ಮಾನಹಾನಿಕರ ಸಂದೇಶ ರವಾನಿಸಿದ ಆರೋಪಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ: ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿನಯ ಡಿ ಬಂಗೇರ

ಕಾರ್ಕಳ: ಕಡ್ತಲ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷೆಯ ಮೇಲೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಮೂಲಕ ಅವಹೇಳನಕಾರಿ ಹಾಗೂ ಮಾನಹಾನಿಕರ ಸಂದೇಶ ಪೋಸ್ಟ್ ಮಾಡಿರುವ ಬಗ್ಗೆ ಅಜೆಕಾರು ಠಾಣೆಯಲ್ಲಿ ದೂರು ದಾಖಲಾಗಿದ್ದು, ದಾಖಲಾಗಿರುವ ಆರೋಪಿಗಳ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ…

ಎಂಎಲ್​ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಭರತ್ ಅಲಿಯಾಸ್ ಯಕ್ಷಿತ್, ದಿನೇಶ್ ಕುರ್ತಮೊಗೆರು ಬಂಧಿತರು. ಸಿಸಿಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ.…

ಅತ್ಯಾಚಾರ ಆರೋಪಿಗೆ ಡ್ರಗ್ಸ್ ಪೂರೈಕೆ ಆರೋಪದಲ್ಲಿ ಹಿಂ.ಜಾ.ವೇ ಕಾರ್ಯಕರ್ತನ ಫೋಟೋ ಬಳಸಿ ಅಪಪ್ರಚಾರ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನಿಂದ ದೂರು

ಕಾರ್ಕಳ; ಯುವತಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಎ1 ಆರೋಪಿ ಅಲ್ತಾಫ್ ಎಂಬಾತನಿಗೆ ಡ್ರಗ್ಸ್ ಪೂರೈಕೆ ಮಾಡಿದ ಆರೋಪದಲ್ಲಿ ಬಂಧಿತನಾಗಿರುವ ಅಭಯ್ ಎಂಬಾತನ ಬದಲಿಗೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಅರವಿಂದ್ ಎಂಬವರ ಫೋಟೋ ಹಾಕಿ ಅಪಪ್ರಚಾರ ಮಾಡಲಾಗುತ್ತಿದ್ದು ಈ ಕುರಿತು ಜಾಗರಣ…

ಉಡುಪಿ: ಕರಂಬಳ್ಳಿಯ ಕೆರೆಗೆ ಬಿದ್ದು ವಿದ್ಯಾರ್ಥಿ ಸಾವು: ಮೃತ ವಿದ್ಯಾರ್ಥಿ ಸಿದ್ಧಾರ್ಥ ಶೆಟ್ಟಿ ಸಾವಿನ ಸುತ್ತ ಅನುಮಾನದ ಹುತ್ತ: ಜತೆಗಿದ್ದ ಸ್ನೇಹಿತರೇ ಈ ಕೃತ್ಯ ಎಸಗಿದರೇ?

ಉಡುಪಿ: ಕರಂಬಳ್ಳಿಯ ಕೆರೆಗೆ ಬಿದ್ದು ವಿದ್ಯಾರ್ಥಿ ಲಕ್ಷ್ಮೀಂದ್ರನಗರದ ನಿವಾಸಿ ಸಿದ್ಧಾರ್ಥ್ ಶೆಟ್ಟಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಹಲವಾರು ರೀತಿಯ ಅನುಮಾನಗಳು ಹುಟ್ಟುಕೊಂಡಿದ್ದು, ಆತನೊಂದಿಗಿದ್ದ ಸ್ನೇಹಿತರೇ ಈ ಕೃತ್ಯ ಎಸಗಿದ್ದಾರೆಯೇ ಎಂಬ ಶಂಕೆ ಮೂಡಿದೆ. ಮಣಿಪಾಲದ ಆಟೋಮೊಬೈಲ್‌ ಎಂಜಿನಿಯರಿಂಗ್‌ ವ್ಯಾಸಂಗ ಮಾಡಿಕೊಂಡಿದ್ದ…

ಮಹಿಳೆ ಅಪಹರಣ ಪ್ರಕರಣದಲ್ಲಿ HD ರೇವಣ್ಣಗೆ ಬಿಗ್ ರಿಲೀಫ್ : ಜಾಮೀನು ರದ್ದು ಕೋರಿ SIT ಸಲ್ಲಿಸಿದ್ದ ಅರ್ಜಿ ವಜಾ!

ಬೆಂಗಳೂರು: ಮೈಸೂರು ಜಿಲ್ಲೆ ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ನೀಡಿರುವ ಜಾಮೀನು ರದ್ದು ಕೋರಿ ಎಸ್ ಐ ಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರಿಂದ ಎಚ್‌ಡಿ ರೇವಣ್ಣಗೆ ಮತ್ತಷ್ಟು ರಿಲೀಫ್ ಸಿಕ್ಕಂತಾಗಿದೆ.…

ಚಾರ ನವೋದಯ ವಿದ್ಯಾಲಯದಲ್ಲಿ ಕನ್ನಡ ಗೀತೆಗಳ ಗಾಯನ “ಗಾನಯಾನ” ಕಾರ್ಯಕ್ರಮ

ಹೆಬ್ರಿ: ಕನ್ನಡ ರಾಜ್ಯೋತ್ಸವ ಆಚರಣೆ ಕೇವಲ ನವೆಂಬರ್ ಒಂದಕ್ಕೆ ಸೀಮಿತವಾಗಿರಬಾರದು ಎನ್ನುವ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವದ ಸುವರ್ಣ ಕರ್ನಾಟಕದ ಅಂಗವಾಗಿ ವರ್ಷವಿಡಿ ಶಾಲಾ ಕಾಲೇಜುಗಳಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ ಮಾಡುವುದರ ಮೂಲಕ ಕನ್ನಡದ ಕಂಪನ್ನು ನಾಡಿನೆಲ್ಲೆಡೆ ಪಸರಿಸುತ್ತಿರುವ ಏಕೈಕ ಸಂಸ್ಥೆ…

ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶ್ರೀ ಕೃಷ್ಣ ಲೀಲೋತ್ಸವ

ಹೆಬ್ರಿ : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 21ನೇ ವರ್ಷದ ಶ್ರೀ ಕೃಷ್ಣ ಲೀಲೋತ್ಸವವು ಮುನಿಯಾಲು ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದ ಸಭಾಂಗಣದಲ್ಲಿ, ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ದೇವರಿಗೆ ಹೂವಿನ ಪೂಜೆ,…

ಬಾಂಗ್ಲಾದೇಶದಂತೆ ಪ್ರಧಾನಿ ನರೇಂದ್ರ ಮೋದಿ ಮನೆಗೆ ನುಗ್ಗಿ ಹೊಡೆಯುವ ದಿನಗಳು ದೂರವಿಲ್ಲ : ಕಾಂಗ್ರೆಸ್ ಶಾಸಕ ಜಿ.ಎಸ್ ಪಾಟೀಲ್ ವಿವಾದಾತ್ಮಕ ಹೇಳಿಕೆ

ಗದಗ: ಇತ್ತೀಚಿನ ದಿನಗಳಲ್ಲಿ ರಾಜಕಾರಣಿಗಳು ತಮ್ಮ ವಿರೋಧಿಗಳ ವಿರುದ್ಧ ಬಾಯಿಗೆ ಬಂ ಬೊಗಳುವ ಚಾಳಿ ಹೆಚ್ಚುತ್ತಲೇ ಇದೆ. ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲರನ್ನು ಬಾಂಗ್ಲಾದೇಶದ ಪ್ರಧಾನಿಯಂತೆ ರಾಜಭನವದಿಂದ ಓಡಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಮಂಗಳೂರಿನ ಎಂಎಲ್‌ಸಿ ಐವನ್…

ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಹೆಬ್ರಿ ತಾಲೂಕಿನ ಚಾರ ಗ್ರಾಮದ ಕಾರಾಡಿ ಎಂಬಲ್ಲಿ ಸೋಮವಾರ ರಾತ್ರಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇವಲಕುAದ ಗ್ರಾಮದ ಸಂತೋಷ್ ಎಂಬವರ ತಂದೆ ರವೀಂದ್ರ(75ವ) ಆತ್ಮಹತ್ಯೆ ಮಾಡಿಕೊಂಡವರು. ರವೀಂದ್ರ ಅವರು ಹೊಟ್ಟೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ…

ಕಾಂಗ್ರೆಸ್ ಮುಖಂಡ,ಉದ್ಯಮಿ ಪದ್ಮನಾಭ ಕೋಟ್ಯಾನ್ ಮನೆ ಡರೋಡೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ-ಚಿನ್ನ, ನಗದು ವಶಕ್ಕೆ

ಮಂಗಳೂರು: ಕಳೆದ ಜೂನ್ 21 ರಂದು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟುವಿನಲ್ಲಿ ನಡೆದ ಕಾಂಗ್ರೆಸ್ ಮುಖಂಡ, ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್‌ರ ಮನೆಗೆ ರಾತ್ರಿ 8 ಗಂಟೆಯ ಸುಮಾರಿಗೆ ಮುಸುಕುಧಾರಿಗಳು ಮನೆಗೆ ನುಗ್ಗಿ ಮನೆ ಮಂದಿಗೆ ಹಲ್ಲೆ ನಡೆಸಿ…