ಮಣಿಪುರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಎಲ್ಲಾ ಎಫ್‌ಐಆರ್ ಸಿಬಿಐಗೆ ವರ್ಗಾವಣೆ
ನವದೆಹಲಿ: ಮಣಿಪುರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಎಲ್ಲಾ ಎಫ್‌ಐಆರ್‌ಗಳನ್ನು ಕೇಂದ್ರೀಯ ತನಿಖಾ ದಳಕ್ಕೆ ವರ್ಗಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಮತ್ತು ಮಣಿಪುರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕಲಹ ಪೀಡಿತ ಮಣಿಪುರದ ಕಾನೂನು…
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಎಂ ಪ್ರಗತಿ ಪರಿಶೀಲನಾ ಸಭೆ: ಆರೋಗ್ಯ ಸೂಚ್ಯಂಕದಲ್ಲಿ 18ನೇ ಸ್ಥಾನಕ್ಕೆ ಕುಸಿದ ಉಡುಪಿ ಜಿಲ್ಲೆ: ಡಿಎಚ್ ಓ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
ಉಡುಪಿ: 2015 ರಲ್ಲಿ ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈಗ 18 ನೇ ಸ್ಥಾನದಲ್ಲಿರುವುದಕ್ಕೆ, ತಾಯಂದಿರು ಮತ್ತು ಮಕ್ಕಳ ಸಾವಿನ ಪ್ರಮಾಣದಲ್ಲಿ ಏರಿಕೆಯಾಗಿರುವುಕ್ಕೆ ಸಿಟ್ಟಾದ ಸಿಎಂ ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಉಡುಪಿ ಸುಶಿಕ್ಷಿತರ ಜಿಲ್ಲೆ, ಆರೋಗ್ಯ ಸೂಚ್ಯಂಕದಲ್ಲಿ…
ಬೆಂಗಳೂರು : ಬಂಧಿತ ಐವರು ಶಂಕಿತ ಉಗ್ರರಿಗೆ ಜುನೈದ್ ಸಂಪರ್ಕ : ತನಿಖೆಯಲ್ಲಿ ಬಹಿರಂಗ
ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿರುವ ಐವರು ಶಂಕಿತ ಉಗ್ರರಿಗೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜುನೈದ್ ಸೇರಿದಂತೆ ಇನ್ನೂ ಹಲವರೊಂದಿಗೆ ಸಂಪರ್ಕವಿರುವುದು ತನಿಖೆಯ ವೇಳೆ ಬಯಲಾಗಿದೆ.. ಹೀಗಾಗಿ ಇವರ ಸಂಪರ್ಕ ಜಾಲ ಭೇದಿಸುವ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ನಗರ…
ಕರಾವಳಿ ಜಿಲ್ಲೆಗಳಿಗೆ ಸಿಎಂ ಪ್ರಥಮ ಭೇಟಿ: ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ
ಮಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಸಿಎಂ ಸಿದ್ದರಾಮಯ್ಯ ಕರಾವಳಿ ಜಿಲ್ಲೆಗಳಿಗೆ ತಮ್ಮ ಮೊದಲ ಭೇಟಿ ನೀಡಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕರಾವಳಿ ಜಿಲ್ಲೆಗಳಲ್ಲಿ ನೈತಿಕ ಪೊಲೀಸಿಂಗ್ ನಡೆಯುತ್ತಿದೆ,ಇದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದ್ದು ಯಾವುದೇ ಕಾರಣಕ್ಕೂ ನೈತಿಕ…
ಗ್ಯಾರಂಟಿಗಾಗಿ ಪರಿಶಿಷ್ಟರ ಅನುದಾನಕ್ಕೆ ಕನ್ನ ಹಾಕಿದ ಸರ್ಕಾರ? ಪರಿಶಿಷ್ಟರ ಅಭಿವೃದ್ಧಿಗಾಗಿ ಬಳಕೆಯಾಗಬೇಕಿದ್ದ 11 ಸಾವಿರ ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಬಿಜೆಪಿ ಆರೋಪ
ಬೆಂಗಳೂರು:ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಾದ ನಿಧಿಯಿಂದ 11 ಸಾವಿರ ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ತನ್ನ ಐದು ಗ್ಯಾರಂಟಿ ಯೋಜನೆಗಾಗಿ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲು ಹರಸಾಹಸ…
ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ
ನವದೆಹಲಿ :ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಇಳಿಸಿದ್ದು, 19ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ (99.75 ರೂಪಾಯಿ) ಅಂದಾಜು 100 ರೂಪಾಯಿ ಇಳಿಕೆಯಾಗಿದೆ. ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ…
ತುಮಕೂರು: ತಾಯಿ ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಮಗ ನೇಣಿಗೆ ಶರಣು
ತುಮಕೂರು : ತಾಯಿ ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಮಗನೊಬ್ಬ ನೇಣಿಗೆ ಶರಣಾಗಿರುವ ದುರ್ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿಹಳ್ಳಿಯಲ್ಲಿ ನಡೆದಿದೆ. ಗ್ರಾಮದ ನಿಖಿಲ್ ಗೌಡ (18) ನೇಣಿಗೆ ಶರಣಾಗಿರುವ ಯುವಕ. ಅಶಾ ಕಾರ್ಯಕರ್ತೆಯಾಗಿರುವ ಲಕ್ಷ್ಮಮ್ಮ ಎಂಬಾಕೆಯ ಮಗ…
ಮೂಲ್ಕಿ: 33ನೇ ವರ್ಷದ ತಾಳಮದ್ದಳೆ ಸಪ್ತಾಹ-2023
ಮೂಲ್ಕಿ: ಯಕ್ಷಲಹರಿ-ಯುಗಪುರುಷ ಸಂಯೋಜನೆಯೊAದಿಗೆ 33ನೇ ವರ್ಷದ ತಾಳಮದ್ದಳೆ ಸಪ್ತಾಹ 2023 “ಚರಿತಂ ಮಹಾತ್ಮನಃ” ಗೆ ಯುಗಪುರುಷ ಸಭಾಭವನದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ…
ಚಂದ್ರಯಾನ-3: ಭೂಮಿಯ ಕಕ್ಷೆಯನ್ನು ತೊರೆದು ಚಂದ್ರನತ್ತ ಹೊರಟ ಬಾಹ್ಯಾಕಾಶ ನೌಕೆ
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಂಗಳವಾರ ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಭೂಮಿಯ ಕಕ್ಷೆಯಿಂದ ಯಶಸ್ವಿಯಾಗಿ ಹೊರತೆಗೆದು ಚಂದ್ರನ ಕಕ್ಷೆಗೆ ಕಳುಹಿಸಿದೆ. ಚಂದ್ರಯಾನ-3 ಭೂಮಿಯ ಕಕ್ಷೆಯ ಸುತ್ತನ್ನು ಪೂರ್ಣಗೊಳಿಸಿದೆ ಮತ್ತು ಈಗ ಅದು ಚಂದ್ರನ ಕಡೆಗೆ ಚಲಿಸುತ್ತಿದೆ ಎಂದು ಇಸ್ರೋ…
ಮಂಗಳೂರು : ಸಿಪಿಐಎಂ ವತಿಯಿಂದ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರ
ಮಂಗಳೂರು :ಸೈದ್ಧಾಂತಿಕ ತಿಳುವಳಿಕೆ ಹಾಗೂ ಚಳುವಳಿ ವಿಸ್ತರಣೆಗಾಗಿ ಆಯ್ದ ಪ್ರಮುಖ ಸಂಗಾತಿಗಳಿಗೆ ಸಿಪಿಐಎಂ ಆಯೋಜಿಸಿದ ಎರಡು ದಿನಗಳ ಕಾಲದ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರವನ್ನು ಹಿರಿಯ ಮಾರ್ಕ್ಸ್ ವಾದಿ ಚಿಂತಕರಾದ ಡಾ.ರಾಜೇಂದ್ರ ಉಡುಪರವರು ಜಾಗತಿಕ ಸನ್ನಿವೇಶಗಳನ್ನು ವಿವರಿಸುವ ಮೂಲಕ ಉದ್ಘಾಟಿಸಿದರು. ಹಿರಿಯ…
