Share this news

ಕಾರ್ಕಳ, ಅ. 13:ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ವ್ಯಕ್ತಿತ್ವ ವಿಕಸನ ,ಹಾಜರಾತಿ ಹಾಗೂ ಉಜ್ವಲ ಭವಿಷ್ಯದ ನಿರ್ಮಾಣಕ್ಕೆ ಪೋಷಕರು ಮತ್ತು ಶಿಕ್ಷಕರ ನಡುವಿನ ಸಮನ್ವಯ ಅತ್ಯಗತ್ಯ ಎಂಬ ಆಶಯದೊಂದಿಗೆ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಇಂದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕ–ಶಿಕ್ಷಕರ ಸಭೆ ನಡೆಯಿತು.

 ಸಭೆಯಲ್ಲಿ ಮಾತನಾಡಿದ ಪ್ರಾಂಶುಪಾಲರಾದ , ವಿದ್ವಾನ್ ಗಣಪತಿ ಭಟ್ ರವರು  ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಾಣಿಜ್ಯ ಶಿಕ್ಷಣವು ಅನೇಕ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಅವಕಾಶಗಳಿಗೆ ದಾರಿಯಾಗಿದ್ದು, ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣದ ಹಂತದಿಂದಲೇ ಸ್ಪಷ್ಟ ಗುರಿಯನ್ನು ರೂಪಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು  ಇದು  ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಶಿಕ್ಷಕರ ಮಾರ್ಗದರ್ಶನ, ಪೋಷಕರ ಪ್ರೋತ್ಸಾಹ ಮತ್ತು ವಿದ್ಯಾರ್ಥಿಗಳ ನಿರಂತರ ಪರಿಶ್ರಮ ಪ್ರಮುಖ ಪಾತ್ರ ವಹಿಸುತ್ತವೆ ಎಂದರು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಮತ್ತಷ್ಟು ಉತ್ತಮಪಡಿಸುವುದು, ಅವರಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಭವಿಷ್ಯದ ಶೈಕ್ಷಣಿಕ ಗುರಿಗಳನ್ನು ರೂಪಿಸುವಲ್ಲಿ ಕಾಲೇಜು ಮಹತ್ವದ ಪಾತ್ರವನ್ನು ವಹಿಸುತ್ತಿದೆ ಎಂದರು.

 ಕ್ರಿಯೇಟಿವ್ ನ ಸಹ ಸಂಸ್ಥಾಪಕರಾದ  ಗಣಪತಿ ಭಟ್ ರವರು ಸಂಸ್ಥೆಯಲ್ಲಿ ವಿದ್ಯಾರ್ಥಿಗಳನ್ನು ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಪೂರಕವಾಗಿ ತಯಾರಿ ಮಾಡುತ್ತಿರುವದರ ಬಗ್ಗೆ ಸಮಗ್ರ ಮತ್ತು ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು.ಅಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶವನ್ನು ವಿಶ್ಲೇಷಿಸಿದರು ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ವೃತ್ತಿಪರ ಕೋರ್ಸ್‌ಗಳು ಹಾಗೂ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು. ವಿಶೇಷವಾಗಿ CA Foundation (ಚಾರ್ಟರ್ಡ್ ಅಕೌಂಟೆನ್ಸಿ), CMA, CS, ಬ್ಯಾಂಕಿಂಗ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ಸಿದ್ಧತೆ, ಅಧ್ಯಯನ ಕ್ರಮ, ಸಮಯ ನಿರ್ವಹಣೆ ಹಾಗೂ ನಿರಂತರ ಅಭ್ಯಾಸದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳಲ್ಲಿ ಆರಂಭಿಕ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಆಸಕ್ತಿ ಮೂಡಿಸಲು ವಿಶೇಷ ತರಬೇತಿ, ಮಾದರಿ ಪರೀಕ್ಷೆಗಳು, ಪ್ರಶ್ನೆಪತ್ರಿಕೆಗಳ ಅಭ್ಯಾಸ ಮತ್ತು ವೃತ್ತಿ ಮಾರ್ಗದರ್ಶನದ ಅಗತ್ಯವನ್ನು ಒತ್ತಿಹೇಳಲಾಯಿತು.

ವಿದ್ಯಾರ್ಥಿಗಳ ಕಲಿಕೆಯಲ್ಲಿ ನಿರಂತರತೆ, ಸಮಯಪಾಲನೆ, ಶಿಸ್ತು, ನಿಯಮಿತ ಹಾಜರಾತಿ ಮತ್ತು ಪರೀಕ್ಷಾ ಸಿದ್ಧತೆ ಮಹತ್ವದ ಪಾತ್ರ ವಹಿಸುತ್ತವೆ. ಈ ಅಂಶಗಳ ಕುರಿತು ಪೋಷಕರಿಗೆ ಮಾಹಿತಿ ನೀಡಿ, ಮನೆಯಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸುವಂತೆ ತಿಳಿಸಲಾಯಿತು. ವಿದ್ಯಾರ್ಥಿಗಳ ಅಂಕಗಳ ಜೊತೆಗೆ ಅವರ ಆತ್ಮವಿಶ್ವಾಸ, ನೈತಿಕ ಮೌಲ್ಯಗಳು, ಸಾಮಾಜಿಕ ಜವಾಬ್ದಾರಿ ಹಾಗೂ ಮಾನಸಿಕ ಬೆಳವಣಿಗೆಗೂ ಆದ್ಯತೆ ನೀಡಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತು.

 

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *