Share this news

ಬೆಂಗಳೂರು : ಈ ಸಲದ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗುವಂತೆ SSLC ಹಾಗೂ PUC ಪರೀಕ್ಷಾ ಪದ್ಧತಿಯಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆಗೆ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪಾಸಾಗಲು ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಎರಡೂ ಸೇರಿ ಶೇ.33 ಅಂಕಕ್ಕೆ ಇಳಿಸಿ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ನೀಡಿದೆ.
ಈ ನಿಯಮಾವಳಿ ಪ್ರಕಾರ ಪ್ರತೀ ವಿಷಯದಲ್ಲಿ ಆಂತರಿಕ ಮೌಲ್ಯಮಾಪನದಲ್ಲಿ ಶೇ.20ಕ್ಕೆ 20 ಅಂಕ ಪಡೆದರೆ ಉಳಿದ 13 ಅಂಕಗಳನ್ನು ಲಿಖಿತ ಪರೀಕ್ಷೆಯಲ್ಲಿ ಪಡೆದರೂ ವಿದ್ಯಾರ್ಥಿ ಪಾಸ್‌, ಶೇ.20ರಷ್ಟು ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಇರುತ್ತದೆ. 625ಕ್ಕೆ 206 ಅಂಕ ಗಳಿಸಿದ ವಿದ್ಯಾರ್ಥಿ, ಬೇರೆ ವಿಷಯದಲ್ಲಿ ಶೇ.30ಕ್ಕಿಂತ ಕಡಿಮೆ ಅಂಕ ಪಡೆದರೂ ಪಾಸ್‌ ಆಗಬಹುದು.
ಸರ್ಕಾರದ ಈ‌ ನಿಯಮಾವಳಿಯಿಂದ ಪರಿಣಾಮ ಬೀರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಮತ್ತು ಅಧಿಕೃತ ಗೆಜೆಟ್ ನಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳವರೆಗೆ ಯಾವುದೇ ವ್ಯಕ್ತಿಯಿಂದ ಮಂಡಳಿಗೆ ಸ್ವೀಕೃತವಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ನೀಡಬಹುದಾಗಿದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, 3 ನೇ ಮಹಡಿ, 6 ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ಸಲ್ಲಿಸಬಹುದು ಎಂದು ತಿಳಿಸಲಾಗಿದೆ .

ಪಿಯುಸಿ ಪರೀಕ್ಷೆಯ ಅಂಕದಲ್ಲೂ ಇಳಿಕೆ ಮಾಡಲಾಗಿದ್ದು, ಅಭ್ಯರ್ಥಿಯು ಪ್ರತಿ ವಿಷಯದಲ್ಲಿ ಲಿಖಿತ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಅಥವಾ ಪ್ರಾಯೋಗಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಒಳಗೊಂಡಂತೆ ಪ್ರತಿ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ 30% ಅಂಕಗಳನ್ನು ಪಡೆದಲ್ಲಿ ಹಾಗೂ ಎಲ್ಲಾ ವಿಷಯಗಳಲ್ಲಿ ಒಟ್ಟಾರೆಯಾಗಿ 33% ಅಂಕಗಳನ್ನು ಪಡೆದಲ್ಲಿ ಅಂತಹ ಅಭ್ಯರ್ಥಿಯನ್ನು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಘೋಷಿಸಲಾಗುತ್ತದೆ.ಯಾವುದೇ ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನವಿಲ್ಲದ ವಿಷಯಗಳಲ್ಲಿ 80 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಘೋಷಿಸಲು, ಅಭ್ಯರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯಬೇಕಾಗುತ್ತದೆ.
ಈ ಕನಿಷ್ಠ ಅಸಾಧಾರಣ ಸಂದರ್ಭಗಳಲ್ಲಿ ಮತ್ತು ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದ ಷರತ್ತುಗಳಿಗೆ ಒಳಪಟ್ಟು ಸಡಿಲಿಸಬಹುದು ಅಥವಾ ಮಾರ್ಪಡಿಸಬಹುದು.
ಸಿ.ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನ ಇರುವ ವಿಷಯಗಳಲ್ಲಿ, 70 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಅಭ್ಯರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲೂ ಕನಿಷ್ಠ 21 ಅಂಕಗಳನ್ನು ಪಡೆಯಬೇಕು.
ಆದರೆ, ಈ ಕನಿಷ್ಠ ಅಂಕಗಳನ್ನು ಅಸಾಧಾರಣ ಸಂದರ್ಭಗಳಲ್ಲಿ ಮತ್ತು ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದ ಷರತ್ತುಗಳಿಗೆ ಒಳಪಟ್ಟು ಸಡಿಲಿಸಬಹುದು ಅಥವಾ ಮಾರ್ಪಡಿಸಬಹುದು.

ಪ್ರಾಯೋಗಿಕ ಪರೀಕ್ಷೆಗಳಿಗೆ ಸಾಮಾನ್ಯ ಷರತ್ತುಗಳು

ಪ್ರಾಯೋಗಿಕ ಅಂಶವನ್ನು ಹೊಂದಿರುವ ವಿಷಯಗಳಿಗೆ ಸಂಬಂಧಿಸಿದಂತೆ ಸಾಮಾನ್ಯ ಷರತ್ತುಗಳ ಪ್ರಕಾರ, ಪ್ರಾಯೋಗಿಕ ಪರೀಕ್ಷೆಗೆ ಅಸ್ತಿತ್ವದಲ್ಲಿರುವ 30 ಅಂಕಗಳ ಹಂಚಿಕೆಯಿಂದ ವಿಚಲನಗೊಂಡು, ಪ್ರಾಯೋಗಿಕ ಪರೀಕ್ಷೆಯನ್ನು ಗರಿಷ್ಠ 20 ಅಂಕಗಳಿಗೆ ನಡೆಸಲಾಗುವುದು ಮತ್ತು ಉಳಿದ 10 ಅಂಕಗಳನ್ನು ಈ ಕೆಳಗಿನ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗೆ ನೀಡಲಾಗುತ್ತದೆ, ಅವುಗಳೆಂದರೆ ಪ್ರತೀ ವಿಷಯದಲ್ಲೂ (ತಾತ್ವಿಕ ಮತ್ತು ಪ್ರಾಯೋಗಿಕ ತರಗತಿಗಳು ಸೇರಿದಂತೆ) ಕನಿಷ್ಠ 75% ಹಾಜರಾತಿಯನ್ನು ಹೊಂದಿದಲ್ಲಿ, ಅಂತಹ ಅಭ್ಯರ್ಥಿಯು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಅರ್ಹರಾಗುತ್ತಾರೆ.
ಅಭ್ಯರ್ಥಿಯು ಪ್ರತಿಯೊಂದು ಪ್ರಾಯೋಗಿಕ ವಿಷಯಕ್ಕೆ ನಿರ್ದಿಷ್ಟಪಡಿಸಿದ ಕನಿಷ್ಠ ಸಂಖ್ಯೆಯ ಪ್ರಾಯೋಗಗಳನ್ನು ನಿರ್ವಹಿಸಿರಬೇಕು.ಅಭ್ಯರ್ಥಿಯು ಪ್ರಾಯೋಗಿಕ ದಾಖಲೆ ಪುಸ್ತಕಗಳಲ್ಲಿ ನಿರ್ವಹಿಸಿದ ಪುಯೋಗಗಳನ್ನು ದಾಖಲಿಸಿ ಅದನ್ನು ಸಂಬಂಧಿಸಿದ ವಿಷಯದ ಉಪನ್ಯಾಸಕರಿಂದ ದೃಢೀಕರಿಸಿ ಸಲ್ಲಿಸಿರಬೇಕು; ಮತ್ತು ಅಭ್ಯರ್ಥಿಯು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಿರಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.

 

 

Leave a Reply

Your email address will not be published. Required fields are marked *