ಮೇ 9,10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ: ಆಯೋಗ ಆದೇಶ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದು, ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ.…

ನಾಳೆ ಬೆಳಗ್ಗೆ 10 ನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು (ಮೇ.7): ಕರ್ನಾಟಕ SSLC ಫಲಿತಾಂಶ 2023 ಮೇ 8 ರಂದು ಅಂದರೆ ನಾಳೆ ಪ್ರಕಟಗೊಳ್ಳಲಿದೆ. ನಾಳೆ 10 ಗಂಟೆಗೆ SSLC ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ನಾಳೆ 11 ಗಂಟೆಯ…

ಸೋಲಿನ ಭಯದಿಂದ ಶಾಸಕರು ಸ್ಟಾರ್ ಕ್ಯಾಂಪೇನರ್ ಕರೆಸಿಕೊಳ್ಳುವಂತಾಗಿದ್ದು ವಿಪರ್ಯಾಸ: ಶುಭದ್ ರಾವ್

ಕಾರ್ಕಳ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೇರೆ ಕ್ಷೇತ್ರಗಳಿಗೆ ಸ್ಟಾರ್ ಪ್ರಚಾರಕರಾಗಿ ಹೋಗಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಈ ಬಾರಿಯ ಚುನಾವಣೆಯಲ್ಲಿ ಸೋಲಿನ ಭಯದಿಂದ ಸ್ಟಾರ್ ಕ್ಯಾಂಪೇನರ್ ಕರೆಸಿಕೊಳ್ಳುತ್ತಿರುವುದು ವಿಪರ್ಯಾಸ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶುಭದ್ ರಾವ್…

ರೇಟ್​ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ: ಚುನಾವಣಾ ಆಯೋಗದ ನೋಟಿಸ್​ಗೆ ಡಿಕೆ ಶಿವಕುಮಾರ್‌ ಉತ್ತರ

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಕಾಂಗ್ರೆಸ್ ಪಕ್ಷ ನೀಡಿರುವ ಜಾಹಿರಾತು ಇದೀಗ ವಿವಾದಕ್ಕೊಳಗಾಗಿದೆ. ಕಾಂಗ್ರೆಸ್ ಪಕ್ಷದ ಜಾಹಿರಾತನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಕಾಂಗ್ರೆಸ್…

ಖಲಿಸ್ತಾನಿ ಉಗ್ರ ಪರಮ್​ಜಿತ್ ಸಿಂಗ್​ನನ್ನು ಗುಂಡಿಕ್ಕಿ ಹತ್ಯೆ: ವಾಕಿಂಗ್​ ತೆರಳಿದ್ದಾಗ ಅಪರಿಚಿತ ಬಂದೂಕುಧಾರಿಗಳಿಂದ ಗುಂಡಿನ ದಾಳಿ

ಲಾಹೋರ್ : ಖಲಿಸ್ತಾನಿ ಉಗ್ರ ಪರಮ್​ಜಿತ್ ಸಿಂಗ್​ನನ್ನುಲಾಹೋರ್ ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವಾಂಟೆಡ್ ಖಲಿಸ್ತಾನಿ ಭಯೋತ್ಪಾದಕ ಪರಮ್​ಜಿತ್ ಸಿಂಗ್​ ಬೆಳಗ್ಗೆ ವಾಕಿಂಗ್​ ತೆರಳಿದ್ದಾಗ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. 63 ವರ್ಷದ ಸಿಂಗ್ ಖಲಿಸ್ತಾನ್ ಕಮಾಂಡೋ…

ರಾಜ್ಯದಲ್ಲಿ 3 ದಿನ ಮದ್ಯ ಮಾರಾಟ ನಿಷೇಧ: ನೆರೆ ರಾಜ್ಯಗಳಿಂದ ಸರಬರಾಜು ಆಗದಂತೆ ಹದ್ದಿನ ಕಣ್ಣು

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮೇ.13ರಂದು ಮತಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ . ಮೇ 8ರ ಮಧ್ಯರಾತ್ರಿಯಿಂದ ಮೇ10 ರ ಮಧ್ಯರಾತ್ರಿಯವರೆಗೂ ಮದ್ಯ ಅಂಗಡಿಗಳನ್ನು ಬಂದ್…

ಕಾರ್ಕಳದಲ್ಲಿ ಯೋಗಿಗೂ ತಟ್ಟಿದ ಚುನಾವಣೆ ನೀತಿ ಸಂಹಿತೆ ಬಿಸಿ!: ಚುನಾವಣಾ ಅಧಿಕಾರಿಗಳಿಂದ ಯೋಗಿ ಆದಿತ್ಯನಾಥ್ ಹೆಲಿಕಾಪ್ಟರ್ ತಪಾಸಣೆ

ಕಾರ್ಕಳ:ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರ ಸಭೆಗಳಿಗೆ ಭಾಗವಹಿಸಲು ಕರ್ನಾಟಕಕ್ಕೆ ಬಂದಿದ್ದು ಕಾರ್ಕಳದಲ್ಲಿ ಅವರಿಗೆ ಚುನಾವಣೆ ನೀತಿ ಸಂಹಿತೆ ಬಿಸಿ ತಟ್ಟಿದೆ. ಸಿಎಂ ಯೋಗಿ ಪುತ್ತೂರಿನಿಂದ ಹೆಲಿಕಾಪ್ಟರ್ ಮೂಲಕ ಕಾರ್ಕಳಕ್ಕೆ ಬಂದಿಳಿದ ಸಂದರ್ಭದಲ್ಲಿ ಚುನಾವಣಾಧಿಕಾರಿಗಳು ಹೆಲಿಕಾಪ್ಟರ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:07.05.2023,ಭಾನುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷ‌ಮಾಸ, ಕೃಷ್ಣಪಕ್ಷ, ನಕ್ಷತ್ರ:ಅನುರಾಧ,ರಾಹುಕಾಲ -05:12 ರಿಂದ 06:46 ಗುಳಿಕಕಾಲ-03:37 ರಿಂದ 05:12 ಸೂರ್ಯೋದಯ (ಉಡುಪಿ) 06:08 ಸೂರ್ಯಾಸ್ತ – 06:46 ರಾಶಿ ಭವಿಷ್ಯ: ಮೇಷ(Aries): ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ.…

ಫೋಟೋ ಎಡಿಟ್‌ ಮಾಡಿ ಅವಮಾನ: ಖಾಸಗಿ ಸುದ್ದಿ ವಾಹಿನಿ ಮಾಲಕನ ವಿರುದ್ಧ ಮಹಿಳೆ ದೂರು

ಕಾರ್ಕಳ: ಖಾಸಗಿ ಸುದ್ದಿವಾಹಿನಿ ಮಾಲಕ ಮಹಿಳೆಯೊಬ್ಬರ ಫೋಟೋ ಎಡಿಟ್‌ ಮಾಡಿ ಪ್ರಸಾರ ಮಾಡಿ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್‌ ಬೆಂಬಲಿತ ಕೆಲವು ವ್ಯಕ್ತಿಗಳು ಮತ್ತು ಇತರರು ಸೇರಿ ಕಾರ್ಕಳದ…

ಟೆಂಡರ್ ವಾಹನದ ಬಾಡಿಗೆಯಲ್ಲಿ ಶಾಸಕ ಸುನಿಲ್ ಕುಮಾರ್ ಭ್ರಷ್ಟಾಚಾರ ಎಸಗಿದ್ದಾರೆ: ಆರೋಪ ಸುಳ್ಳಾದರೆ ಪ್ರಮಾಣ ಮಾಡಲಿ: ಕಾಂಗ್ರೆಸ್ ಮುಖಂಡ ಶುಭದ್ ರಾವ್

ಕಾರ್ಕಳ: ಕೆಪಿಟಿಸಿಎಲ್ ಗೆ ಗುತ್ತಿಗೆ ಆಧಾರದಲ್ಲಿ ವಾಹನಗಳನ್ನು ಬಾಡಿಗೆ ಪಡೆಯುವ ವಿಚಾರದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಕಾರ್ಕಳ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶುಭದ್ ರಾವ್ ಆರೋಪಿಸಿದ್ದಾರೆ. ಈ ಕುರಿತು ಶನಿವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,…