ಆ.21 ರಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನಿಂದ ಸಹಾಯಧನ ಹಾಗೂ ಇತರ ಸಾಮಾಜಿಕ ನೆರವು
ಕಾರ್ಕಳ: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸಂಸ್ಥಾಪಕರ ದಿನವಾದ ಆಗಸ್ಟ್ 21ರಂದು ಸಾಮಾಜಿಕ ನೆರವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ ಕೆ.ಎಂ.ಸಿ. ಬ್ಲಡ್ ಸೆಂಟರ್ನ ನೆರವಿನೊಂದಿಗೆ ರಕ್ತದಾನ ಶಿಬಿರ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ…
ಶಿರಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಅನಿರ್ದಿಷ್ಟಾವಧಿ ರದ್ದು!
ಬೆಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರ-ಬಾಳುಪೇಟೆ ಮಾರ್ಗದ ಅಚ್ಚಂಗಿಯಲ್ಲಿ ಭೂಕುಸಿತ ಸಂಭವಿಸಿದ್ದು, ದುರಸ್ತಿ ಕಾರ್ಯ ನಡೆಯುತ್ತಿರುವ ಕಾರಣ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರವನ್ನು ಅನಿರ್ದಿಷ್ಟಾವಧಿವರೆಗೆ ರದ್ದುಗೊಳಿಸಲಾಗಿದೆ. ವಾರದ ಹಿಂದೆ ಭೂಕುಸಿತ ಸಂಭವಿಸಿದ ಪ್ರದೇಶವ್ಯಾಪ್ತಿಯಲ್ಲೇ ಮತ್ತೆ ಹಳಿಗಳ ಮೇಲೆ ಗುಡ್ಡ ಕುಸಿದಿದ್ದು, ಆಗಸ್ಟ್ 18…
ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಅಹಿಂದ ಒಕ್ಕೂಟದ ರಾಜ್ಯ ಸಂಚಾಲಕ ಭಾಸ್ಕರ ಪ್ರಸಾದ್ ಆಗ್ರಹ
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಯವಂಚಕರು, ತಮ್ಮನ್ನು ಅಧಿಕಾರದಲ್ಲಿ ಕೂರಿಸಿದ ದಲಿತರ ಬೆನ್ನಿಗೆ ಚೂರಿ ಹಾಕಿದ್ದಾರೆ. ದಲಿತ ಸಮುದಾಯದ ಶಾಪ ತಟ್ಟಿದ್ದು, ಮುಡಾ ಹಗರಣದ ಹೊಣೆಹೊತ್ತು ಕೂಡಲೇ ರಾಜೀನಾಮೆ ಕೊಡಬೇಕೆಂದು ‘ಅಹಿಂದ’ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಭಾಸ್ಕರ್ ಪ್ರಸಾದ್ ಒತ್ತಾಯಿಸಿದರು. ಅವರು…
ಕಾರ್ಕಳ:ಮಿಯ್ಯಾರು ಮಾಧವ ಕಾಮತ್ ಅವರಿಗೆ ಅಭಿನಂದನಾ ಸಮಾರಂಭ
ಕಾರ್ಕಳ: ಮಾಧವ ಕಾಮತ್ ಮಿಯ್ಯಾರು ಇವರಿಗೆ 75 ನೇ ಜನ್ಮದಿನದ ಅಂಗವಾಗಿ ಅಭಿನಂದನಾ ಸಮಾರಂಭ ಮಿಯ್ಯಾರು ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ವತಿಯಿಂದ ಮಾಧವ ಕಾಮತ್ ಮತ್ತು ವಂದನಾ ಕಾಮತ್ ದಂಪತಿಯನ್ನು ಅಭಿನಂದಿಸಲಾಯಿತು. ಹಾಗೂ ಅವರ…
ಕಾರ್ಕಳ ವೃತ್ತ ನಿರೀಕ್ಷಕರಿಗೆ ನಿಂದನೆ ಆರೋಪ: ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ದೂರು ದಾಖಲು
ಮಣಿಪಾಲ: ಪರಶುರಾಮ ಥೀಮ್ ಪಾರ್ಕ್ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ವತಿಯಿಂದ ಜು.5 ರಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಕಾರ್ಕಳ ವೃತ ನಿರೀಕ್ಷಕ ಮಂಜಪ್ಪ ಡಿ.ಆರ್ ವಿರುದ್ಧ ಅವಾಚ್ಯವಾಗಿ ನಿಂದಿಸಿದ ಪ್ರಕರಣದ ಕುರಿತಂತೆ ಕಾರ್ಕಳ ಬಿಜೆಪಿ…
ಕಾರ್ಕಳ ಭೊವಿ ಸಮುದಾಯದ ಕುಟುಂಬಗಳ ಮಾಹಿತಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ
ಕಾರ್ಕಳ ಆ 18: ಉಡುಪಿ ಜಿಲ್ಲೆ ಸೇರಿದಂತೆ ಕಾರ್ಕ ಳ ತಾಲೂಕಿನಲ್ಲಿ ವಾಸವಾಗಿರುವ ಭೋವಿ ಸಮುದಾಯದ ಕಲ್ಲುವಡ್ಡರ್ ಹಾಗೂ ಮಣ್ಣುವಡ್ಡರ್ ಕುಟುಂಬಗಳ ಜೀವನಶೈಲಿ ಹಾಗೂ ನಿರ್ವ ಹಿಸುವ ಕೆಲಸಗಳು ಸೇರಿದಂತೆ ಆ ಸಮುದಾಯದ ಸಮಸ್ಯೆಗಳ ಕುರಿತಂತೆ ತಾಲೂಕು ಕಛೇರಿಯಲ್ಲಿ ಕಂದಾಯ ಹಾಗೂ…
ಅಮೃತ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಕ್ರೀಡಾಕೂಟ
ಹೆಬ್ರಿ: ಕ್ರೀಡೆಯಲ್ಲಿ ಸಾಧನೆಯನ್ನು ಮಾಡುವ ಹಂಬಲವನ್ನು ಬೆಳೆಸಿಕೊಳ್ಳಿ. ಅಮೃತ ಭಾರತಿ ಶಾಲೆಯ ವಿದ್ಯಾರ್ಥಿಗಳಿಗೆ ಸಂಸ್ಕಾರಯುತವಾದ ಬೆಳವಣಿಗೆಗೆ ಪೂರಕವಾದ ಭಾರತೀಯ ಸಂಸ್ಕೃತಿಯ ಶಿಕ್ಷಣವನ್ನು ನೀಡುತ್ತಿದೆ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಉತ್ತಮ ಅವಕಾಶ ಮಾಡಿಕೊಡುತ್ತಿದೆ ಎಂದು ಕ್ರೀಡಾಪಟು ಪ್ರಶಾಂತ ಪೈ ಮುದ್ರಾಡಿ ನುಡಿದರು.…
ಕುಸ್ತಿ ಪಂದ್ಯಾಟ : ಕಾರ್ಕಳ ಎಸ್. ವಿ. ಟಿ ಯ ಆರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ಕಾರ್ಕಳ: ಶಿಕ್ಷಣ ಇಲಾಖೆಯ ವತಿಯಿಂದ ನಿವೇದಿತಾ ಪ್ರೌಢ ಶಾಲೆ ಬಸ್ರೂರು ಇಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಕಾರ್ಕಳ ಎಸ್ ವಿ ಟಿ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ಪ್ರಣೀತ್, ಅನ್ವಿತಾ, ಭಾರತಿ, ಶೃತಿ, 9ನೇ ತರಗತಿಯ…
ಪ್ರಾಸಿಕ್ಯೂಷನ್’ಗೆ ಅನುಮತಿ ಬೆನ್ನಲ್ಲೇ ಹೈಕೋರ್ಟ್ ನಲ್ಲಿ ‘ಕೇವಿಯಟ್’ ಸಲ್ಲಿಕೆ!: ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಬಿಗಿಯಾದ ಕಾನೂನು ಕುಣಿಕೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ಅಕ್ರಮವಾಗಿ ಸೈಟ್ ಪಡೆದ ಆರೋಪದ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ವಿಚಾರಣೆಗಾಗಿ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ ಬೆನ್ನಲ್ಲೇ ಹೈಕೋರ್ಟ್ ನಲ್ಲಿ ಕೇವಿಯಟ್ ಅರ್ಜಿ ದಾಖಲಾಗಿದೆ.ಇದರಿಂದ ಸಿಎಂಗೆ ಮುಡಾ ಸಂಕಷ್ಟ ಎದುರಾಗಿದೆ. ಹೈಕೋರ್ಟ್ ವಕೀಲ ಎಸ್.ಪಿ.ಪ್ರದೀಪ್…
ಕೋಲ್ಕತ್ತಾ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಐಎಂಎ ಪತ್ರ
ನವದೆಹಲಿ: ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಭೀಕರ ಹತ್ಯೆ ಖಂಡಿಸಿ ವೈದ್ಯರು ಶನಿವಾರ ದೇಶದಾದ್ಯಂತ ಉಗ್ರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣದ ವಿಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ತಕ್ಷಣವೇ ಮಧ್ಯ ಪ್ರವೇಶ…
