ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ:ಆರೋಪಿ ಪದ್ಮನಾಭ ಆಪ್ತನ ಬಳಿ 30 ಲಕ್ಷ ರೂ. ಜಪ್ತಿ
ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಪ್ರಕರಣದ ಆರೋಪಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕನ ಆಪ್ತನ ಬಳಿ 30 ಲಕ್ಷ ರೂ. ನಗದು…
ಪೊಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್: ಮುಂದಿನ ವಿಚಾರಣೆ ವರೆಗೆ ಬಂಧಿಸದಂತೆ ಹೈಕೋರ್ಟ್ ಆದೇಶ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಈ ಹಿಂದೆ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಈ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ…
ಜೂ. 16 ಕ್ಕೆ ಕಾರ್ಕಳ ಬಿಜೆಪಿ ವತಿಯಿಂದ ಅಭಿನಂದನಾ ಕಾರ್ಯಕ್ರಮ
ಕಾರ್ಕಳ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಗೊಂಡ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹಾಗೂ ನೈಋತ್ಯ ಪದವೀಧರ ಕ್ಷೇತ್ರದ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡ ಡಾ.ಧನಂಜಯ ಸರ್ಜಿ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ನೂತನ ವಿಧಾನ ಪರಿಷತ್ ಸದಸ್ಯರಾಗಿ…
ನೀರೆ: ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ
ಕಾರ್ಕಳ : ತಾಲೂಕಿನ ನೀರೆ ಗ್ರಾಮದ ಬನಶಂಕರಿ ಸಂಜೀವಿನಿ ಒಕ್ಕೂಟ ಸಂಘದ 3ನೇ ವಾರ್ಷಿಕ ಮಹಾಸಭೆಯು ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಜರುಗಿತು. ತಾಲೂಕು ಪಂಚಾಯತ್ ಮಾಜಿ ಸದಸ್ಯ ವಿಕ್ರಂ ಹೆಗ್ಡೆ ಮಾತನಾಡಿ, ಒಕ್ಕೂಟದಿಂದ ಮಹಿಳೆಯರುವಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ…
ಹೆಬ್ರಿ ಬಳಿಯ ಸೋಮೇಶ್ವರ ಆಗುಂಬೆ ಘಾಟಿ ಪರಿಸರದಲ್ಲಿ ಕಾಣಿಸಿಕೊಂಡ ಒಂಟಿ ಸಲಗ: ಆನೆ ದಾಳಿಯಿಂದ ಕೃಷಿ ಜಮೀನುಗಳಿಗೆ ಹಾನಿ: ಆತಂಕದಲ್ಲಿ ಜನತೆ
ಕಾರ್ಕಳ: ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳ ಹಾವಳಿಯಿಂದ ರೈತರು ಸಾಕಷ್ಟು ಕಷ್ಟನಷ್ಟ ಅನುಭವಿಸಿದ್ದು ಇದೀಗ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಸೋಮೇಶ್ವರ ಆಗುಂಬೆ ಕಾಡಿನಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು ಈ ಭಾಗದ ಜನ ಆತಂಕದಿಂದ ಕಾಲ ಕಳೆಯುವಂತಾಗಿದೆ. ಹೆಬ್ರಿಯ ಸೋಮೇಶ್ವರ ನಾಡ್ಪಾಲು ಕೂಡ್ಲು…
ದೇಶಾದ್ಯಂತ ಸ್ಲೀಪರ್ ಸೆಲ್ಗೆ ಉಗ್ರರಿಂದ ಸಂಚು: ಎನ್ಐಎ ಆರೋಪ ಪಟ್ಟಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ
ನವದೆಹಲಿ : 2025ರ ವೇಳೆಗೆ ಭಾರತದ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 50 ಸ್ಲೀಪರ್ಸೆಲ್ ಸ್ಥಾಪಿಸಿ ಈ ಸೆಲ್ ಸದಸ್ಯರನ್ನು ಬಳಸಿಕೊಂಡು ಸೇನೆ, ಪೊಲೀಸರು ಮತ್ತು ನಿರ್ದಿಷ್ಟ ಸಮುದಾಯದ ಧಾರ್ಮಿಕ ನಾಯಕರ ಮೇಲೆ ದಾಳಿ ನಡೆಸುವ ಸಂಚನ್ನು ಕಳೆದ ವರ್ಷ ಕರ್ನಾಟಕದ ಬಳ್ಳಾರಿಯಲ್ಲಿ…
ಕಾರ್ಕಳ ತಾಲೂಕಿನ 50 ಕನ್ನಡ ಮಾಧ್ಯಮ ಶಾಲೆಗಳ 2500 ಮಕ್ಕಳಿಗೆ ಕೊಡೆ ಹಾಗೂ ನೋಟ್ ಪುಸ್ತಕ ವಿತರಣೆ: ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದಾನಿಗಳ ಪಾತ್ರ ಮಹತ್ತರ: ಶಾಸಕ ಸುನಿಲ್ ಕುಮಾರ್
ಕಾರ್ಕಳ:ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿ ಗುಣಮಟ್ಟ ಶಿಕ್ಷಣ ನೀಡುವಲ್ಲಿ ಬೇಕಾದ ವ್ಯವಸ್ಥೆ ಕಲ್ಪಿಸುವಲ್ಲಿ ಎಲ್ಲಾ ಸರ್ಕಾರಗಳು ಬದ್ದವಾಗಿವೆ. ಸರ್ಕಾರಿ ಶಾಲೆಗಳು ಎನ್ನುವ ಕೀಳರಿಮೆ ಬಿಟ್ಟು ಸರ್ಕಾರಿ ಶಾಲೆಯಲ್ಲಿ ಕಲಿತು ಸಾಧನೆಗೈದವರು ಸಾಕಷ್ಟು ಜನ ಇದ್ದಾರೆ.ಇಂತಹ ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಬಡ…
ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ಮರು ನೇಮಕ: ಕೇಂದ್ರ ಸರ್ಕಾರದ ಮಹತ್ವದ ಆದೇಶ
ನವದೆಹಲಿ: ದೇಶದ ಭದ್ರತೆಯ ವಿಚಾರದಲ್ಲಿ ಅತ್ಯಂತ ಚಾಣಾಕ್ಷ ನೀತಿಯಿಂದ ಹೆಸರುವಾಸಿಯಾಗಿರುವ ಅಜಿತ್ ದೋವಲ್ ಅವರನ್ನು ಮೂರನೇ ಅವಧಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಇಂದು ಮರು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸಂಪುಟದ ನೇಮಕಾತಿ ಸಮಿತಿಯು ಜೂನ್ 10 ರಿಂದಲೇ…
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಅವರನ್ನು ಬಂಧಿಸಿದ್ದ ಇನ್ಸ್ಪೆಕ್ಟರ್ ದಿಢೀರ್ ವರ್ಗಾವಣೆ!
ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ನಟ ದರ್ಶನ್ ಅವರನ್ನು ಮುಲಾಜಿಲ್ಲದೇ ಬಂಧಿಸಿದ್ದ ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದೆ. ನಟಿ ಪವಿತ್ರಾಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದಾರೆಂಬ ಕೋಪಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿ ಬಿಸಾಡಿದ ಪ್ರಕರಣಕ್ಕೆ…
ಉಡುಪಿ tv9 ವಾಹಿನಿ ಕೆಮೆರಾ ಮೆನ್ ದಿನೇಶ್ ಎಂ.ಎಚ್.ಗೆ ಬೀಳ್ಕೊಡುಗೆ
ಉಡುಪಿ: ಕಳೆದ ಮೂರು ವರ್ಷಗಳ ಕಾಲ ಉಡುಪಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ದಾವಣಗೆರೆಗೆ ವರ್ಗಾವಣೆಗೊಂಡ ಟಿವಿ 9 ವಾಹಿನಿಯ ಕ್ಯಾಮೆರಮೆನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯ ದಿನೇಶ್ ಎಂ.ಎಚ್. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ…
