ಕಾರ್ಕಳ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅನುಮತಿ ಪಡೆಯದೇ ಹುಬ್ಬಳ್ಳಿಯ ಯುವತಿ ನೇಹಾ ಕೊಲೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ ನಡೆಸಿದ ಸಂಘಟನೆಯ ಮೂವರು ಕಾರ್ಯಕರ್ತರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ ತಾಲೂಕು ಕಚೇರಿ ಬಳಿಯ ಸೃವಜ್ಞ ವೃತ್ತದ ಬಳಿ ಗುಂಪು ಸೇರಿದ ಯುವಕರು ಯಾವುದೇ ಅನುಮತಿ ಪಡೆಯದೇ ಪಂಜಿನ ಮೆರವಣಿಗೆ ನಡೆಸಿ ರಸ್ತೆತಡೆ ನಡೆಸಿ ಸಂಚಾರಕ್ಕೆ ಅಡ್ಡಿಪಡಿಸಿದ್ದು,ಈ ಪ್ರಕರಣದಲ್ಲಿ ಹರ್ಷಿತ್, ಶ್ರೇಯಸ್ ಹಾಗೂ ಗಣೇಶ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ










