ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ಭ್ರಷ್ಟಾಚಾರದ ಕುರಿತು ಉನ್ನತ ಮಟ್ಟದ ತನಿಖೆಗೆ ಬಿಜೆಪಿ ಆಗ್ರಹ
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಹೊಸ ಉತ್ತುಂಗಕ್ಕೇರಿದ್ದು, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರ ಆತ್ಮಹತ್ಯೆಯೇ ಇದಕ್ಕೆ ಸಾಕ್ಷಿ ಎಂದು ಶಾಸಕ ಎಸ್ ಎನ್ ಚನ್ನಬಸಪ್ಪ ಸೋಮವಾರ ಆರೋಪಿಸಿದ್ದಾರೆ. ಚಂದ್ರಶೇಖರನ್ ಅವರು ಆತ್ಮಹತ್ಯೆಗೂ ಮುನ್ನ ಡೆತ್…
ತೆಕ್ಕಟ್ಟೆ: ಸೇವಾಸಂಗಮ ವಿದ್ಯಾ ಕೇಂದ್ರದಲ್ಲಿ ಶಿಕ್ಷಕರಿಗೆ ತರಗತಿ ಸಂವಹನ ಕಾರ್ಯಾಗಾರ
ಕುಂದಾಪುರ: ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ ಶಿಕ್ಷಕರಿಗೆ ಆಯೋಜಿಸಿದ ಹ್ಯಾಪಿ ಲರ್ನಿಂಗ್ , ತರಗತಿ ಸಂವಹನ ಕಾರ್ಯಗಾರವು ವಿದ್ಯಾಭಾರತಿ ಹಾಗೂ ತೆಕ್ಕಟ್ಟೆ ಸೇವಾ ಸಂಗಮ ವಿದ್ಯಾಕೇಂದ್ರ ಇವುಗಳ ಆಶ್ರಯದಲ್ಲಿ ಸೇವಾಸಂಗಮ ವಿದ್ಯಾಕೇಂದ್ರ ತೆಕ್ಕಟ್ಟೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.…
ರೆಮಾಲ್ ಚಂಡಮಾರುತದ ರೌದ್ರಾವತಾರ: ಭಾರತ ಹಾಗೂ ಬಾಂಗ್ಲಾದಲ್ಲಿ ಸೇರಿ 16 ಮಂದಿ ಸಾವು
ನವದೆಹಲಿ: ಈ ವರ್ಷದ ಮೊದಲ ಚಂಡಮಾರುತ ರಮಾಲ್ ಚಂಡಮಾರುತ ತನ್ನ ರೌದ್ರಾವತಾರ ತೋರಿಸಿದ್ದು, ಈವರೆಗೆ ಒಟ್ಟು 16 ಜನ ಮೃತಪಟ್ಟಿದ್ದಾರೆ. ಬಂಗಾಳ ಕೊಲ್ಲಿಯ ಕರಾವಳಿಯ ಬಳಿ ಭೂಕುಸಿತದ ಬಳಿಕ ಬಾಂಗ್ಲಾದೇಶ ಮತ್ತು ಭಾರತದಾದ್ಯಂತ 16 ಜನರನ್ನು ಬಲಿ ತೆಗೆದುಕೊಂಡಿದೆ. ಬಾಂಗ್ಲಾದೇಶ ಮತ್ತು…
ಅಶ್ಲೀಲ ವಿಡಿಯೋ ಪ್ರಕರಣ: ಒಂದು ತಿಂಗಳ ಬಳಿಕ ವಿದೇಶದಿಂದ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ!: ಮೇ 31 ಕ್ಕೆ ಎಸ್ಐಟಿ ಮುಂದೆ ಹಾಜರಾಗುವುದಾಗಿ ಪ್ರಜ್ವಲ್ ಹೇಳಿಕೆ
ಬೆಂಗಳೂರು: ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣದಲ್ಲಿ ಸಿಲುಕಿ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ ಇದೀಗ 1 ತಿಂಗಳ ಬಳಿಕ ವಿಡಿಯೋ ಬಿಡುಗಡೆ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ. ಈ ಕುರಿತು ವಿದೇಶದಲ್ಲೇ ಕುಳಿತು ವಿಡಿಯೋವೊಂದನ್ನು ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ಮಾತನಾಡಿದ ನಟ…
ಕಾರ್ಕಳ: ಕ್ಷತ್ರಿಯ ಮರಾಠ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ
ಕಾರ್ಕಳ:ಕ್ಷತ್ರಿಯ ಮರಾಠ ಸಮಾಜ ಕಾರ್ಕಳ ಇದರ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ವ್ಯಕ್ತಿತ್ವ ವಿಕಸನ ಶಿಬಿರವು ಭಾನುವಾರ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕ್ಷತ್ರೀಯ ಮರಾಠ ಸಮಾಜದ ಹಿರಿಯರಾದ ಉಮೇಶ್ ರಾವ್ ಬಜಗೋಳಿ ಕಾರ್ಯಕ್ರಮ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮ ಸಡಿಲಿಕೆ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಈ ಸಾಲಿನ ಶೈಕ್ಷಣಿಕ ವರ್ಷದಿಂದ 1ನೇ ತರಗತಿ ದಾಖಲಾತಿಗೆ ಈ ಹಿಂದೆ 6 ವರ್ಷ ಕಡ್ಡಾಯ ವಯೋಮಿತಿಯನ್ನು ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸಕ್ತ ವರ್ಷದ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ಜೂ.1ಕ್ಕೆ ಆರು ವರ್ಷಗಳು ತುಂಬಿರಬೇಕು ಎಂಬ…
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕರ್ಮಕಾಂಡ: ಮೊದಲ ಮಳೆಗೆ ಕಿತ್ತುಹೋದ ಮಿಯ್ಯಾರು ರಸ್ತೆ: ಅವೈಜ್ಞಾನಿಕ ಕಾಮಗಾರಿಗೆ ಸಾರ್ವಜನಿಕರಿಂದ ತೀವ್ರ ಅಕ್ರೋಶ
ಕಾರ್ಕಳ:ಕುಲಶೇಖರ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಕಾಮಗಾರಿಯ ಅಧ್ವಾನ ಒಂದೆರಡಲ್ಲ.ಈಗಾಗಲೇ ಸಾಣೂರು ಮುರತ್ತಂಗಡಿ ಭಾಗದಲ್ಲಿ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಕುಡಿಯುವ ನೀರಿನ ಪೈಪ್ ಲೈನ್, ಶಾಲಾ ಕಾಂಪೌಂಡ್ ಗೋಡೆ, ಪಶು ಚಿಕಿತ್ಸಾಲಯ ಕಟ್ಟಡ ಎಲ್ಲವೂ ಧ್ವಂಸಗೊಂಡಿದೆ. ಗುತ್ತಿಗೆದಾರ ಕಂಪೆನಿಯ ವಿರುದ್ಧ ಸ್ಥಳೀಯರು ಪ್ರತಿಭಟನೆ…
ಕಾರ್ಕಳದ ಕೌಡೂರಿನಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ತಂಡದ ಮೇಲೆ ಪೊಲೀಸ್ ದಾಳಿ: ಕಾರು ಬಿಟ್ಟು ಆರೋಪಿಗಳು ಪರಾರಿ!
ಕಾರ್ಕಳ:ಕಾರಿನಲ್ಲಿ ಮಾರಕಾಸ್ತ್ರಗಳ ಜತೆ ದರೋಡೆಗೆ ಹೊಂಚು ಹಾಕುತ್ತಿದ್ದ 5 ಮಂದಿ ಖದೀಮರನ್ನು ಕಾರ್ಕಳ ನಗರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಲು ಮುಂದಾದಾಗ ಆರೋಪಿಗಳು ಪರಾರಿಯಾದ ಘಟನೆ ಮೇ 25ರಂದು ಶನಿವಾರ ನಡೆದಿದೆ. ಕಾರ್ಕಳ ತಾಲೂಕು ಕೌಡೂರು ಗ್ರಾಮದ ಕಂಪಾನು ಎಂಬಲ್ಲಿ…
ಕಾಮೆಡ್-ಕೆ ಫಲಿತಾಂಶ ಪ್ರಕಟ: ಪ್ರಿಯಾಂಶ್ಗೆ 11ನೇ ರ್ಯಾಂಕ್ ಹಾಗೂ ಬಿಪಿನ್ ಜೈನ್ 42ನರ್ಯಾಂಕ್!: ಒಂದು ಸಾವಿರ ರ್ಯಾಂಕುಗಳೊಳಗೆ 15 ರ್ಯಾಂಕುಗಳನ್ನು ಪಡೆದು ಗಮನಾರ್ಹ ಸಾಧನೆಗೈದ ಜ್ಞಾನಸುಧಾ ಶಿಕ್ಷಣ ಸಂಸ್ಥೆ
ಉಡುಪಿ : ಕರ್ನಾಟಕ ಖಾಸಗಿ ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ದಂತವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್–ಕೆ)ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕಾಗಿ ರಾಷ್ಟ್ರ ಮಟ್ಟದಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ನೊಂದಿಗೆ…
ವಿಧಾನ ಪರಿಷತ್ ಸ್ಥಾನಕ್ಕೆ ಬಂಡಾಯ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ
ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಆದೇಶದಲ್ಲಿ ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ…
