ಕಾರ್ಕಳ ಮೈನ್ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವುದರೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶಶಿಕಲಾ, ಪದವೀಧರ ಸಹ ಶಿಕ್ಷಕಿ ಪ್ರತಿಮಾ ಶಿಕ್ಷಕಿಯರಾದ ಮಧುಶ್ರೀ, ಪೂಜಾ, ಹಾಗೂ…
ಲೋಕಸಭಾ ಚುನಾವಣೆಯಲ್ಲಿ ಸುಧಾಕರ್ ಗೆಲುವು:ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲವೆಂದ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ:ಬಿಜೆಪಿಯ ಡಾ.ಕೆ ಸುಧಾಕರ್ ಒಂದೇ ಒಂದು ಮತದಿಂದ ಗೆದ್ದರೂ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ಗೆದ್ದ ಬಳಿಕ ತಾನು ರಾಜೀನಾಮೆ ನೀಡುವುದಿಲ್ಲ ಎಂದು ಹೇಳುವ ಮೂಲಕ ಯೂ ಟರ್ನ್ ಹೊಡೆದಿದ್ದಾರೆ. ಸುಧಾಕರ್…
ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಹುಟ್ಟುಹಬ್ಬ ಹಿನ್ನೆಲೆ: ಜೂ 8ರಂದು ಬೃಹತ್ ರಕ್ತದಾನ ಹಾಗೂ ಅರೋಗ್ಯ ತಪಾಸಣಾ ಶಿಬಿರ
ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಕಾರ್ಕಳ ಮತ್ತು ಹೆಬ್ರಿ ಹಾಗೂ ಕಾರ್ಕಳ ಉದಯ್ ಕುಮಾರ್ ಶೆಟ್ಟಿ ಅಭಿಮಾನಿ ಬಳಗದ ಆಶ್ರಯದಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಜೂ.8 ರಂದು ಬೃಹತ್ ರಕ್ತದಾನ, ಉಚಿತ ಹೃದಯ ರೋಗ ತಪಾಸಣೆ, ಕಣ್ಣಿನ…
ನನ್ನ ತಂದೆ ಕರುಣಾನಿಧಿಯಲ್ಲ, ಕುಪ್ಪುಸ್ವಾಮಿ:ತಮಿಳುನಾಡಿನಲ್ಲಿ ಬಿಜೆಪಿ ಗೆಲ್ಲಿಸಿಯೇ ಸಿದ್ದ: ಟೀಕೆಗಳಿಗೆ ಅಣ್ಣಾಮಲೈ ತಿರುಗೇಟು!
ಚೆನ್ನೈ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ನಿರೀಕ್ಷೆಗಳೊಂದಿಗೆ ತಮಿಳುನಾಡಿನಲ್ಲಿ ಸ್ಫರ್ಧಿಸಿದ್ದ ಅಣ್ಣಾಮಲೈ ನೇತೃತ್ವದ ಬಿಜೆಪಿಗೆ ತೀವ್ರ ನಿರಾಸೆಯಾಗಿದೆ. ಸಮೀಕ್ಷೆಗಳ ಪ್ರಕಾರ 1ರಿಂದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಎಂದು ಹೇಳಲಾಗಿತ್ತು. ಆದರೆ ಸಮೀಕ್ಷೆಗಳು ಹುಸಿಯಾಗಿದ್ದು INDIA ಮೈತ್ರಿಕೂಟ ಎಲ್ಲಾ ಕ್ಷೇತ್ರಗಳಲ್ಲಿ…
ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ಕೇರಳಕ್ಕೆ 400 ಕೆ.ವಿ ಹೈಟೆನ್ಷನ್ ವಿದ್ಯುತ್ ಟವರ್ ಅಳವಡಿಕೆ: ಸರ್ಕಾರದ ನಿರ್ಧಾರದ ವಿರುದ್ಧ ನವೀನ್ ನಾಯಕ್ ಆಕ್ರೋಶ
ಕಾರ್ಕಳ: ದ.ಕ ಜಿಲ್ಲೆ ವ್ಯಾಪ್ತಿಯ ಎಲ್ಲೂರು ಗ್ರಾಮದಿಂದ ನಂದಿಕೂರು ಇನ್ನಾ ಮೂಡಬಿದಿರೆ ಮಾರ್ಗವಾಗಿ ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ಬಲಾತ್ಕಾರವಾಗಿ ಕೇರಳಕ್ಕೆ 400 ಕೆ.ವಿ ಹೈಟೆನ್ಷನ್ ವಿದ್ಯುತ್ ಲೈನ್ ಅಳವಡಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್…
ನೀಟ್ ಫಲಿತಾಂಶ ಪ್ರಕಟ: ಕಾರ್ಕಳ ಕ್ರಿಯೇಟಿವ್ ಕಾಲೇಜು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಕಾರ್ಕಳ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ್ದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕಾರ್ತಿಕ್ ಕೆ.ಎಸ್ 99.8976127 ಪರ್ಸಂಟೈಲ್…
ಬಜಗೋಳಿ: ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದಿಂದ ಪರಿಸರ ದಿನಾಚರಣೆ
ಕಾರ್ಕಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ( ರಿ) ಕಾರ್ಕಳ ತಾಲೂಕು ವಿಪತ್ತು ನಿರ್ವಹಣಾ ಘಟಕ ಬಜಗೋಳಿ ವಲಯದ ವತಿಯಿಂದ ಬಜಗೋಳಿ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತೆಂಗಿನ ಸಸಿ ನೆಡಲಾಯಿತು. ಈ…
ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರ ಕೊರತೆ ನೀಗಿಸಲು ಮುಂದಾದ ಸರ್ಕಾರ: ಒಟ್ಟು 45,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅಸ್ತು
ಬೆಂಗಳೂರು : ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2024-25 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ, ಪ್ರೌಢಶಾಲೆಗಳಿಗೆ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ವಿಷಯದ…
ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್’ಗೆ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 7 ದಿನಗಳ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ. ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ಕಾವೇರಿ…
ಅಧಿಕಾರ ಅವಧಿ ಮುಕ್ತಾಯ ಹಿನ್ನೆಲೆಯಲ್ಲಿ ಲೋಕಸಭೆ ವಿಸರ್ಜನೆ: ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನರೇಂದ್ರ ಮೋದಿ: ಜೂ 8 ರಂದು ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸಾಧ್ಯತೆ
ನವದೆಹಲಿ: ಲೋಕಸಭೆ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿಯವರು ಇಂದು ರಾಜೀನಾಮೆ ನೀಡಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಪ್ರಧಾನಿ ಮೋದಿ 17ನೇ ಲೋಕಸಭೆಯನ್ನು ವಿಸರ್ಜಿಸುವಂತೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ…
