ನವದೆಹಲಿ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾ ಭೇಟಿಯನ್ನು ಅರ್ಧದಲ್ಲೇ ಮೊಟಕುಗೊಳಿಸಿ ದೆಹಲಿಗೆ ಬಂದಿದ್ದು, ಇದೀಗ ಮಹತ್ವದ ಸಭೆ ನಡೆಸಿದ್ದು, ಇಂದು ಸಂಜೆ 6 ಗಂಟೆಗೆ ಭದ್ರತಾ ಕ್ಯಾಬಿನೆಟ್ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಲಿದೆ.
ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ಕಾರ್ಯದರ್ಶಿ ಡಾ. ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಘಟನೆ ಕುರಿತು ಮಾಹಿತಿ ಪಡೆದುಕೊಂಡರು.
ಮAಗಳವಾರ ಮಧ್ಯಾಹ್ನ ಪಹಲ್ಗಾಮ್ ಪಟ್ಟಣದ ಬಳಿಯ ಪ್ರವಾಸಿ ತಾಣದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ್ದು, ಹೆಚ್ಚಾಗಿ ಹೊರ ರಾಜ್ಯಗಳ ಪ್ರವಾಸಿಗರನ್ನು ಕೊಂದಿದ್ದಾರೆ, ಇದು 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಭೀಕರ ದಾಳಿಯಾಗಿದೆ. ಬಲಿಪಶುಗಳಲ್ಲಿ ಕೆಲವು ವಿದೇಶಿ ಪ್ರಜೆಗಳೂ ಸೇರಿದ್ದಾರೆ. ಗಾಯಗೊಂಡ ಹಲವಾರು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ್ದಾರೆ, ಮೃತರಲ್ಲಿ ಹೆಚ್ಚಾಗಿ ಇತರ ರಾಜ್ಯಗಳಿಂದ ಪ್ರವಾಸಕ್ಕೆ ಬಂದವರಾಗಿದ್ದಾರೆ. 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.