ಅಜೆಕಾರಿನಲ್ಲಿ ಹಿಂದೂ ಸಂಗಮ ಕಾರ್ಯಕ್ರಮ: ಜಾತಿಗಳ ಆಧಾರದಲ್ಲಿ ಹಿಂದೂಗಳ ಒಗ್ಗಟ್ಟು ಒಡೆಯುವ ಪ್ರಯತ್ನ ನಡೆಯುತ್ತಿದೆ,ಇದರ ವಿರುದ್ಧ ಹಿಂದೂ ಸಮಾಜ ಜಾಗೃತವಾಗಬೇಕಿದೆ : ವಾದಿರಾಜ ಭಟ್, ಗೋಪಾಡಿ

ಅಜೆಕಾರು, ಜ.26: ಹಿಂದೂ ಸಮಾಜ ಎಂದಿಗೂ ದ್ವೇಷವನ್ನು ಉತ್ತೇಜಿಸಿಲ್ಲ, ಯಾರೊಂದಿಗೂ ದ್ವೇಷವನ್ನು ಸಾಧಿಸಿಲ್ಲ.ಸಮಾಜದಲ್ಲಿ ಸಹಬಾಳ್ವೆಯೊಂದಿಗೆ ಜೀವನ‌ ನಡೆಸುತ್ತಿದೆ. ಆದರೆ ಪ್ರಸಕ್ತ ದಿನಗಳಲ್ಲಿ ಹಿಂದೂಗಳಲ್ಲಿನ ಜಾತಿಗಳನ್ನು ಒಡೆಯುವ ಮಹಾಸಂಚು ನಡೆಯುತ್ತಿದೆ,ಇಂತಹ ಪ್ರಯತ್ನದ ವಿರುದ್ಧ ಸಮಸ್ತ ಹಿಂದೂ ಸಮಾಜ ಜಾಗೃತವಾಗಬೇಕಿದೆ ಎಂದು RSS ಕಾರ್ಯವಾಹ…

ಕಾರ್ಕಳ ತಾಲೂಕು ಗಣರಾಜ್ಯೋತ್ಸವ ದಿನಾಚರಣೆ

ಕಾರ್ಕಳ, ಜ. 26: ಕಾರ್ಕಳ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಪುರಸಭೆ ವತಿಯಿಂದ 77ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಾರ್ಕಳ ತಹಶಿಲ್ದಾರ್ ಪ್ರದೀಪ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ ದೇಶ ಹತ್ತಾರು ಜಾತಿ,ಮತ,ಪಂಗಡಗಳನ್ನು…

ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು,ಜ.26: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್ ಮತ್ತು ಸೇನಾಪಡೆಯಿಂದ ಗೌರವ ವಂದನೆ ಸ್ವೀಕರಿಸಿ ತೆರೆದ ಜೀಪ್‌ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಕಾರ್ಯಕ್ರಮದಲ್ಲಿ 1,400 ಶಾಲಾ…

ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಮೈನರ್ ಬಸಿಲಿಕಾದ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭ

ಕಾರ್ಕಳ,ಜ.25: ಇತಿಹಾಸಪ್ರಸಿದ್ಧ ಅತ್ತೂರು ಸಂತ ಲಾರೆನ್ಸ್ ಮೈನರ್ ಬಸಿಲಿಕಾದ ವಾರ್ಷಿಕ ಮಹೋತ್ಸವವು ಬಸಿಲಿಕಾ ಧ್ವಜಾರೋಹಣದ ಮೂಲಕ ಭಕ್ತಿಭಾವ ಮತ್ತು ಭವ್ಯತೆಯಿಂದ ಭಾನುವಾರ ಆರಂಭಗೊಂಡಿತು. ಈ ವರ್ಷದ ಮಹೋತ್ಸವವು ವಿಶೇಷ ಮಹತ್ವ ಹೊಂದಿದ್ದು, ಬಸಿಲಿಕಾಗೆ ಮೈನರ್ ಬಸಿಲಿಕಾ ಪದವಿ ಲಭಿಸಿದ 10ನೇ ವರ್ಷದ…

ಆರ್ಎಚ್ಇಎಪಿ-2025 ವಿಚಾರ ಸಂಕಿರಣದಲ್ಲಿ ನಿಟ್ಟೆ ಸಹಪ್ರಾಧ್ಯಾಪಕ ಡಾ. ಭೋಜರಾಜ್ ಬಿ.ಇ. ಅವರಿಗೆ ಪ್ರಶಸ್ತಿ

ಕಾರ್ಕಳ,ಜ.25: ಇತ್ತೀಚೆಗೆ ಸುರತ್ಕಲ್ ನ ಎನ್.ಐ.ಟಿ.ಕೆ ಯಲ್ಲಿ ನಡೆದ ನದಿ ಆರೋಗ್ಯ ಮೌಲ್ಯಮಾಪನ ಮತ್ತು ಸಂರಕ್ಷಣೆ ಕುರಿತ ವಿಚಾರ ಸಂಕಿರಣದಲ್ಲಿ ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕ ಡಾ. ಭೋಜರಾಜ್ ಬಿ.ಇ. ಅವರು ರಿಮೋಟ್ ಸೆನ್ಸಿಂಗ್…

ಅತ್ತೂರು-ಕಾರ್ಕಳದ ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಭಾತೃತ್ವದ ದಿನ  ಆಚರಣೆ

ಕಾರ್ಕಳ, ಜ.25: ಅತ್ತೂರು-ಕಾರ್ಕಳದ ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಶನಿವಾರ ಭಾತೃತ್ವದ ದಿನವನ್ನು ಭಕ್ತಿಪೂರ್ಣವಾಗಿ ಆಚರಿಸಲಾಯಿತು. ಈ ದಿವ್ಯ ಬಲಿಪೂಜೆಯನ್ನು ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ, ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಬಿಜೈ ಸಂತ ಫ್ರಾನ್ಸಿಸ್ ಜೇವಿಯರ್ ದೇವಾಲಯದ ಧರ್ಮಗುರುಗಳು ಪ್ರಧಾನ ಧರ್ಮಗುರುಗಳಾಗಿ…

ಕಾರ್ಕಳದಲ್ಲಿ ಅಕ್ರಮ‌ ಕಲ್ಲು ಗಣಿ ಮಾಫಿಯಾ: ಎಗ್ಗಿಲ್ಲದೇ ನಡೆಯುತ್ತಿರುವ ಗಣಿಗಾರಿಕೆ ಸ್ಪೋಟಕ್ಕೆ ಜನರ ಬದುಕೇ ಅತಂತ್ರ: ಅಕ್ರಮಕ್ಕೆ ಅಧಿಕಾರಿಗಳ ಶ್ರೀರಕ್ಷೆ: ಗ್ರಾಮಸ್ಥರ ಗಂಭೀರ ಆರೋಪ

ಕಾರ್ಕಳ,ಜ.24: ಅಕ್ರಮ ಕಲ್ಲು ಗಣಿಗಾರಿಕೆಯಿಂದ ಕಾರ್ಕಳ ತಾಲೂಕಿನ ಜನರ ಬದುಕೇ ಅತಂತ್ರವಾಗಿದೆ.ಕಾರ್ಕಳ ತಾಲೂಕಿನೆಲ್ಲೆಡೆ ಪ್ರಭಾವಿ ವ್ಯಕ್ತಿಗಳ ಅಕ್ರಮ ಕಲ್ಲು ಗಣಿಗಾರಿಕೆ ದಂಧೆ ಮಿತಿಮೀರಿದ್ದು, ಕಂಡಕಂಡ ಸರ್ಕಾರಿ ಜಾಗದಲ್ಲಿ ಕಲ್ಲು ತೆಗೆಯುವ ಕೆಲಸ ರಾಜಾರೋಷವಾಗಿ ನಡೆಯುತ್ತಿದೆ. ದುರಂತ ಎಂದರೆ ಅಕ್ರಮ ಗಣಿಗಾರಿಕೆಗೆ ಅಧಿಕಾರಗಳ…

ಕಾರ್ಕಳ: ಬಿಜೆಪಿ ವತಿಯಿಂದ ಬೂತ್ ಮಟ್ಟದ ಏಜೆಂಟ್ ಗಳ ಕಾರ್ಯಾಗಾರ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯಿಂದ ಕಾಂಗ್ರೆಸ್‌ ಗೆ ‘ವೋಟ್ ಚೋರಿ’ ಗೆ ಆತಂಕ : ಶಾಸಕ ಸುನಿಲ್ ಕುಮಾರ್

ಕಾರ್ಕಳ,ಜ.24: ಚುನಾವಣಾ ಆಯೋಗವು ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿರುವುದರಿಂದ ಕಾಂಗ್ರೆಸ್‌ನ ‘ವೋಟ್ ಚೋರಿ’ ಮಾಡುವವರಿಗೆ ಆತಂಕ ಶುರುವಾಗಿದೆ ಎಂದು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಕಾರ್ಕಳದ ಖಾಸಗಿ ಹೊಟೇಲ್ ನಲ್ಲಿ ನಡೆದ…

ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಸೂಚನೆ

ಬೆಂಗಳೂರು, ಜನವರಿ 24: ಇನ್ನುಮುಂದೆ ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ದೂರವಾಣಿ ಕರೆಗಳನ್ನು ಕಡ್ಡಾಯವಾಗಿ ಸ್ವೀಕರಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಈ ವಿಚಾರವಾಗಿ ಸುತ್ತೋಲೆ ಹೊರಡಿಸಿರುವ…

ಬಾಂಗ್ಲಾ ಅಕ್ರಮ ವಲಸಿಗರ ಪತ್ತೆ ಮಾಡಿದ್ದಕ್ಕೆ ಪೊಲೀಸರಿಂದಲೇ ಕಿರುಕುಳ ಆರೋಪ: ವಿಧಾನಸೌಧ ಎದುರೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು,ಜ.24: ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಮಾಡಿದ್ದಕ್ಕೆ ಪೊಲೀಸರೇ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಡಾ. ನಾಗೇಂದ್ರ ಎಂಬವರು ವಿಧಾನಸೌಧದ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಅವರನ್ನು ಬೌರಿಂಗ್ ಆಸ್ಪತ್ರೆಗೆ ಸೇರಿಸಿದ್ದಾರೆ. ವೈದ್ಯರ ಪ್ರಕಾರ ಡಾ.…