ಮನೆ ಹಂಚಿಕೆ ವಿಚಾರದಲ್ಲಿ ಶಾಸಕರ ನಿರ್ಲಕ್ಷ್ಯದ ಆರೋಪದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ನಿರ್ಧಾರ: ರಾಜಕೀಯ ಬೀದಿ ನಾಟಕ ನಿಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ: ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಸಲಹೆ
ಕಾರ್ಕಳ, ಸೆ.10: ಅಧಿಕಾರಿಗಳೊಂದಿಗೆ ಶಾಸಕರ ಮೀಟಿಂಗ್ ದಿನಾಂಕ ನಿಗದಿಯಾದ ತಕ್ಷಣವೇ ಕಾರ್ಕಳ ಕಾಂಗ್ರೆಸ್ ಮತ್ತು ಅವರ ನಾಯಕ ಉದಯ ಶೆಟ್ಟಿಯವರು ನಿದ್ದೆಯಿಂದ ಎದ್ದಂತೆ ವರ್ತಿಸುವುದು ಇದೇನು ಹೊಸತಲ್ಲ. ಜನರಿಂದ ತಿರಸ್ಕರಿಸಲ್ಪಟ್ಟ ನಾಯಕರುಗಳು ತಮ್ಮ ಅಸ್ತಿತ್ವಕ್ಕಾಗಿ ಜನಪರ ಕೆಲಸ ಮಾಡುವುದನ್ನು ಬಿಟ್ಟು ರಾಜಕೀಯ…
ಕಾರ್ಕಳ BEO ಗಿರಿಜಮ್ಮ ಹಾಗೂ ಸಮನ್ವಯಾಧಿಕಾರಿ ಇಂದಿರಾ ಭಟ್ ಅವರಿಗೆ ಸನ್ಮಾನ
ಕಾರ್ಕಳ, ಸೆ.10: ಜೇಸಿಐ ಕಾರ್ಕಳ ರೂರಲ್ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ S.R ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿ ಇಂದಿರಾ ಭಟ್ ಅವರನ್ನು ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ JCI ರೂಲರ್ ನ ಅಧ್ಯಕ್ಷ ಜೇಸಿ…
ಮಂಗಳೂರಿನ ಸಂಪುಟದ ಸಭೆಯಲ್ಲಿ ಮಲೆಕುಡಿಯ ಸಮುದಾಯದ ಮೂಲಸೌಕಾರ್ಯಗಳಿಗೆ ಒತ್ತು ನೀಡಬೇಕು: ಶ್ರೀಧರ ಗೌಡ ಈದು
ಕಾರ್ಕಳ, ಸೆ.10: ಇತಿಹಾಸದಲ್ಲಿ ಪ್ರಥಮ ಬಾರಿಗೆ ಬೆಂಗಳೂರು ಹೊರತುಪಡಿಸಿ ಕರಾವಳಿಯ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಿರುವುದು ಸ್ವಾಗತಾರ್ಹ.ಕರಾವಳಿ ಭಾಗದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವಲ್ಲಿ ಸಂಪುಟ ಮಹತ್ವದ ನಿರ್ಣಯ ಕೈಗೊಳ್ಳಬೇಕಿದೆ.ಇದರ ಜೊತೆಗೆ ಕಳೆದ ಹಲವು…
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ: ಚಾರಿತ್ರ್ಯವಂತ ಮಕ್ಕಳೇ ಹೆತ್ತವರಿಗೆ ಆಸ್ತಿ: ಸುಮಂತ್ ಕುಮಾರ್ ಜೈನ್
ಕಾರ್ಕಳ ,ಸೆ.10: ವಿದ್ಯಾರ್ಥಿಗಳು ಉತ್ತಮ ಚಾರಿತ್ರ್ಯವನ್ನು ರೂಡಿಸಿಕೊಳ್ಳಿ, ಜೀವನದಲ್ಲಿ ಎಲ್ಲಕ್ಕಿಂತ ಮಿಗಿಲಾದುದು ಚಾರಿತ್ರ್ಯ. ಉತ್ತಮ ಚಾರಿತ್ರ್ಯವುಳ್ಳ ಮಕ್ಕಳೇ ಹೆತ್ತವರಿಗೆ ಆಸ್ತಿ. ಇಂತಹ ಮಕ್ಕಳನ್ನು ಪಡೆದ ಪೋಷಕರೇ ಧನ್ಯರು ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಹೇಳಿದರು. ಅವರು…
ಕಾರ್ಕಳ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಹಿನ್ನಲೆಯಲ್ಲಿ ಸಾರ್ವಜನಿಕರೊಂದಿಗೆ ಶಾಂತಿ ಸಭೆ
ಕಾರ್ಕಳ ,ಸೆ.10: ಗಣೇಶ ಚತುರ್ಥಿ ಹಬ್ಬಕ್ಕೆ ಇನ್ನು ನಾಲ್ಕೇ ದಿನ ಬಾಕಿಯಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಎಎಸ್ಪಿ ಇಷಿತಾ ಗುಪ್ತಾ ನೇತೃತ್ವದಲ್ಲಿ ಸಾರ್ವಜನಿಕರೊಂದಿಗೆ ಶಾಂತಿ ಸಭೆ ನಡೆಯಿತು. ಗಣೇಶ…
ನಕಲಿ ವೆಬ್‌ಸೈಟ್ ಮೂಲಕ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಭಕ್ತರಿಗೆ ವಂಚನೆ: ಪ್ರಕರಣ ದಾಖಲು
ಉಡುಪಿ,ಸೆ.10: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ರೂಂ ಬುಕ್ ಮಾಡುವ ಭಕ್ತರನ್ನು ವಂಚಿಸಲು ನಕಲಿ ವೆಬ್‌ಸೈಟ್ ರಚಿಸಲಾಗಿದೆ ಎಂಬ ಆರೋಪದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ದೂರು ನೀಡಿದ್ದು,…
ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ
ಕಾರ್ಕಳ,ಸೆ.10: ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ 14 ಮತ್ತು 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ 2026-27ನೇ ಸಾಲಿನ ಕರಾಟೆ ಸ್ಪರ್ಧೆಯು…
2027ರಲ್ಲಿ ಫೆ.18 ರಿಂದ ಕಾರ್ಕಳ ಬಾಹುಬಲಿ ಮಹಾ ಮಸ್ತಕಾಭಿಷೇಕ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಅನುದಾನ ಬಿಡುಗಡೆಗೆ ಸಿಎಂ ಡಿಕೆ ಶಿವಕುಮಾರ್ ಗೆ ಶಾಸಕ ಸುನಿಲ್ ಕುಮಾರ್ ಮನವಿ
ಕಾರ್ಕಳ,ಸೆ.09: ಕಾರ್ಕಳ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಮುಂಬರುವ ಐತಿಹಾಸಿಕ ಬಾಹುಬಲಿ ಮಹಾಮಸ್ತಕಾಭಿಷೇಕದ ಸಿದ್ಧತೆ ಕುರಿತು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುದೀರ್ಘವಾಗಿ…
ಉಡುಪಿ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಮಣಿಪಾಲ ಜ್ಞಾನಸುಧಾ ಕಾಲೇಜು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಉಡುಪಿ,ಸೆ.09: ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಫುಟ್‌ಬಾಲ್ ಪಂದ್ಯಾಟವು ಸೆ.8ರಂದು ಮಂಗಳವಾರದAದು ನಡೆಯಿತು. ಮಣಿಪಾಲ ಮಾಹೆಯ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ…
ಸಚಿವ ಸತೀಶ್ ಜಾರಕಿಹೊಳಿ ನಿವಾಸ,ಕಚೇರಿ ಸೇರಿ 17 ಕಡೆಗಳಲ್ಲಿ ಏಕಕಾಲದಲ್ಲಿ ED ಅಧಿಕಾರಿಗಳ ದಾಳಿ: ಮಹತ್ವದ ದಾಖಲೆಗಳ ಪರಿಶೀಲನೆ
ಬೆಂಗಳೂರು,ಸೆ.09: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರ ಮನೆ ಹಾಗೂ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಮುಂಜಾನೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಅನಧಿಕೃತ ಅಬಕಾರಿ ಲೈಸೆನ್ಸ್ ಹಂಚಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ…
