ಜುಲೈ 15ರಿಂದ 26ರವರೆಗೆ ರಾಜ್ಯದಲ್ಲಿ ಮುಂಗಾರು ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳ ಸಜ್ಜು
ಬೆಂಗಳೂರು : ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಜುಲೈ 15ರಿಂದ ಜುಲೈ 26ರವರೆಗೆ ಹತ್ತುದಿನಗಳ ಕಾಲ ನಡೆಯಲಿದೆ. ಅಧಿವೇಶನದ ದಿನಾಂಕ ನಿಗದಿಗೆ ಕಳೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕ ಅಂತಿಮಗೊಳಿಸಿದ್ದು,…
ಸಂಸತ್ತಿನಲ್ಲಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ವಿಚಾರ- ಹಿಂದೂ ವಿರೋಧಿ ಧೋರಣೆ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳ ರಕ್ತದಲ್ಲೇ ಇದೆ: ಶಾಸಕ ಸುನಿಲ್ ಕುಮಾರ್
ಕಾರ್ಕಳ: ಹಿಂದೂಗಳು ಎಲ್ಲರೂ ಹಿಂಸೆಗೆ ಪ್ರಚೋದಿಸಿ,ಹಿಂಸೆ ಮಾಡುವವರು ಎಂದು ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮಾಡಿರುವ ಭಾಷಣಕ್ಕೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸುನಿಲ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದುತ್ವ ಹಾಗೂ ಹಿಂದೂಗಳ ನ್ನು ವಿರೋಧಿಸುವ ಗುಣ ಕಾಂಗ್ರೆಸ್…
ಬೆಳ್ತಂಗಡಿಯಿಂದ ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಕಾರ್ಕಳದ ನಲ್ಲೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಬೆಳ್ತಂಗಡಿ:ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ಉಜಿರೆಯ ಆಟೋ ಚಾಲಕ ಸುಧಾಕರ ಆಚಾರ್ (35) ಅವರ ಶವ ಕಾರ್ಕಳ ತಾಲೂಕಿನ ನಲ್ಲೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಧಾಕರ್ ಅವರು ಜೂನ್ 28 ರಂದು ಬಾಡಿಗೆ ಇದೆ ಎಂದು ರಿಕ್ಷಾದಲ್ಲಿ ಮನೆಯಿಂದ ಹೋದವರು ವಾಪಸ್…
ಕ್ರಿಯೇಟಿವ್ ಕಾಲೇಜಿನಲ್ಲಿ ಕನ್ನಡ ಪುಸ್ತಕಗಳ ಲೋಕಾರ್ಪಣೆ: ಶಿಕ್ಷಣ ಎನ್ನುವುದು ಸಂಪಾದನೆಗೆ ಮೂಲವಾದರೆ ಸಾಹಿತ್ಯವು ವ್ಯಕ್ತಿಯನ್ನು ಪರಿಪೂರ್ಣರನ್ನಾಗಿಸುತ್ತದೆ:ಹಿರಿಯ ಪತ್ರಕರ್ತ ಗಿರೀಶ್ ರಾವ್ ಹತ್ವಾರ್
ಕಾರ್ಕಳ:ಮನುಷ್ಯನ ಜೀವನದಲ್ಲಿ ಶಿಕ್ಷಣವು ಧನ ಸಂಪಾದನೆಗೆ ಮೂಲವಾದರೆ, ಸಾಹಿತ್ಯವು ಮನುಷ್ಯನನ್ನು ಪರಿಪೂರ್ಣ ವ್ಯಕ್ತಿಯನ್ನಾಗಿಸುತ್ತದೆ ಎಂದು ಖ್ಯಾತ ಬರಹಗಾರ ಹಾಗೂ ಕನ್ನಡ ಪ್ರಭ ದಿನಪತ್ರಿಕೆಯ ಪುರವಣಿ ಸಂಪಾದಕ ಗಿರೀಶ್ ರಾವ್ ಹತ್ವಾರ್ ಹೇಳಿದರು. ಅವರು ಕಾರ್ಕಳ ತಾಲೂಕಿನ ಹಿರ್ಗಾನದ ಕ್ರಿಯೇಟಿವ್ ಕಾಲೇಜು ಸಭಾಂಗಣದಲ್ಲಿ…
ಕಬ್ಬಿನಾಲೆ : ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ
ಹೆಬ್ರಿ: ಹೆಬ್ರಿ ತಾಲೂಕಿನ ಕಬ್ಬಿನಾಲೆ ಗ್ರಾಮದ ತಲೆಮನೆ ಮದಗ ಎಂಬಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಭಾನುವಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ಆರೋಪಿಗಳಾದ ಪ್ರಭಾಕರ ಮತ್ತು ರಾಜೇಶ ಎಂಬವರು ಮದಗ ಹೊಳೆಯಿಂದ ಅಕ್ರಮವಾಗಿ ಮರಳು ತೆಗೆದು ಪರವಾನಿಗೆಯನ್ನು ಪಡೆಯದೆ ಲಾರಿಯಲ್ಲಿ ತುಂಬಿಸಿ…
ಬೆಳ್ಮಣ್: ಹೃದಯಾಘಾತದಿಂದ ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕ ಸಾವು
ಕಾರ್ಕಳ: ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳ್ಮಣ್ನಲ್ಲಿ ಭಾನುವಾರ ನಡೆದಿದೆ. ಸಂಜೀವ (40) ಮೃತಪಟ್ಟವರು. ಅವರು ಭಾನುವಾರ ಬೆಳ್ಮಣ್ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪ್ರಕಾಶ್ ಎಂಬವರ ಗದ್ದೆಯಲ್ಲಿ ಟ್ರ್ಯಾಕ್ಟರ್ ನಿಂದ ಉಳುಮೆ ಮಾಡುತ್ತಿದ್ದ ವೇಳೆ…
ಕೆರ್ವಾಶೆ: ಅಪ್ಪ ಅಮ್ಮನ ಜಗಳ ಬಿಡಿಸಲು ಹೋಗಿ ಮಗಳು ಆಸ್ಪತ್ರೆಗೆ!
ಕಾರ್ಕಳ: ಅಪ್ಪ ಅಮ್ಮನ ಜಗಳವನ್ನು ಬಿಡಿಸಲು ನಡುವೆ ಹೋದ ಮಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಎಂಬಲ್ಲಿ ನಡೆದಿದೆ. ಭಾರತಿ ಹಾಗೂ ರಾಮಣ್ಣ ದಂಪತಿಗಳು ಆಗಾಗ ವಿನಾಕಾರಣ ಕಿತ್ತಾಡುತ್ತಿದ್ದರು. ಇವರಿಬ್ಬರ ನಡುವೆ ಜೂ 29ರಂದು ಶನಿವಾರ ಜಗಳವಾಗಿ,…
ಹಳೆಯ ಕ್ರಿಮಿನಲ್ ಕಾನೂನುಗಳಿಗೆ ತಿಲಾಂಜಲಿ: ಇಂದಿನಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ
ನವದೆಹಲಿ: ಇಂದಿನಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ದೇಶದಲ್ಲಿ ಜಾರಿಗೆ ಬಂದಿದ್ದು, ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ದೂರಗಾಮಿ ಬದಲಾವಣೆಗಳನ್ನು ತಂದಿವೆ. ಇನ್ನುಮುಂದೆ ಸಿಆರ್ಪಿಸಿ, ಐಪಿಸಿ ಇತ್ಯಾದಿ ಸೆಕ್ಷನ್ಗಳು ಇತಿಹಾಸ ಪುಟ ಸೇರಲಿವೆ. ಬ್ರಿಟಿಷರ ಕಾಲದಿಂದ ಜಾರಿಯಲ್ಲಿದ್ದ ಈ ಕ್ರಿಮಿನಲ್ ಕಾನೂನುಗಳ…
ಕ್ರಿಯೇಟಿವ್ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ C.A, C.S.E.E.T ಮಾಹಿತಿ ಕಾರ್ಯಗಾರ
ಕಾರ್ಕಳ:ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಫೌಂಡೇಶನ್ ವತಿಯಿಂದ C.A ಹಾಗೂ C.S.E.E.T ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಈ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಚಾರ್ಟರ್ಡ್ ಅಕೌಂಟೆಂಟ್ ಪ್ರದೀಪ್ ಜೋಗಿ ಭಾಗವಹಿಸಿ ಮಾತನಾಡಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್ ಅಕೌಂಟ್…
ಜುಲೈ 4 ರಂದು ಮಾಜಿ ಶಾಸಕ ಗೋಪಾಲ ಭಂಡಾರಿಯವರ ಪುಣ್ಯಸ್ಮರಣೆಯ ಪ್ರಯುಕ್ತ ರಕ್ತದಾನ ಶಿಬಿರ
ಕಾರ್ಕಳ: ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 5ನೇ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜುಲೈ 4 ರಂದು ಪೆರ್ವಾಜೆ ನಾರಾಯಣ ಗುರು ಸಭಾಭವನದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡರುಗಳು, ಜನಪ್ರತಿನಿಧಿಗಳು, ಭಾಗವಹಿಸಲಿದ್ದು…
