟಿಸಿ ಕೊಲೆಗೈದ ಪ್ರಕರಣವು ಇಡೀ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಈ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು…

ಅಮೆಜಾನ್‌ ಕಂಪನಿಗೆ ಬರೊಬ್ಬರಿ 30 ಕೋಟಿ ರೂ. ವಂಚನೆ: ಇಬ್ಬರುಆರೋಪಿಗಳು ಅಂದರ್

ಮಂಗಳೂರು: ಅಮೆಜಾನ್‌ ಕಂಪನಿಗೆ ಬರೊಬ್ಬರಿ 30 ಕೋಟಿ ರೂ. ವಂಚಿಸಿದ್ದ ಆರೋಪಿಗಳನ್ನು ಮಂಗಳೂರಿನ ಉರ್ವಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ರಾಜ್ಯದ ಧೋಪುರ್ ಜಿಲ್ಲೆಯ ನಿವಾಸಿ ರಾಜಕುಮಾರ್ ಮೀನಾ (23), ಕರೌಲಿ ಜಿಲ್ಲೆಯ ಸುಭಾಸ್ ಗುರ್ಜರ್ (27) ಬಂಧಿತ ಆರೋಪಿಗಳು. ಆರೋಪಿಗಳು…