Share this news

ಕಾರ್ಕಳ,ಆ 8: ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ರಾಜಕೀಯೇತರ ಸಮಿತಿಯಾಗಿದ್ದು, ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸುವ ಧಾರ್ಮಿಕ ಶ್ರದ್ದೆಯ ಸದುದ್ದೇಶವನ್ನು ಹೊಂದಿ ಅಸ್ತಿತ್ವಕ್ಕೆ ಬಂದಿತ್ತು. ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿಯವರು ಪರಶುರಾಮ ಥೀಮ್ ಪಾರ್ಕ್ ಪುನರ್ ನಿರ್ಮಾಣವಾಗಬೇಕೆಂದು ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ನಮ್ಮ ಸಮಿತಿಯು ಯಾವುದೇ ನಿರ್ಣಯವನ್ನು ಕೈಗೊಂಡರೇ ಕಾನೂನಿನ ತೊಡಕಾಗುವ ಸಾಧ್ಯತೆಯಿದೆ. ಇದರಿಂದ ಉದಯ ಕುಮಾರ್ ಶೆಟ್ಟಿಯವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ತೊಂದರೆಯಾಗುವ ಸಂಭವ ಇರುವುದರಿಂದ ಅವರ ಹೋರಾಟಕ್ಕೆ ಸಂಪೂರ್ಣವಾಗಿ ಬೆಂಬಲವನ್ನು ನೀಡುವ ಉದ್ದೇಶದಿಂದ ಹಿತರಕ್ಷಣಾ ಸಮಿತಿಯನ್ನು ಬರ್ಖಾಸ್ತುಗೊಳಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ತಿಳಿಸಿದ್ದಾರೆ.

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯ ಎಲ್ಲಾ ಪಧಾಧಿಕಾರಿಗಳು ಮತ್ತು ಸದಸ್ಯರು ಉದಯ ಶೆಟ್ಟಿಯವರ ನಿಲುವಿಗೆ ಮತ್ತು ಕಾನೂನಾತ್ಮಕ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ನೀಡುವ ನಿರ್ಣಯ ಕೈಗೊಂಡು, ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯನ್ನು ಬರ್ಖಾಸ್ತುಗೊಳಿಸಲಾಗಿದೆ ಎಂದು ಕೃಷ್ಣ ಶೆಟ್ಟಿ ಬಜಗೋಳಿ ಸ್ಪಷ್ಟಪಡಿಸಿದ್ದಾರೆ.

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *