ಮಂಗಳೂರು :ಎಲೆಕ್ಟ್ರಿಕ್ ಆಟೋ ರಿಕ್ಷಾ ಚಾಲನೆಗೆ ಅವಕಾಶ ಖಂಡಿಸಿ ಪ್ರತಿಭಟನೆ
ಮಂಗಳೂರು :ಎಲೆಕ್ಟ್ರಿಕ್ಆಟೋ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅವಕಾಶ ನೀಡಿರುವುದನ್ನು ವಿರೋಧಿಸಿ ಇತರ ಆಟೋ ರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಆಟೊ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿದರು. ನಗರದ ಜ್ಯೋತಿ ಸರ್ಕಲ್ನಿಂದ ಮೆರವಣಿಗೆ ಆರಂಭಿಸಿದ ಆಟೋ ರಿಕ್ಷಾ ಚಾಲಕರು,…
ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಎನ್.ಎಸ್.ಎಸ್. ರಾಷ್ಟ್ರೀಯ ಸದ್ಭಾವನಾ ದಿನಾಚರಣೆ
ಕಾರ್ಕಳ: ಭಾರತವು ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ. ಇಲ್ಲಿ ಹಲವು ಧರ್ಮಗಳ ಜನರು ವಾಸಿಸುತ್ತಿದ್ದು, ಎಲ್ಲಾ ಧರ್ಮಗಳೂ ಅದರದ್ದೇ ಆದ ಸಿದ್ಧಾಂತವನ್ನು ಪ್ರತಿಪಾದಿಸಿದರೂ ಎಲ್ಲಾ ಧರ್ಮಗಳ ಮೂಲತತ್ವ ಮಾನವೀಯತೆಯಾಗಿದೆ ಎಂದು ಮಾಜಿ ಸೈನಿಕರ ವೇದಿಕೆಯ ಅಧ್ಯಕ್ಷ ವಿಜಯ್ ಫೆರ್ನಾಂಡಿಸ್ ಅಭಿಪ್ರಾಯಪಟ್ಟರು. ಅವರು…
ಪುತ್ತೂರು: ಬನ್ನೂರು ಕರ್ಮಲ ಬಳಿ ವೇಶ್ಯಾವಾಟಿಕೆ!: ಪೊಲೀಸ್ ದಾಳಿಯ ವೇಳೆ ಆರೋಪಿಗಳು ಪರಾರಿ
ಪುತ್ತೂರು : ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿರುವ ಘಟನೆ ಆ.29 ರ ಸಂಜೆ ನಡೆದಿದೆ.…
ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್
ಮಂಗಳೂರು: ಮಾದಕ ವಸ್ತು ಎಂಡಿಎAಎಯನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು 42 ಗ್ರಾಂ ಎಂಡಿಎಂಎ ಸಹಿತ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಕಳನಾಡು ಎಂಬಲ್ಲಿನ ಶಾಜಹಾನ್ ಪಿ.ಎಂ.(32), ಮೂಲತಃ ಕಾಸರಗೋಡು ಅಡೂರಿನ ಪ್ರಸಕ್ತ ಬೆಂಗಳೂರಿನಲ್ಲಿ…
ಇಂದು ಕಾರ್ಕಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ: ಪುರಸಭೆ ಆಡಳಿತ ಬಿಜೆಪಿ ತೆಕ್ಕೆಗೆ- ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ ಆಯ್ಕೆ
ಕಾರ್ಕಳ: ಕಳೆದ ಒಂದೂವರೆ ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಕಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಇಂದು ನಡೆಯಲಿದೆ. ಬಿಜೆಪಿಗೆ ಸ್ಪಷ್ಟ ಬಹುಮತವಿರುವ ಹಿನ್ನಲೆಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಪುರಸಭೆಯ ಒಟ್ಟು 23 ಸದಸ್ಯಬಲದಲ್ಲಿ ಪ್ರಸ್ತುತ ಬಿಜೆಪಿ ಹಾಗೂ…
ಕಾಪು ಪುರಸಭೆಯಲ್ಲಿ ಬಿಜೆಪಿ, SDPI ಅದಿಕಾರ ಹಂಚಿಕೆ: ಶಾಸಕ ಸುನೀಲ್ ಕುಮಾರ್ ಅವರಿಗೆ ಮುಖಭಂಗವಲ್ಲವೇ?: ಕಾಂಗ್ರೆಸ್ ಮುಖಂಡ ಶುಭದ ರಾವ್ ಪ್ರಶ್ನೆ
ಕಾರ್ಕಳ:ಕಾಪು ಪುರಸಭೆ ಆಡಳಿತದಲ್ಲಿ ಬಿಜೆಪಿ ಹಾಗೂ SDPI ಸೇರಿ ಅಧಿಕಾರ ಹಿಡಿದಿದ್ದು ಈ ಬಗ್ಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಯಾಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶುಭದ ರಾವ್ ಪ್ರಶ್ನಿಸಿದ್ದಾರೆ. ಬಂಟ್ವಾಳ ಪುರಸಭೆಯಲ್ಲಿ ಕಾಂಗ್ರೆಸ್ ,SDPI ಆಡಳಿತದ ಬಗ್ಗೆ ವಿರೋಧ…
ಎರ್ಲಪಾಡಿ: ಸ್ಪೀಡ್ ಪೋಸ್ಟ್ ವಿಚಾರದಲ್ಲಿ ಅಂಚೆಪಾಲಕನಿಗೆ ಹಲ್ಲೆ
ಕಾರ್ಕಳ: ಕಾರ್ಕಳ ತಾಲೂಕಿನ ಎರ್ಲಪಾಡಿಯಲ್ಲಿ ಸ್ಪೀಡ್ ಪೋಸ್ಟ್ ವಿಚಾರದಲ್ಲಿ ಅಂಚೆಪಾಲಕನಿಗೆ(ಪೋಸ್ಟ್ಮ್ಯಾನ್) ಹಲ್ಲೆ ನಡೆಸಿರುವ ಘಟನೆ ಆ.28ರಂದು ನಡೆದಿದೆ. ಮೂಲತಃ ಕೊಪ್ಪಳದ ಮಲ್ಲಿಕಾರ್ಜುನ ಅವರು ಕಳೆದ 10 ತಿಂಗಳಿನಿAದ ಎರ್ಲಪಾಡಿಯಲ್ಲಿ ಪೋಸ್ಟ್ಮ್ಯಾನ್ ಆಗಿ ಕೆಲಸ ಮಾಡಿಕೊಂಡಿರುತ್ತಾರೆ. ಆ.28 ರಂದು ಯರ್ಲಪಾಡಿ ಗ್ರಾಮದ ರಾಜೇಶ್…
ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ವಿಚಾರ: ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಆಲಿಸಿದ ನ್ಯಾಯಪೀಠವು ಆಗಸ್ಟ್.31ಕ್ಕೆ ವಿಚಾರಣೆಯನ್ನು ಮುಂದೂಡಿದೆ.…
ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಆಸ್ಪತ್ರೆಯಿಂದ ಬಿಡುಗಡೆ: ಡ್ರಗ್ಸ್ ಜಾಲದ ಹಿಂದಿರುವ ವ್ಯಕ್ತಿಗಳಿಗಾಗಿ ಬಲೆ ಬೀಸಿದ ಪೊಲೀಸರು: ಶಂಕಿತರನ್ನು ಬೆಂಗಳೂರು ಹಾಗೂ ತಿರುಪತಿಗೆ ಕರೆದೊಯ್ದ ಪೊಲೀಸರು ?
ಕಾರ್ಕಳ: ಇಲ್ಲಿನ ಅಯ್ಯಪ್ಪ ನಗರದಿಂದ ಅಪಹರಣಕ್ಕೊಳಗಾಗಿ ಅತ್ಯಾ ಚಾರಕ್ಕೀಡಾದ ಸಂತ್ರಸ್ತೆ ಆ. 28ರಂದು ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದು, ಆಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಡ್ರಗ್ಸ್ ಪೆಡ್ಲರ್ಗಾಗಿ ತನಿಖೆ ಮುಂದುವರಿದಿದ್ದು, ಇವರಿಗೆ ಈಗ…
ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ: ಮತ್ತಿಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ?
ಉಡುಪಿ : ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಆ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಈಗಾಗಲೇ ವಶಕ್ಕೆ ಪಡೆದುಕೊಂಡ ಇಬ್ಬರು ಆರೋಪಿಗಳನ್ನು ಅಜ್ಞಾತ…
