ಹೆಬ್ರಿ ನಾಲ್ಕೂರಿನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ: ಮೂವರ ವಿರುದ್ಧ ಪ್ರಕರಣ ದಾಖಲು
ಹೆಬ್ರಿ: ನಾಲ್ಕೂರು ಗ್ರಾಮದ ಕಜ್ಕೆ ಬೈಲು ಎಂಬಲ್ಲಿನ ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಜ್ಕೆ ಬೈಲು ಎಂಬಲ್ಲಿ ಸ್ಪೋಟಕ ಬಳಸಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ…
ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ಗೆ ಅನುಮತಿ: ಮುಡಾ ಹಗರಣದ ರೂವಾರಿ ಸಿದ್ಧರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು: ಶಾಸಕ ಸುನಿಲ್ ಕುಮಾರ್ ಆಗ್ರಹ
ಉಡುಪಿ ಆ 17: ಮುಡಾ ಸೈಟ್ ಹಂಚಿಕೆ ಹಗರಣದ ರೂವಾರಿ ಸಿದ್ಧರಾಮಯ್ಯನವರೇ ಆಗಿದ್ದು, ನೈತಿಕ ಹೊಣೆಹೊತ್ತು ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಶಾಸಕ ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯ ಭಂಡತನವನ್ನು ಬಿಟ್ಟು ರಾಜೀನಾಮೆ ನೀಡಬೇಕು, ಅವರ ವಿರುದ್ಧ ಕೇಳಿಬಂದಿರುವ ಭ್ರಷ್ಠಾಚಾರದ…
ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ
ಕಾರ್ಕಳ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಕಾರ್ಕಳ ನಗರ ಪೊಲೀಸರು ಶುಕ್ರವಾರ ರಾತ್ರಿ ವಶಪಡಿಸಿಕೊಡಿದ್ದಾರೆ. ಮಂಗಳೂರಿನ ಅಡ್ಡೂರು ಎಂಬಲ್ಲಿನ ಹೊಳೆಯಿಂದ ರಾಶೀಕ್ ಅಡ್ಡೂರು ಎಂಬಾತ ಕಳವು ಮಾಡಿ ನೀಡಿದ ಮರಳನ್ನು ಸಂಪತ್ ಎಂಬಾತ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ. ಕಾರ್ಕಳ ತಾಲೂಕಿನ ಕುಕ್ಕುಂದೂರು…
ಕಾರ್ಕಳ: ಪ್ರಭಾರ ತಹಶೀಲ್ದಾರ್ ಆಗಿ ಪ್ರತಿಭಾ.ಆರ್ ಅಧಿಕಾರ ಸ್ವೀಕಾರ
ಕಾರ್ಕಳ: ಕಾರ್ಕಳದ ಈ ಹಿಂದಿನ ತಹಸೀಲ್ದಾರ್ ನರಸಪ್ಪ ತಹಶೀಲ್ದಾರ್ ಅವರು ಬಳ್ಳಾರಿ ಜಿಲ್ಲೆಗೆ ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ನೂತನ ಪ್ರಭಾರ ತಹಸೀಲ್ದಾರ್ ಆಗಿ ಕಾಪು ತಹಸೀಲ್ದಾರ್ ಪ್ರತಿಭಾ, ಆರ್ ಶನಿವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ತಹಸೀಲ್ದಾರ್ ನರಸಪ್ಪ ಅವರು ಅಧಿಕಾರ ಹಸ್ತಾಂತರಿಸಿದರು.…
ಮಣಿಪಾಲ :ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವು
ಮಣಿಪಾಲ: ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಿಕ್ಕಮಗಳೂರು ಮೂಲದ ಆನಂದ(37) ಸಾವನ್ನಪ್ಪಿರುವರು. ಚಿಕ್ಕಮಗಳೂರು ಮೂಲದ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಚಿಕಿತ್ಸೆಗೆಂದು ಕರೆದುಕೊಂಡು ಬಂದಿದ್ದ ಅವರು ಅವರನ್ನು ಆಸ್ಪತ್ರೆಗೆ ದಾಖಲಿಸಿ ರಾತ್ರಿ ವೇಳೆ ಕಾರಿನೊಳಗೆ ಮಲಗಿಕೊಂಡಿದ್ದರು. ಕಾರಿನ ಗ್ಲಾಸ್ ಅನ್ನು…
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ಇಂದು ಸಂಜೆ 5 ಗಂಟೆಗೆ ನಿಗದಿಯಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ರದ್ದು
ಬೆಂಗಳೂರು : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಸೂಚನೆ ಹೊರಡಿಸಿರುವ ಬೆನ್ನಲ್ಲೇ ಇಂದು ಕರೆದಿದ್ದ ತುರ್ತು ಸಚಿವ ಸಂಪುಟ ಸಭೆಯನ್ನು ರದ್ದು ಮಾಡಲಾಗಿದೆ. ಸಿಎಂ ಜೊತೆ ಸಚಿವರ…
ಈದು : ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ: ಕಾರ್ಕಳ ತಾಲೂಕು ಈದು ಗ್ರಾಮದ ಜಂಗೊಟ್ಟು ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈದು ಜಂಗೊಟ್ಟು ನಿವಾಸಿ ಗಣೇಶ್(33ವ) ಆತ್ಮಹತ್ಯೆ ಮಾಡಿಕೊಂಡವರು. ಗಣೇಶ್ ವಿವಾಹಿತರಾಗಿದ್ದು ವಿಪರೀತ ಮದ್ಯಪಾನ ಮಾಡುತ್ತಿದ್ದರು. ಎರಡು ಮೂರು ದಿನಗಳಿಗೊಮ್ಮೆ ಮನೆಗೆ ಬರುತ್ತಿದ್ದ ಅವರು…
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ
ಬೆಂಗಳೂರು: ಮುಡಾ ಹಗರಣದಲ್ಲಿ ಕೊನೆಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದರೊಂದಿಗೆ ಸಿದ್ದರಾಮಯ್ಯ ಸಂಕಷ್ಟ ಹೆಚ್ಚಾಗಿದೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿರುವ ಆದೇಶದ ಅಧಿಕೃತ ಪ್ರತಿ ಇನ್ನಷ್ಟೇ ಸಿಎಂ ಕೈಸೇರಬೇಕಿದ್ದು, ಕಾನೂನಾತ್ಮಕವಾಗಿ ಎದುರಿಸುವ ನಿಟ್ಟಿನಲ್ಲಿ ಸಮಾಲೋಚನೆ…
ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ : ಇಂದಿನಿಂದ ಕೌನ್ಸೆಲಿಂಗ್ ಆರಂಭ
ಬೆಂಗಳೂರು : 2023-24ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡAತೆ ಪ್ರಾಥಮಿಕ ಶಾಲಾ ಸಹಶಿಕ್ಷಕರು, ದೈಹಿಕ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರುಗಳಿಗೆ ಅಂತರ್ ವಿಭಾಗ ಮಟ್ಟದ ಕೋರಿಕೆ/ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಅಂತರ ವಿಭಾಗ ಮಟ್ಟದ…
ಕೋಲ್ಕತಾ ವೈದ್ಯೆ ಅತ್ಯಾಚಾರ, ಹತ್ಯೆ ವಿರುದ್ಧ ವೈದ್ಯರ ಮುಷ್ಕರ: ಇಂದಿನಿಂದ 24 ತಾಸು ದೇಶದ ಆಸ್ಪತ್ರೆಗಳು ಬಂದ್
ನವದೆಹಲಿ: ಕೋಲ್ಕತಾದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಕಿರಿಯ ವೈದ್ಯೆಯ ಮೇಲಿನ ಅತ್ಯಾಚಾರ, ಹತ್ಯೆ ಹಾಗೂ ನಂತರ ನಡೆದ ದಾಂಧಲೆಗಳ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಇಂದಿನಿಂದ (ಆ.17)ಬೆಳಿಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ದೇಶಾದ್ಯಂತ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ…
