ಉಡುಪಿ ಬಿಜೆಪಿ ಅಭ್ಯರ್ಥಿಯಾಗಿ ಯಶ್‌ಪಾಲ್ ಸುವರ್ಣ ಕಣಕ್ಕೆ: ಕಂಕಣ ಕಟ್ಟಿ ಕಾರ್ಯಕರ್ತರು ಜೈಕಾರ
ಉಡುಪಿ : ಉಡುಪಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿ, ಬುಧವಾರ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಎ.ಸುವರ್ಣ ಅವರನ್ನು ಪಕ್ಷದ ನೂರಾರು ಕಾರ್ಯಕರ್ತರು ಹುಮ್ಮಸ್ಸಿನಿಂದ ಸ್ವಾಗತಿಸಿದರು. ಹಾರ ಹಾಕಿ ಪಟಾಕಿ…
ಬಿಜೆಪಿಯ 23 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಘಟಾನುಘಟಿ ನಾಯಕರಿಗೆ ಗೇಟ್: ಹೊಸಮುಖಗಳಿಗೆ ಅವಕಾಶ
ನವದೆಹಲಿ: ಬಿಜೆಪಿ ಈಗಾಗಲೇ 189 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಇದೀಗ 23 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ.ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಾಲಿ ಸಚಿವರು ಹಾಗೂ ಶಾಸಕರಿಗೆ ಗೇಟ್ ಪಾಸ್ ನೀಡಿ ಹೊಸಬರಿಗೆ ಅವಕಾಶ ನೀಡುವ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:13.04.2023, ಗುರುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮೀನ:ಮಾಸ,ಕೃಷ್ಣಪಕ್ಷ, ನಕ್ಷತ್ರ:ಪೂರ್ವಾಷಾಢ,ರಾಹುಕಾಲ -02:04 ರಿಂದ 03:37 ಗುಳಿಕಕಾಲ-09:26 ರಿಂದ 10:59 ಸೂರ್ಯೋದಯ (ಉಡುಪಿ) 06:21 ಸೂರ್ಯಾಸ್ತ – 06:41 ರಾಶಿ ಭವಿಷ್ಯ ಮೇಷ(Aries): ಹಣದ ವಿಷಯದಲ್ಲಿ ನೀವು ತಪ್ಪು ಮಾಡಬಹುದು,…
ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಸುನಿಲ್ ಕುಮಾರ್
ಕಾರ್ಕಳ: ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ವಿ.ಸುನಿಲ್ ಕುಮಾರ್ ಹಾಗೂ ಪತ್ನಿ ಪ್ರಿಯಾಂಕ ಸುನಿಲ್ ಕುಮಾರ್ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದುಕೊಂಡರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಅವರ…
ಕಾರ್ಕಳ : ಗ್ಯಾಸ್ ಗೀಸರ್ ನಿಂದ ಬೆಂಕಿ ತಗುಲಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು
ಕಾರ್ಕಳ : ಬಿಸಿ ನೀರಿಗೆ ಅಳವಡಿಸಿದ ಗ್ಯಾಸ್ ಗೀಸರ್‌ನಲ್ಲಿ ಆಕಸ್ಮಿಕ ಬೆಂಕಿ ಬೆಂಕಿ ಹೊತ್ತಿಕೊಂಡು ಸ್ನಾನ ಮಾಡುತ್ತಿದ್ದ ವ್ಯಕ್ತಿಗೆ ತಗುಲಿ ಗಂಭಿರವಾಗಿ ಗಾಯಗೊಂಡಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಇಂದು (ಎ.12) ಮೃತಪಟ್ಟಿದ್ದಾರೆ. ಕಾರ್ಕಳ ವೆಂಕಟರಮಣ ದೇವಸ್ಥಾನದ ಬಳಿಯ ನಿವಾಸಿ ಪ್ರಕಾಶ್ ಮಲ್ಯ(74) ಮೃತಪಟ್ಟವರು.…
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ
ಉಡುಪಿ: ಒಳ್ಳೆಯ ಬರಹಗಾರರು, ಪತ್ರಕರ್ತರು, ಕಲಾವಿದರಿಂದ ಸಮಾಜದ ಗೌರವ ಉಳಿಯಲು ಸಾಧ್ಯ. ಈ ಬಿಕ್ಕಟ್ಟಿನ ಸಂದರ್ಭದಲ್ಲೂ ಪತ್ರಕರ್ತರು ಘನತೆಯನ್ನು ಕಾಪಾಡಿಕೊಳ್ಳುವುದು ಪತ್ರಕರ್ತರಿಗೆ ದೊಡ್ಡ ಸವಾಲಾಗಿದೆ ಎಂದು ಹಿರಿಯ ಸಾಹಿತಿ ವೈದೇಹಿ ಹೇಳಿದರು. ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ…
ವಂಚನೆ ಪ್ರಕರಣ: ಇಂಡಿಯಾ ಮನಿ ಸಿಇಓ ಸುಧೀರ್, ರಘುಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಇಂಡಿಯಾ ಮನಿ ಕಂಪನಿಯ ಸಿಇಓ ಸುಧೀರ್ ಹಾಗೂ ಅವರೊಂದಿಗೆ ರಘು ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ವಂಚನೆ ಪ್ರಕರಣದಲ್ಲಿ ಇಬ್ಬರನ್ನೂ ಬಂಧಿಸಿದ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಇಬ್ಬರಿಗೂ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಬೆಂಗಳೂರಿನ ಬನಶಂಕರಿ ಪೊಲೀಸ್…
ಹೆಬ್ರಿ: “ರಜಾ ಮಜಾ” ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ
ಹೆಬ್ರಿ :ಹೆಬ್ರಿಯ ರಾಪಿಡ್ ಇನ್ಸ್ಟಿಟ್ಯೂಟ್ ಆಪ್ ಅಬಾಕಸ್ ಸಂಸ್ಥೆಯ ವತಿಯಿಂದ ಆಯೋಜಿಸಿದ ರಜಾ ಮಜಾ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆಯು ಹೆಬ್ರಿ ಸಮಾಜ ಮಂದಿರದಲ್ಲಿ ಎ.12ರಂದು ನಡೆಯಿತು. ಹೆಬ್ರಿ ಗ್ರಾಮ ಪಂಚಾಯತ್ ಪಿ. ಡಿ. ಓ ಸದಾಶಿವ ಸೇರ್ವೆಗಾರ್ ಶಿಬಿರದ ಉದ್ಘಾಟಿಸಿ…
ಸಿಎಂ ಬೊಮ್ಮಾಯಿಗೂ ತಟ್ಟಿದ ನೀತಿ ಸಂಹಿತೆ ಎಫೆಕ್ಟ್: ಧರ್ಮಸ್ಥಳದಲ್ಲಿ ಚುನಾವಣಾಧಿಕಾರಿಗಳಿಂದ ಹೆಲಿಕ್ಯಾಪ್ಟರ್ ಪರಿಶೀಲನೆ
ಧರ್ಮಸ್ಥಳ(ದಕ್ಷಿಣ ಕನ್ನಡ):ವಿಧಾನಭಾ ಚುನಾವಣೆಯಲ್ಲಿ ಅಕ್ರಮಗಳು ನಡೆಯದಂತೆ ಅಧಿಕಾರಿಗಳು ಕಣ್ಣಲ್ಲಿ ಎಣ್ಣೆ ಬಿಟ್ಟುಕೊಂಡು ಕಾಯುತ್ತಿದ್ದರೆ, ಇತ್ತ ಮಾದರಿ ಚುನಾವಣಾ ನೀತಿ ಸಂಹಿತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಬಿಟ್ಟಿಲ್ಲ. ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚುನಾವಣಾ ಪ್ರಚಾರಕ್ಕಾಗಿ…
ಕೆ.ಎಸ್. ಈಶ್ವರಪ್ಪ ರಾಜಕೀಯಕ್ಕೆ ನಿವೃತ್ತಿ : ಶಿವಮೊಗ್ಗ ಪಾಲಿಕೆಯ ಬಿಜೆಪಿ ಸದಸ್ಯರು ಸಾಮೂಹಿಕ ರಾಜೀನಾಮೆ!
ಶಿವಮೊಗ್ಗ :ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವುದನ್ನು ವಿರೋಧಿಸಿ ಶಿವಮೊಗ್ಗ ಪಾಲಿಕೆಯ ಬಿಜೆಪಿಯ ಸದಸ್ಯರು ರಾಜೀನಾಮೆ ಸಲ್ಲಿಸಿದ್ದಾರೆ. ಶಿವಮೊಗ್ಗ ಪಾಲಿಕೆಯ ಮೇಯರ್, ಉಪಮೇಯರ್ ಸೇರಿದಂತೆ 19 ಸದಸ್ಯರು ಸಾಮೂಹಿಕ ರಾಜೀನಾಮೆ…
