ನಾಡ್ಪಾಲು: ಮದ್ಯವ್ಯಸನಿ ಬಾವಿಗೆ ಹಾರಿ ಆತ್ಮಹತ್ಯೆ

ಹೆಬ್ರಿ: ಹೆಬ್ರಿಯ ನಾಡ್ಪಾಲು ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಡ್ಪಾಲು ನಿವಾಸಿ ಉಮೇಶ (52ವ) ಆತ್ಮಹತ್ಯೆ ಮಾಡಿಕೊಂಡವರು. ಉಮೇಶ ರವರು ಕೂಲಿ ಕೆಲಸ ಮಾಡಿಕೊಂಡಿದ್ದು ವಿಪರಿತ ಮದ್ಯಪಾನ ಮಾಡುವ ಚಟ ಹೊಂದಿದ್ದರು. ಅವರು ಮಾನಸಿಕವಾಗಿ ಮನನೊಂದು ಜೀವನದಲ್ಲಿ…

ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ : ಸವಾರ ಸ್ಥಳದಲ್ಲೇ ಸಾವು

ಕಡಬ : ಚಲಿಸುತ್ತಿದ್ದ ಸ್ಕೂಟಿಗೆ ಮರ ಬಿದ್ದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರದಂದು ಪಂಜ ಕಡಬ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಪುಳಿಕುಕ್ಕು ಸಮೀಪದ ತಿರುವಿನಲ್ಲಿ ಬೃಹತ್ ಗಾತ್ರದ…

ಮಂಗಳೂರು: ಬೈಕ್ ಪಲ್ಟಿ : ಓರ್ವ ಮೃತ್ಯು, ಇನ್ನೊರ್ವ ಗಂಭೀರ

ಮಂಗಳೂರು: ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದ ಬೈಕ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನೇತ್ರಾವತಿ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡಿರುವ ಘಟನೆ ನ. 1 ರಂದು ಶುಕ್ರವಾರ ಸಂಜೆ ಮಹಾಕಾಳಿ ಪಡ್ಪು…

ಕುಂದಾಪುರ: ಮನೆಯಲ್ಲಿ ಗಾಂಜಾ ದಾಸ್ತಾನು : ಮಹಿಳೆ ಸಹಿತ ಇಬ್ಬರ ಬಂಧನ

ಉಡುಪಿ: ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಮಹಿಳೆ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ಕುಂದಾಪುರ ತಾಲೂಕಿನ‌ ಗುಲ್ವಾಡಿ ಗ್ರಾಮದ ಉದಯ ನಗರ ಎಂಬಲ್ಲಿ ನಡೆದಿದೆ. ಗುಲ್ವಾಡಿ ಗ್ರಾಮದ ಉದಯನಗರ ನಿವಾಸಿಗಳಾದ ನಜರುಲ್ಲಾ ಖಾನ್‌ (40) ಹಾಗೂ ಫಾತಿಮಾ(33)…

ರಾಜ್ಯದಲ್ಲಿ ತಯಾರಿಸುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದಲ್ಲಿ ತಯಾರಿಸುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿಯೂ ಹೆಸರು ಬರೆಯುವುದನ್ನು ಕಡ್ಡಾಯಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ 69 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿಎಂ, ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಿಸುವ…

ಕನ್ನಡ ಮತ್ತು ಸಂಸ್ಕತಿ ಇಲಾಖೆ ಎಡವಟ್ಟು : ಮಂಗಳೂರಿನಿಂದ ಬೆಂಗಳೂರಿಗೆ ಕರೆಸಿ ಸಮಾಜ ಸೇವಕನಿಗೆ ಅವಮಾನ

ಮಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿಯಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಶಸ್ತಿಗೆ ಆಯ್ಕೆಯಾಗಿದ್ದೀರಿ ಎಂದು ಮಂಗಳೂರಿನ ಸಮಾಜ ಸೇವಕರೊಬ್ಬರಿಗೆ ಫೋನ್ ಕರೆ ಮಾಡಿ ಬೆಂಗಳೂರಿಗೆ ಕರೆಸಿಕೊಂಡು ಇನ್ನೇನು ಪ್ರಶಸ್ತಿ ಸ್ವೀಕರಿಸಲು ಹೋಗಬೇಕು ಎನ್ನುವಷ್ಟರಲ್ಲಿ ನಿಮಗೆ ಪ್ರಶಸ್ತಿ ಇಲ್ಲ ಎಂದು…

ಕಾರ್ಕಳದಲ್ಲಿ 69ನೇ ಕನ್ನಡ ರಾಜ್ಯೋತ್ಸವ: ಕನ್ನಡ ವ್ಯಾವಹಾರಿಕ ಭಾಷೆಯಾಗಿ ಬೆಳೆಯಲಿ: ತಹಶಿಲ್ದಾರ್ ಡಾ.ಪ್ರತಿಭಾ ಆರ್

ಕಾರ್ಕಳ: ಕನ್ನಡಿಗರ ಹೆಗ್ಗುರುತು ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಹೊಣೆಯಾಗಿದೆ .ಅಖಂಡ ಕರ್ನಾಟಕದ ಉಳಿವಿಗಾಗಿ ಕನ್ನಡಿಗರು ಕಂಕಣಬದ್ಧರಾಗಬೇಕು, ಕನ್ನಡ ಅಮೃತ ಭಾಷೆಯಾಗಿ ಮನೆ-ಮನಗಳಲ್ಲಿ ರಾರಾಜಿಸಲಿ.ಸ್ಪಷ್ಟ ಕನ್ನಡ, ಸ್ಪುಟ ಕನ್ನಡ ನಮ್ಮ ನಾಲಿಗೆಗಳಲ್ಲಿ ನಲಿದಾಡಲಿ. ಅಖಂಡ ಕರ್ನಾಟಕ ಇನ್ನಷ್ಟು ಬಲಿಷ್ಟಗೊಳ್ಳಲು ಶ್ರಮಿಸೋಣ ಎಂದು…

ಉಳ್ಳಾಲ: ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿಯ ಬಂಧನ

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಆರೋಪಿತರಿಂದ 2,04,000…

ಕಟೀಲು ನಿವಾಸಿ ತಾರಾನಾಥ ಹತ್ಯೆ ಪ್ರಕರಣ; ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು :ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂಲ್ಕಿ ತಾಲೂಕು ಕೊಂಡೆಮೂಲ ಗ್ರಾಮದ ಕಟೀಲು ನಿವಾಸಿ ಬಾಬು ಮುಗೇರ ಎಂಬವರ ಮಗ ತಾರಾನಾಥ (39) ಎಂಬವರ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಟೀಲು ನಿವಾಸಿ ದೇವಕಿ ಎಂದು ಗುರುತಿಸಲಾಗಿದೆ.…

ಅಜೆಕಾರು: ಬೈಕ್-ಕಾರು ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಮಂಗಳಾನಗರದ ನಿವಾಸಿ ಪ್ರತಾಪ ಶೆಟ್ಟಿ(33) ಎಂಬವರು ಗಾಯಗೊಂಡ ಘಟನೆ ಶುಕ್ರವಾರ ಮುಂಜಾನೆ ಅಜೆಕಾರು ಸಮೀಪದ ಹೆರ್ಮುಂಡೆ ಕ್ರಾಸ್ ಬಳಿ ಸಂಭವಿಸಿದೆ. ಪ್ರತಾಪ್ ಶೆಟ್ಟಿಯವರು ಬೈಕಿನಲ್ಲಿ ತಮ್ಮ ಮನೆಯಿಂದ ಅಜೆಕಾರಿಗೆ ಬರುತ್ತಿದ್ದ…