ಉಡುಪಿ-ಕುಂದಾಪುರದಿಂದ ತಿರುಪತಿಗೆ ನೇರ ರೈಲು ಸಂಚಾರ ಸೇವೆ ಆರಂಭ: ನನಸಾದ ಉಡುಪಿ ಜಿಲ್ಲೆಯ ಜನರ ದಶಕದ ಕನಸು
ಉಡುಪಿ : ತಿರುಪತಿ ಮತ್ತು ಉಡುಪಿ ಕುಂದಾಪುರ ನಡುವೆ ನೇರ ರೈಲು ಸೇವೆ ಬೇಕು ಎನ್ನುವ ದಶಕಗಳ ಕನಸು ನನಸಾಗಿದ್ದು, ಹೈದರಾಬಾದ್ ಮಹಾನಗರಿಯ ಜತೆಯೂ ಈ ಮೂಲಕ ರೈಲು ಸೇವೆ ಆರಂಭವಾಗಿದೆ. ಬುಧವಾರ ಮತ್ತು ಶನಿವಾರ ಸಂಜೆ 5ಕ್ಕೆ ಕುಂದಾಪುರ ಉಡುಪಿ…
ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ: ಚಾರ್ಮಾಡಿ ಘಾಟ್ನಲ್ಲಿ ಮತ್ತೆ ಗುಡ್ಡ ಕುಸಿತ, ಪ್ರಯಾಣಿಕರ ಪರದಾಟ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನಲ್ಲಿ ಸಾಲು ಸಾಲು ಗುಡ್ಡ ಕುಸಿತ ಉಂಟಾಗಿದೆ. ಮತ್ತೊಂದೆಡೆ ಮಳೆ ನೀರು ರಸ್ತೆಯ ಮೇಲೆ ನದಿಯಂತೆ ಹರಿಯುತ್ತಿದೆ. ಇದರಿಂದ ಚಾರ್ಮಾಡಿ ಘಾಟ್ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು,ವಾಹನ…
ಉಡುಪಿ: ಕಾರು ಬ್ರೇಕ್ ಫೇಲಾಗಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಉಡುಪಿ: ಕಾರೊಂದು ಬ್ರೇಕ್ ಫೇಲಾಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದ್ರಾಳಿ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬುಧವಾರ ನಡೆದಿದೆ. ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಮೃತ ದುರ್ದೈವಿ. ಇಂದ್ರಾಳಿ ದೇವಸ್ಥಾನದಿಂದ ಕಡೆಯಿಂದ ಇಳಿಜಾರಿನಲ್ಲಿ ವೇಗವಾಗಿ…
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : ಮತ್ತೆ ಮೂವರು ಆರೋಪಿಗಳು ಅರೆಸ್ಟ್
ಮಂಗಳೂರು: ಮಾಜಿ ಶಾಸಕ ಮೊಯಿದ್ದಿನ್ ಬಾವಾ ಸಹೋದರ, ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬುಧವಾರ (ಅ9) ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಕರಣ ಪ್ರಮುಖ ಮಾಸ್ಟರ್ ಮೈಂಡ್ ಎ2 ಆರೋಪಿ ಅಬ್ದುಲ್…
ದಸರಾ ಹಬ್ಬಕ್ಕೆ ರಜೆ ನೀಡದ ಆರೋಪ: ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳ ವಿರುದ್ಧ ಪ್ರಮೋದ್ ಮುತಾಲಿಕ್ ಆಕ್ರೋಶ
ಧಾರವಾಡ : ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ದಸರಾ ಹಬ್ಬಕ್ಕೆ ರಜೆ ನೀಡದೇ ಶಿಕ್ಷಣ ಇಲಾಖೆಯ ನಿಯಮಾವಳಿ ಉಲ್ಲಂಘಿಸಿದ್ದಾರೆ ಎಂದು ಶ್ರೀರಾಮ ಸೇನೆ ಮುಖಂಡ ಮುತಾಲಿಕ್ ಆರೋಪಿಸಿದ್ದಾರೆ. ದಸರಾ ರಜೆಯನ್ನು ಸರ್ಕಾರ ವು ಕರ್ನಾಟಕದಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದೆ. ಆದರೆ ಕ್ರಿಶ್ಚಿಯನ್ ಶಾಲೆಗಳಲ್ಲಿ…
ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಉಡುಪಿ : ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಜಿ ಸಚಿವ, ಬಿಜೆಪಿ…
ಹರಿಯಾಣದಲ್ಲಿ ಬಿಜೆಪಿಯ ಗೆಲುವು ಜನತೆ ಪ್ರಧಾನಿ ನರೇಂದ್ರ ಮೋದಿಯವರ ಮೇಲಿಟ್ಟಿರುವ ನಂಬಿಕೆಯ ಪ್ರತೀಕ : ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ
ಕಾರ್ಕಳ: ಕಾಂಗ್ರೆಸ್ಸಿನ ಅಪಪ್ರಚಾರ, ಗ್ಯಾರಂಟಿ ಯೋಜನೆಗಳ ಪೊಳ್ಳು ಆಶ್ವಾಸನೆಯ ಹೊರತಾಗಿಯೂ ಹರಿಯಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾಪಾರ್ಟಿಯು ಹ್ಯಾಟ್ರಿಕ್ ಗೆಲುವು ಸಾಧಿಸಿ ಚುನಾವಣೋತ್ತರ ಸಮೀಕ್ಷೆಯನ್ನು ಬುಡಮೇಲು ಮಾಡಿದ ಜನತೆ ಭಾರತೀಯ ಜನತಾ ಪಾರ್ಟಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ…
ಗ್ರಾ.ಪಂ ನೌಕರರು, ಅಭಿವೃಧ್ದಿ ಅಧಿಕಾರಿಗಳ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಶೀಘ್ರ ಸ್ಪಂದಿಸಲಿ : ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ
ಉಡುಪಿ: ರಾಜ್ಯದಾದ್ಯಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ನೌಕರರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದಿಯಾಗಿ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ಸಾರ್ವಜನಿಕರ ತುರ್ತು ಕಾರ್ಯಗಳಿಗೆ ಸಮಸ್ಯೆ ಉಂಟಾಗುತ್ತಿದ್ದು ರಾಜ್ಯ…
ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : ಪ್ರಮುಖ ಆರೋಪಿ ಆಯೇಷಾ ಬಂಧನ
ಮಂಗಳೂರು : ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣದ ಕುರಿತಂತೆ ಪೊಲೀಸರು ಎ1 ಆರೋಪಿಯಾಗಿದ್ದ ರೆಹಮತ್ ಆಲಿಯಾಸ್ ಆಯೇಷಾಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್…
ಮುನಿಯಾಲು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಮುಟ್ಲುಪಾಡಿ ಸತೀಶ್ ಶೆಟ್ಟಿ ಆಯ್ಕೆ
ಹೆಬ್ರಿ: ಮುನಿಯಾಲು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಮುಟ್ಲುಪಾಡಿ ಸತೀಶ್ ಶೆಟ್ಟಿ ಮುಂದಿನ 3 ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ. ಮುನಿಯಾಲು ಮಾರಿಯಮ್ಮ ದೇವಸ್ಥಾನದ ವಠಾರದಲ್ಲಿ ಬಂಟರ ಸಂಘದ ಪದಾಧಿಕಾರಿಗಳ ಸಭೆ ನಡೆದಿದ್ದು, ಈ ಹಿಂದಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಅವಧಿ ಮೂರು…
