ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ: ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ:ವೆಸ್ಟ್ ಇಂಡೀಸ್ ನ ಬಾರ್ಬಡೋಸ್ ನಲ್ಲಿ ನಡೆದ ಟಿ 20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಗೆದ್ದ ಭಾರತೀಯ ಕ್ರಿಕೆಟ್ ತಂಡ ಗುರುವಾರ ಮುಂಜಾನೆ ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ವಿಶ್ವಕಪ್ ಜತೆ ಬಂದ ಭಾರತೀಯ ಆಟಗಾರರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ…

ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ: ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ “ನನ್ನ ದೇವ್ರು” ಜು.8 ರಿಂದ ನಿತ್ಯ ಸಂಜೆ 6.30 ರಿಂದ ಪ್ರಸಾರ

ಕರಾವಳಿ ನ್ಯೂಸ್ ಡೆಸ್ಕ್: ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ “ನನ್ನ ದೇವ್ರು” ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಇದೇ ಬರುವ ಜುಲೈ8 ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ…

ಉಡುಪಿ ಜಿಲ್ಲೆಯಲ್ಲಿ ಗಾಳಿ, ಮಳೆ ಹಾನಿ : ಮಾಹಿತಿ ಪಡೆದು, ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

ಬೆಂಗಳೂರು : ಉಡುಪಿ ಜಿಲ್ಲೆಯ ಕೆಲವೆಡೆ ಗಾಳಿ ಮತ್ತು ಮಳೆಯಿಂದ ಹಾನಿಯಾಗಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ಪಡೆದಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವರು ಸಚಿವ ಸಂಪುಟ ಸಭೆಗೆ ಹೊರಡುವ ಮುನ್ನ ಉಡುಪಿಯ ಸಧ್ಯದ ಪರಿಸ್ಥಿತಿಯ…

ಇನ್ನಾ: ಭಾರೀ ಗಾಳಿಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

ಕಾರ್ಕಳ: ಕಾರ್ಕಳ ತಾಲೂಕಿನಾದ್ಯಂತ ಕಳೆದೆರಡು ದಿನಗಳಿಂದ ಭಾರೀ ಗಾಳಿ ಮಳೆ ಸುರಿಯುತ್ತಿದ್ದು ಬುಧವಾರ ಇನ್ನಾ ಗ್ರಾಮದ ಮಠದಕೆರೆ ಎಂಬಲ್ಲಿನ ನಿವಾಸಿ ಸುರೇಶ ಮೂಲ್ಯ ಬಿನ್ ಬೈಕ್ಲ ಮೂಲ್ಯ ರವರ ಮನೆಗೆ ಮರಬಿದ್ದು ಅಪಾರ ಹಾನಿಯಾಗಿದೆ. ಮನೆಗೆ ಮರ ಉರುಳಿ ಬಿದ್ದು ಸುಮಾರು…

ಪರವಾನಗಿ ನವೀಕರಿಸದ ಆರೋಪ ಹಿನ್ನೆಲೆ: ಪವರ್ ಟಿವಿ ಕಾರ್ಯಚಟುವಟಿಕೆ ಸ್ಥಗಿತ: ಮಧ್ಯಪ್ರವೇಶಿಸಲು ಹೈಕೋರ್ಟ್ ನಕಾರ

ಬೆಂಗಳೂರು: ಪರವಾನಗಿ ನವೀಕರಿಸದ ಆರೋಪದ ಹಿನ್ನೆಲೆಯಲ್ಲಿ ಪವರ್ ಟಿವಿ ಕನ್ನಡ ಸುದ್ದಿ ವಾಹಿನಿ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕು ಎಂದು ಹೈಕೋರ್ಟ್ನ ಏಕಸದಸ್ಯ ಪೀಠ ಮಾಡಿರುವ ಆದೇಶವನ್ನು ರದ್ದುಪಡಿಸಲು ವಿಭಾಗೀಯ ಪೀಠ ಬುಧವಾರ ನಿರಾಕರಿಸಿದೆ. ಪವರ್ ಸ್ಮಾರ್ಟ್ ಮೀಡಿಯಾ ಪ್ರೈ. ಲಿ., ಮಿಟ್‌ಕಾನ್…

ಹೆಬ್ರಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಲದ ಕಂತು ಕಟ್ಟಿಲ್ಲವೆಂದು ಕುಟುಂಬಕ್ಕೆ ಜೀವ ಬೆದರಿಕೆ

ಹೆಬ್ರಿ: ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ಸದಸ್ಯರೊಬ್ಬರು ಸಾಲದ ಕಂತು ಕಟ್ಟಿಲ್ಲವೆಂದು ಅವರನ್ನು ಯೋಜನೆಯ ಕಚೇರಿಯಲ್ಲಿ ಕೂಡಿ ಹಾಕಿ ಅನ್ನ ನೀರು ಕೊಡದೇ ಸಾಲ ಮರು ಪಾವತಿ ಮಾಡದಿದ್ದರೆ ಮನೆಯ ಸಾಮಾಗ್ರಿಗಳನ್ನು ವಶಪಡಿಸಿ ಮನೆಗೆ ಬೆಂಕಿ ಹಾಕುವುದಾಗಿ ಬೆದರಿಕೆಯೊಡ್ಡಿದ ಕುರಿತು…

ಅಡಿಕೆ, ಕಾಳು‌ಮೆಣಸು ಬೆಳೆವಿಮೆ ಯೋಜನೆ ಮತ್ತೆ ವಿಸ್ತರಣೆ: ಜುಲೈ 5 ರವರೆಗೆ ಅವಕಾಶ

ಕಾರ್ಕಳ: 2024-25ನೇ ಸಾಲಿಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಜುಲೈ 5 ರವರೆಗೆ ವಿಸ್ತರಿಸಲಾಗಿದೆ.ಈ ಹಿಂದೆ ಜುಲೈ1 ಕೊನೆಯ ದಿನಾಂಕವಾಗಿತ್ತು. ಇದೀಗ ಮತ್ತೆ ಬೆಳೆವಿಮೆಗೆ ಅವಕಾಶ ಕಲ್ಪಿಸಲಾಗಿದ್ದು,ಎಲ್ಲಾ ಗ್ರಾಮ ಪಂಚಾಯತ್ ಹಾಗೂ ಕಾರ್ಕಳ…

ಮಣಿಪಾಲ: ಜ್ಞಾನಸುಧಾ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಭೆ

ಉಡುಪಿ : ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಭೆಯು ಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜಿನಲ್ಲಿ ನಡೆಯಿತು. ಸಭೆಯಲ್ಲಿ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕರಾದ ಮಾರುತಿ ಮಾತನಾಡಿ, 2024ರ ದ್ವಿತೀಯ…

ಮಂಗಳೂರಲ್ಲಿ ನಡೆಯಿತು ಘೋರ ದುರಂತ:ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿತ: ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು!

ಮಂಗಳೂರು :ಮಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ಮಣ್ಣು ಕುಸಿದು ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿರುವ ಘಟನೆ ಮಂಗಳೂರಿನ ಬಲ್ಮಠದಲ್ಲಿ ನಡೆದಿದೆ. ಮಂಗಳೂರಿನ ನಗರದ ಬಲ್ಮಠದಲ್ಲಿನ ಖಾಸಗಿ ಕಟ್ಟಡ ನಿರ್ಮಾಣದ…

ಮರದ ಸೊಪ್ಪು ಕಡಿಯುತ್ತಿದ್ದಾಗಲೇ ಹೃದಯಾಘಾತ: ಕೆಳಗೆ ಬಿದ್ದು ವ್ಯಕ್ತಿ ದಾರುಣ ಸಾವು

ಹೆಬ್ರಿ: ಮರಕ್ಕೆ ಹತ್ತಿ ಸೊಪ್ಪು ಕಡಿಯುತ್ತಿದ್ದ ವೇಳೆ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಮಂಗಳವಾರ ನಡೆದಿದೆ. ಗೋಪಾಲ (32ವ) ಮೃತಪಟ್ಟವರು. ಅವರು ಕೂಲಿ ಕೆಲಸವನ್ನು ಮಾಡಿಕೊಂಡಿದ್ದು, ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದರು.…